ಮೈಸೂರು: ಹಾಲು ಉತ್ಪಾದಕರಿಗೆ ಕೊಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಿ ಹೈನುಗಾರಿಕೆ ಅವಲಂಬಿಸಿರುವ ರೈತರ ನೆರವಿಗೆ ನಿಲ್ಲುವಂತೆ ಸರ್ಕಾರದ ಗಮನ ಸೆಳೆಯಬೇಕು ಎಂದು ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕ ಆರ್.ಚೆಲುವರಾಜು ಹೇಳಿದರು. ತಿ.ನರಸೀಪುರ ಪಟ್ಟಣದಲ್ಲಿ ನಡೆದ ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸರ್ಕಾರ ಹಾಲು ಉತ್ಪಾದಕರಿಗೆ ಮೂರು ರೂ.ನಿಂದ ೫ರೂ.ಗೆ ಪ್ರೋತ್ಸಾಹಧನ ಹೆಚ್ಚಳ ಮಾಡಿ ನಾಲ್ಕು ವರ್ಷಗಳು ಕಳೆದಿವೆ. ಈಗ ರೈತರು ಹಸುಗಳನ್ನು ಸಾಕಿಕೊಂಡು ಹೈನುಗಾರಿಕೆ ನಡೆಸುವುದು ತುಂಬ ಕಷ್ಟಕರವಾಗಿರುವುದರಿಂದ ಸರ್ಕಾರ ಮತ್ತೊಮ್ಮೆ ಪ್ರೋತ್ಸಾಹಧನ ಹೆಚ್ಚಿಸುವ ಕೆಲಸ ಮಾಡಿದರೆ ಅನುಕೂಲವಾಗಲಿದೆ ಎಂದರು. ಮುಂದಿನ ದಿನಗಳಲ್ಲಿ ರಾಜ್ಯಸರ್ಕಾರ ಆಯವ್ಯಯವನ್ನು ಮಂಡಿಸುವ ಕಾರಣ ಹಾಲು ಉತ್ಪಾದಕರ ಪ್ರೋತ್ಸಾಹಧನ ಹೆಚ್ಚಳ ಕುರಿತು ಸರ್ಕಾರದ ಮನಮುಟ್ಟುವಂತೆ ಮಾಡಬೇಕು. ರೈತರ ಬೆನ್ನಿಗೆ ನಿಲ್ಲುವ ಕೆಲಸವನ್ನು ಪತ್ರಿಕೆಗಳು ಮಾಡಬೇಕಾಗಿದೆ ಎಂದು ತಿಳಿಸಿದರು. ಪಿಯುಸಿ ಮುಗಿಸಿ ಮೈಸೂರಿನಲ್ಲಿ ಪದವಿ ಕಾಲೇಜು ಸೇರಿದಾಗ ಆಂದೋಲನ ಬಸ್ ನಿಲ್ದಾಣಗಳನ್ನು ನೋಡಿದ್ದೆ. ನಂತರ, ಪತ್ರಿಕೆಯನ್ನು ಓದಲು ಶುರು ಮಾಡಿದಾಗ ಒಮ್ಮೆ ರಾಜಶೇಖರಕೋಟಿ ಅವರನ್ನು ನೋಡಬೇಕೆಂದು ಅವರ ಮನೆಗೆ ಬಂದಾಗ ನಮ್ಮೊಂದಿಗೆ ಮಾತನಾಡಿದ ಕ್ಷಣವನ್ನು ಎಂದಿಗೂ ಮರೆಯಲಾಗದು. ಅವರ ಭರವಸೆಯ ಮಾತುಗಳಿಂದಾಗಿ ನಮ್ಮಂತಹವರು ಈ ಮಟ್ಟಕ್ಕೆ ಬೆಳೆಯಲು ಪ್ರೇರಣೆ ಮತ್ತು ದಾರಿದೀಪವಾಗಿದೆ ಎಂದು ಸ್ಮರಿಸಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.