ಆಂದೋಲನ 52

ರೈತರ ಸರ್ಕಾರ ರೈತರಿಗಾಗಿ ಸರ್ಕಾರ

• ಸಿದ್ದರಾಮಯ್ಯ ನೇತೃತ್ವದ ಸರ್ಕಾರವು 10 ಲಕ್ಷ ಮಂದಿ ರೈತರಿಗೆ 1,500 ಕೋಟಿ ರೂ.ಗಳಷ್ಟು ಬೆಳೆ ವಿಮೆಯನ್ನು ನೀಡಿದೆ.
• ನೀರಾವರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ 40 ಸಾವಿರ ಕೃಷಿ ಹೊಂಡ ನಿರ್ಮಾಣ.
• 16 ಲಕ್ಷ ಮಂದಿ ರೈತರಿಗೆ ಬೆಳೆ ಸಾಲ ನೀಡಲಾಗಿದೆ.
• 9 ಲಕ್ಷ ಮಂದಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವನ್ನು ನೀಡಲಾಗಿದೆ.
• 12,593 ಹೆಕ್ಟೇರ್ ಪ್ರದೇಶದ ನೀರಾವರಿ ಸಾಮರ್ಥ್ಯವನ್ನು ರಚನೆ ಮಾಡಲಾಗಿದೆ
• ರಾಜ್ಯಾದ್ಯಂತ 216 ತಾಲ್ಲೂಕುಗಳಿಗೆ 324 ಕೋಟಿ ರೂ. ಬರ ಪರಿಹಾರವನ್ನು ಬಿಡುಗಡೆ ಮಾಡಿದೆ.
• ರಸ್ತೆ ಅಭಿವೃದ್ಧಿ ಮತ್ತು ನಿಯಂತ್ರಣ ಪ್ರಾಧಿಕಾರ ಸ್ಥಾಪನೆ ಮಾಡಿದೆ.
• ಎಸ್‌ಸಿಮ ಎಸ್‌ಟಿ ಮತ್ತು ಇತರ ವರ್ಗಗಳಿಗೆ 98,080 ಮನೆಗಳ ನಿರ್ಮಾಣ ಮಾಡಲಾಗಿದೆ.
• ಕೆಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.
• ಸಕಾಲ ಸೇವೆ ಅಡಿಯಲ್ಲಿ 1.91 ಅರ್ಜಿಗಳ ವಿಲೇವಾರಿ.
• ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ.

4,600 ಕೋಟಿ ರೂ. ಬರ ಪರಿಹಾರ ವಿತರಣೆ: ಕೇಂದ್ರ ಸರ್ಕಾರದ ವಿಳಂಬ ಧೋರಣೆಯ ನಡುವೆಯೂ ರಾಜ್ಯದಲ್ಲಿ 4,600 ಕೋಟಿ ರೂ. ಬರ ಪರಿಹಾರವನ್ನು ಈಗಾಗಲೇ ವಿತರಿಸಲಾಗಿದೆ. 1,700 ಕೋಟಿ ರೂ. ಮುಂಗಾರು ಹಂಗಾಮಿನ ವಿಮೆ ಪರಿಹಾರ ಇತ್ಯರ್ಥಪಡಿಸಲಾಗಿದೆ. ಈ ಬಾರಿ ಬೆಳೆ ವಿಮೆ ಕಂಪೆನಿಗಳಿಗೆ ವಿಧಿಸಿದ್ದ ಷರತ್ತುಗಳನ್ನು ಬದಲಾವಣೆ ಮಾಡಲಾಗಿದ್ದು, ಶೇ.20ಕ್ಕಿಂತ ಅಧಿಕ ಲಾಭವನ್ನು ವಿಮೆ ಕಂಪೆನಿಗಳು ಪಡೆಯುವಂತಿಲ್ಲ. ರೈತ ಪರವಾದ ನಿಯಮ ರೂಪಿಸಲಾಗಿದೆ. ರೈತರಿಗಿಂತ ವಿಮೆ ಕಂಪೆನಿಗಳಿಗೆ ಹೆಚ್ಚು ಹಣ ಹೋಗುತ್ತಿರುವುದರ ಬಗ್ಗೆ ಸಾಕಷ್ಟು ದೂರುಗಳು ಸಲ್ಲಿಕೆಯಾದ್ದರಿಂದ ಬೆಳೆ ವಿಮೆ ನಿಯಮದಲ್ಲಿ ಬದಲಾವಣೆ ತರಲಾಗಿದೆ.

ರಾಜ್ಯದಲ್ಲಿ 1 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ರಾಜ್ಯ ಸರ್ಕಾರ ಕಳೆದ ಬಜೆಟ್‌ನಲ್ಲೂ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ರೈತರ ಬಗ್ಗೆ ಸರ್ಕಾರಕ್ಕೆ ಇರುವ ಬದ್ಧತೆ ಸಾರಿದೆ. ಇದಲ್ಲದೆ, ಮುಂಗಾರು ಪೂರ್ವ ಉತ್ತಮ ಮಳೆಯಿಂದಾಗಿ ಉತ್ಸಾಹದಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರಿಗೆ ಸಕಾಲಿಕವಾಗಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಮತ್ತು ಗೊಬ್ಬರ ಪೂರೈಕೆ ಮಾಡುವುದಾಗಿ ಸರ್ಕಾರ ಅಭಯ ನೀಡಿದೆ. ಬೇಡಿಕೆಗಿಂತ ಹೆಚ್ಚು ಬಿತ್ತನೆ ಬೀಜ ದಾಸ್ತಾನಿದ್ದು, ರಸಗೊಬ್ಬರ ಕೊರತೆಯೂ ಇಲ್ಲ. ಅಗತ್ಯ ಪ್ರಮಾಣದಲ್ಲಿ ಪ್ರಮಾಣೀಕೃತ ಬೀಜ ಪೂರೈಕೆಗೆ ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ.

ಅಗತ್ಯ ಬಿತ್ತನೆ ಬೀಜ ದಾಸ್ತಾನು ಲಭ್ಯ: ಪ್ರಸಕ್ತ ಮುಂಗಾರು ಹಂಗಾಮಿಗೆ 5.52 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆಯನ್ನು ಅಂದಾಜಿಸಲಾಗಿದ್ದು, 9.01 ಲಕ್ಷ ಕ್ವಿಂಟಾಲ್ ದಾಸ್ತಾನಿದೆ. ಈ ಪೈಕಿ 5,492.44 ಕ್ವಿಂಟಾಲ್ ಬಿತ್ತನೆ ಬೀಜವನ್ನು ಈಗಾಗಲೇ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ಅಂತೆಯೇ, 2024ರ ಮುಂಗಾರು ಹಂಗಾಮಿನಲ್ಲಿ 26.80 ಲಕ್ಷ ಟನ್ ರಾಸಾಯನಿಕ ಗೊಬ್ಬರಗಳ ಬೇಡಿಕೆಯನ್ನು ಅಂದಾಜಿಸಲಾಗಿದೆ.

ಸಾವಯವ ಇಂಗಾಲ ಅಭಿಯಾನ: ಈ ಯೋಜನೆಯಡಿ ಎಲ್ಲ ವರ್ಗಗಳ ರೈತರಿಗೆ ಹಸಿರೆಲೆ ಗೊಬ್ಬರ, ಬೀಜಗಳನ್ನು ನೀಡಲಾಗುತ್ತಿದ್ದು, ಗಿರಿಜನರೂ ಸೇರಿದಂತೆ ಒಟ್ಟಾರೆಯಾಗಿ 11,404 ಮಂದಿ ರೈತ ಫಲಾನುಭವಿಗಳು ಸದರಿ ಯೋಜನೆಯ ಪ್ರಯೋಜನ ಪಡೆದಿದ್ದು, ಆ ಮೂಲಕ ಆರ್ಥಿಕ ಪ್ರಗತಿ ಸಾಧಿಸಲಾಗಿರುತ್ತದೆ.

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ: 6.13 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳನ್ನು 13.11 ಲಕ್ಷ ಮಂದಿ ರೈತರಿಗೆ ವಿತರಣೆ ಮಾಡಲಾಗಿದೆ. ನೆಡೆ ರೋಗ ಪರಿಹಾರದಡಿ 2022-23ನೇ ಸಾಲಿನಲ್ಲಿ ತೂಗರಿ ಬೆಳೆ ನೆಟೆ ರೋಗದಿಂದ ಹಾನಿಗೊಳಗಾದ ಕಲಬುರಗಿ, ಯಾದಗಿರಿ, ಬೀದರ್‌ ಮತ್ತು ವಿಜಯಪುರ ಜಿಲ್ಲೆಗಳ 2,80,154 ರೈತರ ಬ್ಯಾಂಕ್ ಖಾತೆಗೆ ರೂ. 223.00 ಕೋಟಿ ಪರಿಹಾರವನ್ನು ನೇರ ನಗದು ಮೂಲಕ ವರ್ಗಾಯಿಸಲಾಗಿರುತ್ತದೆ.

ರೈತ ಸಿರಿ ಯೋಜನೆ: ರೈತರಿಗೆ ಪ್ರೋತ್ಸಾಹ ಧನ: ಬೆಳೆ ಸಮೀಕ್ಷೆ ಮಾಹಿತಿ ಆಧರಿಸಿ ಸಿರಿಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂ.ಗಳಂತೆ ಗರಿಷ್ಟ 2 ಹೆಕ್ಟೇರ್ ಮಿತಿಯೊಳಗೆ ಒಟ್ಟು 25,214 ರೈತರಿಗೆ 2083.00 ಲಕ್ಷ ರೂ. ಪ್ರೋತ್ಸಾಹಧನವನ್ನು ಪಾವತಿಸಲಾಗಿದೆ. ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ -2024 ಅನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿದ್ದು, ಸದರಿ ಮೇಳದಲ್ಲಿ ಎರಡು ಲಕ್ಷಕ್ಕೂ ಅಧಿಕ ಸಾರ್ವಜನಿಕರು ಭಾಗವಹಿಸಿದ್ದರು. ಮೇಳದಲ್ಲಿ ನಡೆದ 213 ಉತ್ಪಾದಕರು-ಮಾರುಕಟ್ಟೆಗಾರರ ಸಭೆಗಳಲ್ಲಿ, ಸುಮಾರು 150 ಕೋಟಿ ರೂ. ಮೌಲ್ಯದ 41 ಒಡಂಬಡಿಕೆಗಳು ನಡೆದವು.

ಸೂಕ್ಷ್ಮ ನೀರಾವರಿ ಘಟಕಗಳಿಗೆ ಸಹಾಯಧನ: ಸೂಕ್ಷ್ಮ ನೀರಾವರಿಗೆ 470.91 ಕೋಟಿ ರೂ. ಬಿಡುಗಡೆಯಾಗಿದ್ದು, 421.58 ಕೋಟಿ ರೂ. ವೆಚ್ಚ ಭರಿಸಲಾಗಿದೆ. 2,15,349 ಮಂದಿ ಫಲಾನುಭವಿಗಳಿಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಸಹಾಯಧನ ನೀಡಲಾಗಿದೆ.

ಬೆಳೆ ಸಮೀಕೆ: 2023-24ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮು ಗಳಲ್ಲಿ, ಒಟ್ಟು 380.39 ಲಕ್ಷ ತಾಕುಗಳ ಪೈಕಿ 370.79 ಲಕ್ಷ ತಾಕುಗಳ ಸಮೀಕ್ಷೆಯನ್ನು ಕೈಗೊಂಡು ಶೇ.97.47ರಷ್ಟು ಪ್ರಗತಿ ಸಾಧಿಸಲಾಗಿದ್ದು, ಪ್ರಸ್ತುತ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಪ್ರಗತಿಯಲಿರುತ್ತದೆ.

ಕೃಷಿ ಯಾಂತ್ರೀಕರಣ ಕೃಷಿ ಉತ್ಪನ್ನ ಸಂಸ್ಕರಣೆ, ಹೈಟೆಕ್ ಹಾರ್ವೆಸ್ಟರ್ ಹಬ್: ಈ ಕಾರ್ಯಕ್ರಮಗಳ ಅನುಷ್ಠಾನಕ್ಕೆ 2023-24ನೇ ಸಾಲಿನಲ್ಲಿ 539.00 ಕೋಟಿ ರೂ. ಸಹಾಯಧನ ಬಿಡು ಗಡೆ ಮಾಡಲಾಗಿದ್ದು, 469.22 ಕೋಟಿ ರೂ. ಸಹಾಯ ಧನವನ್ನು 3,53,349 ಫಲಾನುಭವಿಗಳಿಗೆ ಒದಗಿಸಲಾಗಿರುತ್ತದೆ. ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ರೂ. 41.38 ಕೋಟಿಗಳ ವೆಚ್ಚ ಭರಿಸಲಾಗಿರುತ್ತದೆ.

ಕೃಷಿ ಭಾಗ್ಯ ಯೋಜನೆಯಲ್ಲಿ ಕೃಷಿ ಹೊಂಡಗಳ ನಿರ್ಮಾಣ: ಕೃಷಿ ಭಾಗ್ಯ ಯೋಜನೆಯನ್ನು ಮಳೆಯಾಶ್ರಿತ ಕೃಷಿ ನೀತಿ 2014ರ ಅನ್ವಯ ರಾಜ್ಯದ 5 ಹವಾಮಾನ ವಲಯದ 24 ಬರ ಪೀಡಿತ ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ 6,601 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಹಾಗೂ ಪೂರಕ ಘಟಕಗಳೊಂದಿಗೆ ಅನುಷ್ಠಾನಗೊಳಿ ಸಲಾಗಿದ್ದು, 49.905 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ.

ಕೃಷಿ ನವೋದ್ಯಮ: ಗ್ರಾಮೀಣ ಭಾಗದ ಯುವಕರಿಗೆ ಉತ್ತೇಜನ, ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯೋಕರಣವನ್ನು ಉತ್ತೇಜಿಸುವ ಸಲುವಾಗಿ 40 ಕೃಷಿ ನವೋದ್ಯಮಗಳಿಗೆ 8.08 ಕೋಟಿ ರೂ. ಅನುದಾನ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

59 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago