ಆಂದೋಲನ 50

ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳು

ಕನ್ನಡ ಸಾಹಿತ್ಯದಲ್ಲಿ ‘ದಲಿತ ಮತ್ತು ಬಂಡಾಯ’ ಸಾಹಿತ್ಯವೆಂಬ ಎರಡು ಪ್ರಕಾರಗಳು ಹೊರಹೊಮ್ಮಲು ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳಾದ ದೇವನೂರ ಮಹಾದೇವ ಮತ್ತು ಮುಳ್ಳೂರು ನಾಗರಾಜ್‌ರವರುಗಳೂ ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ಉಲ್ಲೇಖಿಸುವುದು ಸೂಕ್ತ. ದೇವನೂರರ ಸಮಗ್ರ ಸಾಹಿತ್ಯಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದರೆ, ಮುಳ್ಳೂರರು ದೇಶ-ವಿದೇಶಗಳಲ್ಲಿ ತಮ್ಮ ಸಾಹಿತ್ಯ ಕೃಷಿ ಮೂಲಕ ಹೆಸರು ಮಾಡಿದ್ದಾರೆ.

 

‘ಕನಸಿನಲ್ಲಿ ಕರ್ಣ’ ಎಂಬ ಮುಳ್ಳೂರರ ಕವಿತೆ ಗುಜರಾತ್ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಕವನ ಸಂಕಲನದಲ್ಲಿ ಗುಜರಾತಿ ಭಾಷೆಗೆ ತರ್ಜುಮೆಗೊಂಡಿದೆ. ಅಮೆರಿಕಾದ ಜಾನ್ ಆಲಿವರ್ ಪೆರಿ ಎಂಬುವವರು ಸಂಪಾದಿಸಿರುವ ಕವನ ಸಂಕಲನದಲ್ಲಿ ಮುಳ್ಳೂರರ ‘ದಿಲ್ಲಿ ದುರುಗವ್ವನ ಕರಾಳ ಶಾಸನ’ ಕವಿತೆ ಇಂಗ್ಲೀಷ್‌ಗೆ ತರ್ಜುಮೆಗೊಂಡು ಪ್ರಕಟಗೊಂಡಿದೆ.

ಈ ಕವನವನ್ನು ‘ಚಂಪಾ’ ಇಂಗ್ಲಿಷ್‌ಗೆ ತರ್ಜುಮೆ ಮಾಡಿದ್ದಾರೆ. ನಂಜನಗೂಡು ತಾಲ್ಲೂಕಿನ ಈ ಎರಡು ಪ್ರತಿಭೆಗಳು ದೇಶ-ವಿದೇಶಗಳಲ್ಲಿ ಹೆಸರು ಮಾಡುವಲ್ಲಿ ದಲಿತ ಚಳವಳಿ ಹಾಗೂ ಇದರಲ್ಲಿ ‘ಆಂದೋಲನ’ ದಿನಪತ್ರಿಕೆಯ ಪಾತ್ರವೂ ಇದೆ ಎಂಬುದನ್ನು ಉಲ್ಲೇಖಿಸಲು ಖುಷಿಯಾಗುತ್ತದೆ.

andolana

Recent Posts

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

1 min ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

24 mins ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

43 mins ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

3 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

3 hours ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

3 hours ago