ಆಂದೋಲನ 50

ಬದನವಾಳು ಖಾದಿ ಕೇಂದ್ರ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮಕ್ಕೆ ೧೯೨೭ರಲ್ಲಿ ಭೇಟಿ ನೀಡಿದ್ದ ಮಹಾತ್ಮಾ ಗಾಂಧಿ ಅವರು ಬದನವಾಳು ನೂಲುವ ಪ್ರಾಂತ್ಯ ಎಂಬ ಕಲ್ಲನ್ನು ಶಿಲಾನ್ಯಾಸ ಮಾಡಿದರು. ಆ ಮೂಲಕ ಬದನವಾಳು ಖಾದಿ ಗ್ರಾಮೋದ್ಯೋಗ ಸಹಕಾರ ಸಂಘ ಎಂಬ ಸಂಸ್ಥೆ ಉದಯಕ್ಕೆ ಕಾರಣರಾದರು. ಆನಂತರ ಬದನವಾಳಿನಲ್ಲಿ ಖಾದಿ ಬಟ್ಟೆ, ಅವಲಕ್ಕಿ, ಎಣ್ಣೆ, ಬೆಂಕಿ ಪೊಟ್ಟಣ, ಕಾಗದ ತಯಾರಿ ಸೇರಿದಂತೆ ೧೪ಕ್ಕೂ ಹೆಚ್ಚು ಬಗೆಯ ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಕಾರ್ಯ ಆರಂಭಗೊಂಡಿತ್ತು. ಮತ್ತೊಮ್ಮೆ

೧೯೩೨ರಲ್ಲಿ ಬದನವಾಳಿಗೆ ಭೇಟಿ ನೀಡಿದ ಗಾಂಧೀಜಿ, ಸುಮಾರು ೭೦೦ಕ್ಕೂ ಹೆಚ್ಚು ಮಂದಿ ಕೆಲಸ ನಿರ್ವಹಿಸುವ ಮೂಲಕ ಗ್ರಾಮೀಣ ಉದ್ಯೋಗಾವಕಾಶದ ಕೇಂದ್ರವಾಗಿದ್ದ ಬದನವಾಳನ್ನು ನೋಡಿ ಖುಷಿಪಟ್ಟಿದ್ದಾರೆ ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಾರೆ.

ಕೈಗಾರಿಕೋದ್ಯಮ ಜಾಸ್ತಿಯಾದಂತೆ ಬದನವಾಳು ಕೇಂದ್ರದಲ್ಲಿ ಚಟುವಟಿಕೆ ಕಡಿಮೆಯಾಗತೊಡಗಿತು. ೧೯೮೬ರ ವೇಳೆ ಮುಚ್ಚುವ ಹಂತಕ್ಕೆ ತಲುಪಿದ್ದ ಬದನವಾಳು ಖಾದಿ ಕೇಂದ್ರವನ್ನು ಹೊಳೆ ನರಸೀಪುರ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಹಸ್ತಾಂತರಿಸುವ ಮೂಲಕ ಪುನಶ್ಚೇತನ ಕಾರ್ಯನಡೆಯಿತು. ಅಂದಿನಿಂದ ನಡೆದುಕೊಂಡು ಬಂದ ಕೇಂದ್ರದಲ್ಲಿ ಇದೀಗ ಒಂದಷ್ಟು ಸುಧಾರಣೆ ಕಂಡುಬಂದಿದ್ದು ೨೦೧೬-೧೭ನೇ ಸಾಲಿನಲ್ಲಿ ಬದನವಳೂ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ೨೦ ಲಕ್ಷ ರೂ.ಗೂ ಹೆಚ್ಚು ಮೊತ್ತದ ನೂಲು ಮತ್ತು ಖಾದಿ ಉತ್ಪನ್ನಗಳ ಮಾರಾಟ ಮಾಡಿ ಗಮನ ಸೆಳೆದಿದೆ.

andolana

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago