ಆಂದೋಲನ 50

ಗುರಿ ಮೀರಿದ ಸಾಧನೆ ಮಾಡಿದ ಹದಿನಾರು ಪಂಚಾಯಿತಿ

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮ ಪಂಚಾಯಿತಿಯು ಹದಿನಾರು ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ೭ ಸಾವಿರ ಜನ ಸಂಖ್ಯೆಯನ್ನು ಹೊಂದಿದ್ದು, ಒಟ್ಟು ೧೮ ಜನ ಗ್ರಾ.ಪಂ ಚುನಾಯಿತ ಸದಸ್ಯರಿದ್ದಾರೆ. ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು, ಸಿಬ್ಬಂದಿ ಜೊತೆಗೆ ಗ್ರಾಮಸ್ಥರ ಸಹಕಾರದೊಂದಿಗೆ ೨೦೨೧-೨೨ ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ರ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶೇ. ೧೧೦ ರಷ್ಟು ಸಾಧನೆ ಮಾಡಲಾಗಿದೆ.ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಹಾಗು ಸ್ಥಳೀಯ ಶಾಸಕರ ನಿಧಿಯಿಂದ ನೂತನವಾದ ಗ್ರಾಮ ಪಂಚಾಯಿತಿ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು ಸದ್ಯದಲ್ಲೆ ಕಾಮಗಾರಿ ಪೂರ್ಣಗೊಳ್ಳಲಿದೆ. ಗ್ರಾಮದಲ್ಲಿ ಅಂತರ್ಜಲ ಹೆಚ್ಚಿಸುವ ಸಲುವಾಗಿ ಕೆರೆ ಹೂಳೆತ್ತುವ ಕಾಮಗಾರಿ, ಇಂಗು ಗುಂಡಿ ನಿರ್ಮಾಣ, ಕೆರೆ ಪುನಶ್ಚೇತನ ಕಾಮಗಾರಿ ಮಾಡಲಾಗಿದೆ. ರೈತರಿಗೆ ಅನುಕೂಲವಾಗುವಂತೆ ತಮ್ಮ ಜಮೀನುಗಳಲ್ಲಿ ಕೃಷಿಹೊಂಡ, ಬದು ನಿರ್ಮಾಣ, ಗಿಡ ನಡುವ ಕಾಮಗಾರಿ, ಜಮೀನು ಸಮತಟ್ಟು ಕಾಮಗಾರಿ ಮಾಡಲಾಗಿದೆ. ಜಾನುವಾರು/ ಕುರಿ ಸಾಕಾಣಿಗೆ, ಮೀನು ಸಾಕಾಣಿಕೆ ಸಲುವಾಗಿ, ದನದ ಕೊಟ್ಟಿಗೆ, ಮೀನು ಸಾಕಾಣಿಕೆ ಹೊಂಡ, ಕುರಿ ಶೆಡ್ಡು ನಿರ್ಮಾಣ, ವೈಯಕ್ತಿಕ ಶೌಚಾಲಯ ಹಾಗು ಇನ್ನು ಹಲವಾರು ವೈಯಕ್ತಿಕ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.ಓದುಗರಿಗೆ ಸಹಾಯವಾಗಲು ಗ್ರಾಮ ಪಂಚಾಯಿತಿಯ ಗ್ರಂಥಾಲಯವನ್ನು ನವೀಕರಿಸಿ ಡಿಜಿಟಲ್ ಲೈಬ್ರರಿಯನ್ನಾಗಿ ಉನ್ನತಿಕರಿಸಿ ಲೈಬ್ರರಿಗೆ ಪ್ರತ್ಯೇಕವಾಗಿ ಹೊಸ ವೆಬ್ ಸೈಟ್ ರೂಪಿಸಲಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಉಪಯೋಗವಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮದ ಎಲ್ಲಾ ಕುಟುಂಗಳಿಗೆ ಡಸ್ಟ್ ಬಿನ್‌ಗಳನ್ನು ವಿತರಿಸಿ ಕಸ ಸಂಗ್ರಹಣೆ ಮಾಡುವ ಕಾರ್ಯವನ್ನು ಪಂಚಾಯಿತಿಯಿಂದ ಹಮ್ಮಿಕೊಳ್ಳಲಾಗುವುದು.ನರೇಗಾ ಯೋಜನೆ ಅಡಿಯಲ್ಲಿ ರೈತರ ಜಮೀನಿಗೆ ಹೋಗುವ ರಸ್ತೆ ನಿರ್ಮಾಣ, ಮನೆಗಳಲ್ಲಿ ಪೌಷ್ಟಿಕ ತೋಟ ನಿರ್ಮಾಣ ಹಾಗೂ ಮುಂತಾದ ಅಭಿವೃದ್ದಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.

ಗ್ರಾಮದ ಪುರಾತನ ಮಾದಪ್ಪ ದೇವಾಲಯ ವನ್ನು ಪುನರುಜ್ಜೀವಗೊಳಿಸಲಾಗಿದೆ. ಮೈಸೂರು ಹಾಗೂ ನಂಜನಗೂಡು  ತಾಲ್ಲೂಕಿನ ಹಲವು ಗ್ರಾಮಗಳಿಂದ ಜನ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ದೇಗುಲಕ್ಕೆ ಹೊಸ ರೂಪ ನೀಡಿ ರುವುದು ಅವರೆಲ್ಲರಿಗೂ ಸಂತಸ ತಂದಿದೆ.

andolana

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

4 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

5 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

5 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

5 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

6 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

6 hours ago