ಮಂಜು ಕೋಟೆ
ಕೇರಳ, ತಾಲ್ಲೂಕಿನ ಗಡಿಯಲ್ಲಿ ಚುರುಕುಗೊಂಡ ಮಳೆಯಿಂದ ಒಳಹರಿವಿನ ಪ್ರಮಾಣ ಹೆಚ್ಚಳ
ಎಚ್.ಡಿ.ಕೋಟೆ: ಕೇರಳ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಮುಂಗಾರು ಮಳೆ ತೀವ್ರಗೊಂಡಿರುವುದರಿಂದ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದ ೪ ಕ್ರಸ್ಟ್ ಗೇಟ್‌ಗಳ ಮೂಲಕ ೧೦ ಸಾವಿರ ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ.
ಕಳೆದ ತಿಂಗಳು ಪ್ರಾರಂಭದಲ್ಲಿ ಕೇರಳ ಮತ್ತು ತಾಲ್ಲೂಕಿನಲ್ಲಿ ಸುರಿಯುತ್ತಿದ್ದ ಭಾರಿ ಮಳೆಯಿಂದ ಕುಸಿತ ಕಂಡಿದ್ದ ಕಬಿನಿ ಜಲಾಶಯದ ನೀರಿನ ಮಟ್ಟ ೬೦ ಅಡಿಗಳಿಂದ ೮೦ ಅಡಿಗಳಿಗೆ ಏರಿಕೆಯಾಗಿತ್ತು.
ಜಲಾಶಯ ಭರ್ತಿಯಾಗುವ ಸಾಧ್ಯತೆ ಇದ್ದುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದ ಹಿತದೃಷ್ಟಿಯಿಂದ ಅಧಿಕಾರಿಗಳು ಜಲಾಶದ ೪ ಗೇಟ್ ಗಳ ಮೂಲಕ ೫,೦೦೦ ಕ್ಯೂಸೆಕ್ಸ್ ನೀರನ್ನು ೭-೮ ದಿನಗಳ ಕಾಲ ಹೊರ ಹರಿಸಿದ್ದರು. ಕಳೆದ ವಾರ ಮಳೆ ದಿಢೀರ್ ಕಡಿಮೆಯಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಕುಸಿತ ಕಂಡು, ಜಲಾಶಯದ ನಾಲ್ಕು ಗೇಟ್‌ಗಳಲ್ಲಿ ಹರಿಯುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿತ್ತು.
ಕಳೆದ ೪-೫ ದಿನಗಳಿಂದ ಮುಂಗಾರು ಮಳೆ ಕೇರಳ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಮತ್ತೊಮ್ಮೆ ಜಲಾಶಯದ ನೀರಿನ ಮಟ್ಟ ೭೭ ಅಡಿಯಿಂದ ೮೦ ಅಡಿಗಳಿಗೆ ಏರಿಕೆಯಾಗಿದೆ. ಜಲಾಶಯಕ್ಕೆ ಸದ್ಯ ೨೧ ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ಜಲಾಶಯದ ಹಿತದೃಷ್ಟಿಯಿಂದ ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳಿಗೆ ೪ ಅಡಿ ಬಾಕಿ ಇರುವಂತೆಯೇ ಮಂಗಳವಾರ ಬೆಳಿಗ್ಗೆ ೧೦ ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯ ಬಿಡಲಾಗುತ್ತಿದೆ.
ಮೇ ಮತ್ತು ಜೂನ್ ತಿಂಗಳಿನಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಟ ಮಟ್ಟ ತಲುಪುತ್ತಿದ್ದಂತೆ ಎರಡು ಬಾರಿ ನದಿಗೆ ನಾಲ್ಕು ಗೇಟ್‌ಗಳ ಮೂಲಕ ನೀರು ಹರಿಸುತ್ತಿರುವುದು ಇದೇ ಪ್ರಥಮವಾಗಿದೆ. ಇನ್ನು ಮೂರು ನಾಲ್ಕು ದಿನಗಳ ಕಾಲ ಮಳೆ ಹೀಗೆಯೇ ಮುಂದುವರಿದರೆ ಜಲಾಶಯಕ್ಕೆ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆಗಳಿದ್ದು, ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡುವುದರಿಂದ ಅಧಿಕಾರಿಗಳು ನದಿ ಪಾತ್ರದ ಜನರಿಗೆ ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳಲು ಸಿದ್ಧರಾಗಿರುವಂತೆ ಮುನ್ಸೂಚನೆ ನೀಡಿದ್ದಾರೆ
” ೨-೩ ದಿನಗಳಿಂದ ಜಲಾಶಯದ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಹಿತದೃಷ್ಟಿಯಿಂದ ಎರಡನೇ ಬಾರಿ ಮತ್ತೊಮ್ಮೆ ೪ ಗೇಟ್‌ಗಳ ಮೂಲಕ ನೀರನ್ನು ನದಿಗೆ ಬಿಡಲಾಗುತ್ತಿದೆ. ನದಿಪಾತ್ರದಲ್ಲಿರುವ ರೈತರು, ಸಾರ್ವಜನಿಕರು, ಗ್ರಾಮಸ್ಥರು ಜಾಗ್ರತೆಯಿಂದ ಇರುವಂತೆ ಇಲಾಖೆ ವತಿಯಿಂದ ಮನವಿ ಮಾಡಲಾಗಿದೆ.”
-ಚಂದ್ರಶೇಖರ್, ಇಇ, ಕಬಿನಿ ಜಲಾಶಯ
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…
ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…