ಒಡೆಯರ ಪಾಳ್ಯದ ಬಳಿಯ ಪ್ರವಾಸಿಗರ ನೆಚ್ಚಿನ ತಾಣ
ಹನೂರು: ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದ ಬಳಿ ನಿರ್ಮಿಸಿರುವ ನಿರಾಶ್ರಿತ ಟಿಬೆಟಿಯನ್ನರ ಶಿಬಿರ ಈಗ ಪ್ರವಾಸಿಗರ ನೆಚ್ಚಿನ ತಾಣ.
ದಿನ ಕಳೆದಂತೆ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ರಜಾ ಹಾಗೂ ವಾರಾಂತ್ಯದ ದಿನಗಳಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಇಲ್ಲಿಗೆ ಪ್ರವಾಸಿಗರು ಬರುತ್ತಾರೆ. ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲೇ ಈ ಶಿಬಿರ ಇದೆ. ಟಿಬೆಟ್‌ನಿಂದ 1950ರ ದಶಕದಲ್ಲಿ ವಲಸೆ ಬಂದ ನಿರಾಶ್ರಿತರಿಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು, ಮೈಸೂರು ಜಿಲ್ಲೆಯ ಬೈಲಕುಪ್ಪೆ ಹಾಗೂ ಚಾಮರಾಜನಗರ ಜಿಲ್ಲೆಯ ಒಡೆಯರ ಪಾಳ್ಯ ಬಳಿ ನೆಲೆಯನ್ನು ಕಲ್ಪಿಸಲಾಯಿತು. ಅಂದಿನಿಂದಲೂ ಟಿಬೆಟಿಯನ್ನರು ಸ್ಥಳೀಯರೊಂದಿಗೆ ಸೌಹಾರ್ದಯುತ ಜೀವನ ನಡೆಸುತ್ತಿದ್ದಾರೆ.
ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳ ಪಡುವ ಒಡೆಯರಪಾಳ್ಯ ಗ್ರಾಮಕ್ಕೆ ಅಂಟಿಕೊಂಡಂತೆ ಇರುವ ಶಿಬಿರದಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ವಿಲೇಜ್‌ಗಳನ್ನಾಗಿ ವಿಂಗಡಿಸಲಾಗಿದೆ. ಪ್ರತಿ ವಿಲೇಜ್ ಒಬ್ಬ ಮುಖಂಡರಿದ್ದು, ಇವರೆಲ್ಲರೂ ನಿರಾಶ್ರಿತರ ಶಿಬಿರದ ಆಡಳಿತಾಧಿಕಾರಿಯ ನಿಯಂತ್ರಣದಲ್ಲಿರುತ್ತಾರೆ.
ಈ ಶಿಬಿರ ಇನ್ನೊಂದು ಕಡೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತೆ ಇದೆ. ಇದು ಪ್ರಕೃತಿ ಪ್ರಿಯರು ಭೇಟಿ ನೀಡಲು ಅತ್ಯಂತ ಸೂಕ್ತ ಸ್ಥಳವಾಗಿದೆ. ಶಿಬಿರದಲ್ಲಿ ಏಳು ಬೌದ್ಧ ಮಂದಿರಗಳಿವೆ. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಇಲ್ಲಿ ಬೌದ್ಧ ಭಿಕ್ಕುಗಳಿದ್ದಾರೆ. ಭಿಕ್ಕುಗಳಿಗೆ ವಸತಿ ಶಾಲೆಗಳನ್ನು ತೆರೆದು ಶಿಕ್ಷಣ ನೀಡಲಾಗುತ್ತಿದೆ. ಕಟ್ಟಡಗಳ ವಿನ್ಯಾಸ ಆಕರ್ಷಕವಾಗಿವೆ. ಮಂದಿರದ ಒಳಗಡೆ ಇರುವ ಬುದ್ಧನ ವಿಗ್ರಹಗಳು ಸೂಜಿಗಲ್ಲಿನಂತೆ ಸೆಳೆಯುತ್ತವೆ.
ಇಲ್ಲಿ ಸಿಬಿಎಸ್‌ಇ ಪಠ್ಯಕ್ರಮದ ಶಾಲೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಓದುತ್ತಿದ್ದಾರೆ. ಜತೆಗೆ ಇಲ್ಲಿ ವರ್ಷಕ್ಕೊಮ್ಮೆ ರಾಜ್ಯ ಮಟ್ಟದ ಫುಟ್‌ಬಾಲ್ ಪಂದ್ಯಾವಳಿಯನ್ನೂ ಆಯೋಜಿಸಲಾಗುತ್ತಿದೆ. ಸರ್ಕಾರದ ಅನುದಾನದಲ್ಲಿ ಗುಣಮಟ್ಟದ ರಸ್ತೆ, ವಿದ್ಯುತ್ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಕೃಷಿ ಕಾಲದಲ್ಲಿ ಕೃಷಿ ಚಟು ವಟಿಕೆಯಲ್ಲಿ ತೊಡಗುವ ಇವರು ಉಳಿದ ವೇಳೆ ಹೊರ ರಾಜ್ಯಗಳಿಗೆ ವ್ಯಾಪಾರಕ್ಕೆ ಹೋಗುತ್ತಾರೆ. ಇಲ್ಲಿ ನೆಲೆಸಿರುವ ಜನರ ಬಹುತೇಕ ಮಕ್ಕಳು ಹೊರದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ.
ಕೃಷಿ, ಸಣ್ಣಪುಟ್ಟ ವ್ಯಾಪಾರ, ಧಾರ್ಮಿಕ ಪ್ರವಾಸೋದ್ಯಮವನ್ನು ನಂಬಿ ಬದುಕುತ್ತಿದ್ದೇವೆ. ನಮ್ಮ ಸುತ್ತಲಿನ ಗ್ರಾಮಗಳ ಕನ್ನಡಿಗರ ಜೊತೆ ಸೌಹಾರ್ದಯುತವಾಗಿ ಇದ್ದುಕೊಂಡು ಉತ್ತಮ ಜೀವನ ನಡೆಸುತ್ತಿದ್ದೇವೆ.
-ಗೆಲೆಕ್ ಜುಂಗನೆ, ಆಡಳಿತಾಧಿಕಾರಿ, ಒಡೆಯರಪಾಳ್ಯ
ಬುದ್ದನ ಬೃಹತ್ ಪ್ರತಿಮೆ
ಶಿಬಿರದಲ್ಲಿ ಈಗಾಗಲೇ ಬೌದ್ಧ ಮಂದಿರಗಳು, ಸ್ತೂಪಗಳಿವೆ. ಇಲ್ಲಿ 6 ಕೋಟಿ ರೂ. ವೆಚ್ಚದಲ್ಲಿ 113 ಅಡಿ ಎತ್ತರದ ಧ್ಯಾನಸ್ಥ ಬುದ್ಧನ ಮೂರ್ತಿಯನ್ನು ಸ್ಥಾಪಿಸಲಾಗಿದೆ. ಟಿಬೆಟಿಯನ್ನರೇ ಮ್ಯಾನ್ಮಾರ್ ನಿಂದ ಪ್ರತಿಮೆಯನ್ನು ಇಲ್ಲಿಗೆ ತಂದು ಪ್ರತಿಷ್ಠಾಪಿಸಿದ್ದಾರೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…