Mysore
23
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಕೆ. ಆರ್. ನಗರದಲ್ಲಿಂದು ‘ಆಂದೋಲನ ‘ ಸಂವಾದ

ಕೆ ಆರ್ ನಗರ: ಆಂದೋಲನ ದಿನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕುಗಳ 50 ವರ್ಷಗಳ ಅಭಿವೃದ್ಧಿ ಮುನ್ನೋಟ ಕುರಿತು ಕೆಆರ್ ನಗರದ ಸಾಯಿ ಕನ್ವೆನ್ಷನ್ ಹಾಲ್ ನಲ್ಲಿ ಶುಕ್ರವಾರ ಬೆಳಿಗ್ಗೆ 10:30ಕ್ಕೆ (ಇಂದು) ಸಂವಾದ ಕಾರ್ಯಕ್ರಮ ನಡೆಯಲಿದೆ.

ಕೆ ಆರ್ ನಗರ ಶಾಸಕ, ಮಾಜಿ ಸಚಿವ ಸಾರಾ ಮಹೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವರಾದ ಎಚ್ ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಪುರಸಭೆ ಅಧ್ಯಕ್ಷರಾದ ಕೋಳಿ ಪ್ರಕಾಶ್ ಹಾಗೂ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂದಿನಿ ರಮೇಶ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಡಿ ರವಿಶಂಕರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಅಚ್ಚುತಾ ನಂದ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ ಎನ್ ಬಸಂತ್, ಪ್ರಖ್ಯಾತ ಮೂಳೆ ತಜ್ಞರಾದ ಡಾಕ್ಟರ್ ಮೆಹಬೂಬ್ ಖಾನ್, ರಾಜ್ಯ ರೈತ ಸಂಘದ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾಹಿತಿ, ಪತ್ರಕರ್ತ  ಭೇರ್ಯ ರಾಮಕುಮಾರ್ ಅವರು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ 50 ವರ್ಷಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೆ ವೇಳೆ ಸಾಧಕರಾದ ಕೆ ಎಲ್ ಹೇಮಂತ್ ಕುಮಾರ್, ಹಾಗೂ ಎಚ್ ಆರ್ ನವೀನ್ ಕುಮಾರ್ ಅವರಿಗೆ ಪತ್ರಿಕೆಯಿಂದ ಗೌರವ ಸಲ್ಲಿಸಲಾಗುತ್ತದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ