Andolana originals

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ

ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ ಕಡಿಮೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ.

ಮೈಸೂರನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸ ಬೇಕೆಂಬ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶೇಷ ಕ್ರಿಯಾಯೋಜನೆ ರೂಪಿಸಿದ್ದು, ೨೫೬ ಗ್ರಾಪಂ ಗಳಲ್ಲಿ ಜಿಲ್ಲೆಯ ೧೪೭ ಗ್ರಾಪಂಗಳನ್ನು ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಎಂದು ಘೋಷಿಸಲಾಗಿದೆ.

ರೋಗ ಪತ್ತೆ ಹೇಗೆ? :
ಸಾಮಾನ್ಯವಾಗಿ ಎರಡು ವಾರಗಳಿಗಿಂತ ಹೆಚ್ಚು ಕಾಲ ಕಫದೊಂದಿಗೆ ಕೆಮ್ಮು, ಕೆಲವೊಮ್ಮೆ ಕಫದೊಂದಿಗೆ ರಕ್ತ ಬೀಳುತ್ತದೆ. ಎದೆ ನೋವು, ಸಂಜೆ ಜ್ವರ, ರಾತ್ರಿಯಲ್ಲಿ ಬೆವರುವುದು, ಹಸಿವಿನ ಕೊರತೆ, ತೂಕ ನಷ್ಟ ಕಾಣಿಸಿಕೊಳ್ಳುತ್ತದೆ. ಇಂತಹವರು ಟಿಬಿ ಉಚಿತ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ, ಪಿಕೆಟಿಬಿ ಆಸ್ಪತ್ರೆಯನ್ನು ಸಂಪರ್ಕಿಸಬಹುದು.

ಮುನ್ನೆಚ್ಚರಿಕೆ ಕ್ರಮ :
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವ ಜನಿಕರಲ್ಲಿ ಕ್ಷಯ ರೋಗದ ಕುರಿತು ಜಾಗೃತಿ ಮೂಡಿ ಸುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಪರೀಕ್ಷೆ ಸೇವೆ ಲಭ್ಯವಿದೆ. ಪ್ರತಿಯೊಬ್ಬರೂ ವರ್ಷಕ್ಕೊಂದು ಬಾರಿ ಟಿಬಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೆಮ್ಮುವಾಗ, ಸೀನುವಾಗ ಬಾಯಿಗೆ ಅಡ್ಡಲಾಗಿ ಕರವಸ ಇಟ್ಟುಕೊಳ್ಳಬೇಕು. ಎಲ್ಲೆಂದರಲ್ಲಿ ಉಗುಳಬಾರದು, ಸೋಂಕು ಗಾಳಿಯಲ್ಲಿ ಹರಡಿ ಬೇರೆಯವರಿಗೂ ತಗುಲುತ್ತದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮ ಅಗತ್ಯ.

ಜಿಲ್ಲೆಯಲ್ಲಿ ನಿರಂತರ ಜಾಗೃತಿ :
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರಂತರ ಜಾಗೃತಿ ಹಾಗೂ ನಾನಾ ಯೋಜನೆಗಳ ಅನುಷ್ಠಾನದಿಂದಾಗಿ ವರ್ಷದಿಂದ ವರ್ಷಕ್ಕೆ ಕ್ಷಯ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕಾಗಿ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಉಚಿತ ತಪಾಸಣೆ ಹಾಗೂ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಬಹುಬೇಗನೆ ಪತ್ತೆ ಹಚ್ಚಿ ಅದರ ತೀವ್ರತೆಯನ್ನು ಕಡಿಮೆಗೊಳಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

20 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

29 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago