Andolana originals

ಲಾರಿ – ಕಾರು ನಡುವೆ ಡಿಕ್ಕಿ; ಇಬ್ಬರು ಸಾವು

ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ.

ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ ಎಂಬವರ ಮಗ ಶಶಾಂಕ್(೨೬) ಮೃತಪಟ್ಟವರು. ಪೊಲೀಸ್ ಪೇದೆ ರಮೇಶ್ ಅವರ ಮಗ ಗೌತಮ್ ಎಂಬಾ ತನ ಕಾಲು ಮುರಿದಿದೆ. ಆಯುಧ ಪೂಜೆಯ ಅಂಗವಾಗಿ ಮೂವರು ಕಾರನ್ನು ಸ್ವಚ್ಛಗೊಳಿಸಿ ಕೊಂಡು ಬರಲು ಗ್ಯಾರೇಜ್‌ಗೆ ಹೋಗಿದ್ದರು ಎನ್ನಲಾಗಿದೆ.

ನಂತರ ಕಾರಿನಲ್ಲಿ ರಾತ್ರಿ ೭. ೩೦ರಲ್ಲಿ ಮೂಡ್ಲುಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆ ಮೇಲೆ ತೆರಳುತ್ತಿದ್ದರು. ಈ ವೇಳೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ. ಕಾರು ಚಾಲನೆ ಮಾಡುತ್ತಿದ್ದ ರೋಹನ್ ಮತ್ತು ಶಶಾಂಕ್‌ಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟರು. ಕಾರಿನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಗೌತಮ್‌ನ ಕಾಲಿಗೆ ತೀವ್ರ ಪೆಟ್ಟು ಬಿದ್ದಿದೆ. ರಸ್ತೆಯಲ್ಲಿ ತೆರಳುತ್ತಿದ್ದವರು ಅಪಘಾತದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಚಾರ ಠಾಣೆ ಪೊಲೀಸರು ಗಾಯಾಳು ಹಾಗೂ ಶವಗಳನ್ನು ಸಿಮ್ಸ್ ಆಸ್ಪತ್ರೆಗೆ ಸಾಗಿಸಿದರು. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

andolana

Recent Posts

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

19 mins ago

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

58 mins ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

1 hour ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

1 hour ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

2 hours ago