ಕೆ ಆರ್ ನಗರ: ಆಂದೋಲನ ದಿನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕುಗಳ 50 ವರ್ಷಗಳ ಅಭಿವೃದ್ಧಿ ಮುನ್ನೋಟ ಕುರಿತು ಕೆಆರ್ ನಗರದ ಸಾಯಿ ಕನ್ವೆನ್ಷನ್ ಹಾಲ್ ನಲ್ಲಿ ಶುಕ್ರವಾರ ಬೆಳಿಗ್ಗೆ 10:30ಕ್ಕೆ (ಇಂದು) ಸಂವಾದ ಕಾರ್ಯಕ್ರಮ ನಡೆಯಲಿದೆ.
ಕೆ ಆರ್ ನಗರ ಶಾಸಕ, ಮಾಜಿ ಸಚಿವ ಸಾರಾ ಮಹೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವರಾದ ಎಚ್ ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಪುರಸಭೆ ಅಧ್ಯಕ್ಷರಾದ ಕೋಳಿ ಪ್ರಕಾಶ್ ಹಾಗೂ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂದಿನಿ ರಮೇಶ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಡಿ ರವಿಶಂಕರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಅಚ್ಚುತಾ ನಂದ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ ಎನ್ ಬಸಂತ್, ಪ್ರಖ್ಯಾತ ಮೂಳೆ ತಜ್ಞರಾದ ಡಾಕ್ಟರ್ ಮೆಹಬೂಬ್ ಖಾನ್, ರಾಜ್ಯ ರೈತ ಸಂಘದ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾಹಿತಿ, ಪತ್ರಕರ್ತ ಭೇರ್ಯ ರಾಮಕುಮಾರ್ ಅವರು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ 50 ವರ್ಷಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೆ ವೇಳೆ ಸಾಧಕರಾದ ಕೆ ಎಲ್ ಹೇಮಂತ್ ಕುಮಾರ್, ಹಾಗೂ ಎಚ್ ಆರ್ ನವೀನ್ ಕುಮಾರ್ ಅವರಿಗೆ ಪತ್ರಿಕೆಯಿಂದ ಗೌರವ ಸಲ್ಲಿಸಲಾಗುತ್ತದೆ.
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…