ಭಾರತದ ೩ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಖಾಲಿ ಇರುವ ೧,೪೨೫ ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಫೀಸ್ ಅಸಿಸ್ಟೆಂಟ್ (ಕ್ಲರ್ಕ್) ೮೦೦, ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-೧) ೫೦೦, ವ್ಯವಸ್ಥಾಪಕ (ಆಫೀಸರ್ ಸ್ಕೇಲ್-೨) ೧೨೫ ಹುದ್ದೆಗಳು ಸೇರಿದಂತೆ ಒಟ್ಟಾರೆ ೧,೪೨೫ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆ.೨೧ ಕೊನೆಯ ದಿನಾಂಕ. ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು http://www.ibps.in ಜಾಲತಾಣವನ್ನು ಸಂದರ್ಶಿಸಿ. ಉದ್ಯೋಗಕ್ಕಾಗಿ ಅರ್ಜಿಗಳನ್ನು ಬ್ಯಾಂಕ್ ಎಂದಿಗೂ ನೇರವಾಗಿ ಕರೆಯುವುದಿಲ್ಲ.
ಇದನ್ನು ಓದಿ : GATE ಪರೀಕ್ಷೆ ಏನು-ಎತ್ತ ?
ಬ್ಯಾಂಕ್‌ನಲ್ಲಿನ ಎಲ್ಲಾ ನೇಮಕಾತಿಗಳನ್ನು IBPS ಮೂಲಕ ಮಾತ್ರ ಮಾಡಲಾಗುತ್ತದೆ.
ಬ್ಯಾಂಕ್ ನಲ್ಲಿ ಉದ್ಯೋಗದ ಸುಳ್ಳು ಜಾಹೀರಾತುಗಳಿಗೆ ಬಲಿಯಾಗದಂತೆ ಉದ್ಯೋಗಾಕಾಂಕ್ಷಿಗಳಿಗೆ ಬ್ಯಾಂಕ್ ಎಚ್ಚರಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.ibps. in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…