ಆಯತಪ್ಪಿ ಕಬಿನಿ ನಾಲೆಗೆ ಬಿದ್ದ ಬಾಲಕ
ಚಾಮರಾಜನಗರ: ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ಬಾಲಕನೊಬ್ಬ ಕಬಿನಿ ನಾಲೆಗೆ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಗ್ರಾಮದ ಮಹದೇವಮ್ಮ ಎಂಬವರ ಪುತ್ರ ವೈ. ಸಿ. ರೊಹೀತ್ (೧೩) ಮೃತಪಟ್ಟ ಬಾಲಕ. ಸಂತೇಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದ ಈತ ಬುಧವಾರ ಸಂಜೆ ಕಬಿನಿ ನಾಲೆಯ ಬದಿಯ ರಸ್ತೆಯಲ್ಲಿ ಬರುವಾಗ ಆಯತಪ್ಪಿ ಕಾಲು ಜಾರಿ ನಾಲೆಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಗುರುವಾರ ಮಧ್ಯಾಹ್ನ ಬಾಲಕನ ಶವ ಬಸವಟ್ಟಿ ಬಳಿಯ ಕಬಿನಿ ನಾಲೆಯಲ್ಲಿ ಪತ್ತೆಯಾಗಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ತಾಜುದ್ದೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶವವನ್ನು ನಾಲೆಯಿಂದ ಹೊರ ತೆಗೆಸಿ ಸಿಮ್ಸ್ ಬೋಧನಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಸಂಜೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಹನ ಹರಿದು ಮಗು ಸಾವು
ಚಾಮರಾಜನಗರ: ತಾಲ್ಲೂಕಿನ ಕಮರವಾಡಿ ಗ್ರಾಮದಲ್ಲಿ ಖಾಸಗಿ ಶಾಲಾ ವಾಹನ ಹರಿದು ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟಿದೆ. ಗ್ರಾಮದ ನವೀನ್ ಎಂಬವರ ಪುತ್ರ ಆರ್ಯ ಶೆಟ್ಟಿ ಮೃತಪಟ್ಟ ಮಗು. ನವೀನ್ ಅವರ ಮಗಳನ್ನು ಸಂತೇಮರಹಳ್ಳಿಯ ಖಾಸಗಿ ಶಾಲೆಗೆ ಕರೆದೊಯ್ಯಲು ಅವರ ಮನೆ ಮುಂದೆ ಶಾಲಾ ವಾಹನ ಬಂದಿದೆ. ಚಾಲಕ ರಸ್ತೆ ಬದಿ ಮಗು ನಿಂತಿರುವುದನ್ನು ಗಮನಿಸದೆ ವಾಹನ ಚಲಾಯಿಸಿದ್ದರಿಂದ ಮಗುವಿನ ಮೇಲೆ ವಾಹನ ಹರಿದಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…