Andolana originals

ಗಾಳಿ-ಮಳೆಗೆ ನೆಲಕಚ್ಚಿದ 1,791 ವಿದ್ಯುತ್ ಕಂಬಗಳು; 35 ಕೋಟಿ ರೂ. ನಷ್ಟ

• ಪುನೀತ್ ಮಡಿಕೇರಿ

ಮಡಿಕೇರಿ: ಒಂದು ವಾರದಿಂದ ಸುರಿದ ವರುಣಾರ್ಭಟಕ್ಕೆ ಜಿಲ್ಲೆ ನಲುಗಿದ್ದು, ಸುಮಾರು ರೂ.35 ಕೋಟಿಗೂ ಸರ್ಕಾರಿ ಆಸ್ತಿ-ಪಾಸ್ತಿ ನಷ್ಟಕ್ಕೀಡಾಗಿದೆ.

ವಾರದಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ವಿವಿಧೆಡೆ ಹಲವು ಮನೆಗಳು ಕುಸಿದಿವೆ. ಪ್ರವಾಹ, ಗಾಳಿ ಮಿಶ್ರಿತ ಮಳೆಗೆ ಮರಗಳು ಧರೆಗುರುಳಿದ್ದು, 1,791 ವಿದ್ಯುತ್‌ ಕಂಬಗಳು ನೆಲಕಚ್ಚಿವೆ. ಗ್ರಾಮೀಣ ರಸ್ತೆ ಗಳು, ಸೇತುವೆಗಳು ಹಾನಿಯಾಗಿವೆ. ಇದರಿಂದ ಲೋಕೋಪಯೋಗಿ ಇಲಾ 23 26.99 ಕೋಟಿ ರೂ., ಪಂಚಾಯತ್‌ ರಾಜ್ ಇಂಜಿನಿಯ ರಿಂಗ್ ವಿಭಾಗಕ್ಕೆ 6.83 ಕೋಟಿ ರೂ., ಸೆಸ್ಕ್‌ಗೆ 1.77 ಕೋಟಿ ರೂ. ಸೇರಿದಂತೆ ಒಟ್ಟು ಜೂ.1ರಿಂದ ಜು.20ರವರೆಗೆ 35 ಕೋಟಿ ರೂ. ಸರ್ಕಾರಿ ಆಸ್ತಿ-ಪಾಸ್ತಿಗೆ ನಷ್ಟ ಉಂಟಾಗಿದೆ.

ಇದುವರೆಗೂ 5 ಜಾನುವಾರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಜಿಲ್ಲಾ ಡಳಿತದ ತಂಡ ಇದುವರೆಗೂ 80ಕ್ಕೂ ಹೆಚ್ಚು ಮರಗಳನ್ನು ತೆರವುಗೊಳಿಸುವ ಕಾರ್ಯ ಮಾಡಿದೆ.

2 ಕಡೆಗಳಲ್ಲಿ ಭೂಕುಸಿತ, 5 ಕಡೆಗಳಲ್ಲಿ ಅಲ್ಪಪ್ರಮಾಣದ ಬರೆಜರಿತಘಟನೆಗಳುವರದಿಯಾಗಿವೆ. ಮೈಸೂರು-ಮಾಣಿ ರಾಷ್ಟ್ರೀಯ ಹೆದ್ದಾರಿ 275ರ ನಡುವಿನ ಕರ್ತೋಜಿ ಬಳಿ ಬರೆ ಜರಿದು ರಸ್ತೆ ಹಾನಿಗೀಡಾಗಿದೆ. ಪರಿಣಾಮ ಜು.22ರವರೆಗೆ ರಾತ್ರಿ ಸಂಚಾರವನ್ನು ನಿಷೇಧಿಸಲಾಗಿದೆ. ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ನೀಡಿದ್ದಾರೆ.

ಜೂ.1ರಿಂದ ವರುಣಾಘಾತಕ್ಕೆ 142 ಮನೆಗಳು ಹಾನಿಯಾಗಿವೆ. 12 ಮನೆಗಳು ಪೂರ್ಣ, 34 ಅಲ್ಪ ಪ್ರಮಾಣ, 96 ಮನೆಗಳು ಭಾಗಶಃ ಹಾನಿಗೀಡಾಗಿದ್ದು, ಕಂದಾಯ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವರದಿ ಆಧಾರದಲ್ಲಿ ಎನ್.ಡಿ.ಆರ್.ಎಫ್. ಹಾಗೂ ಎಸ್. ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ಪರಿಹಾರ ನೀಡಲು ಜಿಲ್ಲಾಡಳಿತ ಕ್ರಮವಹಿಸಿದೆ. ಇದರೊಂದಿಗೆ 2 ಶಾಲೆಗಳು, 1 ಅಂಗನವಾಡಿಗೂ ಹಾನಿಯಾಗಿದೆ.

9 ಗ್ರಾಮಗಳಲ್ಲಿ ಪ್ರವಾಹ ಮತ್ತು ಭೂ ಕುಸಿತ ಸಮಸ್ಯೆಗಳು ಉಂಟಾಗಿತ್ತು. ಆ ಪ್ರದೇಶಗಳಲ್ಲಿದ್ದ 90 ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯಲ್ಲಿ 4 ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 35 ಜನರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಸದ್ಯಕ್ಕೆ ಮಣ್ಣು, ವೆಟ್ ಮಿಕ್ಸ್ ಬಳಸಿ ರಸ್ತೆ ದುರಸ್ತಿಪಡಿಸುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿ ಸಿದ್ದೇಗೌಡ ಮಾಹಿತಿ ಒದಗಿಸಿದ್ದಾರೆ.

ಹಾನಿಗೀಡಾದ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್, ವಿದ್ಯುತ್ ತಂತಿಗಳನ್ನು ಬದಲಾವಣೆ ಮಾಡುವ ಕೆಲಸ ನಡೆಯುತ್ತಿದೆ. ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದು, ಈಗಾಗಲೇ ತಹಸಿಲ್ದಾರ್ ಖಾತೆಗೆ 1 ಕೋಟಿ ರೂ. ಬಿಡುಗಡೆಗೊಳಿಸಿ ಮಳೆಗಾಲ ಸಂಬಂಧ ಖರ್ಚಿಗೆ ವಿನಿಯೋಗ ಮಾಡಲಾಗುತ್ತಿದೆ.

ಎನ್.ಡಿ.ಆರ್.ಎಫ್. ಪಡೆ ಅಭಯ: ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಎನ್.ಡಿ.ಆರ್.ಎಫ್. ಪಡೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ಅಗ್ನಿಶಾಮಕ ದಳ, ಪೊಲೀಸ್‌ ಇಲಾಖೆ, ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್‌ ತಂಡಗಳು, ಅಧಿಕಾರಿಗಳು ಮಳೆಗಾಲದ ಮುನ್ನೆಚ್ಚರಿಕೆಯತ್ತ ಕಾರ್ಯೋನ್ಮುಖರಾಗಿದ್ದಾರೆ.

ಕೋಟ್ಸ್‌))

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗಿದ್ದು, ಈ ಸಂಬಂಧ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಪ್ರವಾಹದಿಂದ ತೊಂದರೆಗೆ ಒಳಗಾಗಿರುವ ಸಂತ್ರಸ್ತರಿಗೆ ಅಗತ್ಯ ಪರಿಹಾರ ನೀಡುವುದರ ಜತೆಗೆ ಶಾಶ್ವತ ಸೂರು ಕಲ್ಪಿಸಲಾಗುವುದು. ಮಳೆಯಿಂದ ಉಂಟಾಗಿರುವ ನಷ್ಟದ ಸಂಬಂಧ ಕಂದಾಯ ಸಚಿವರಿಗೂ ಮಾಹಿತಿ ನೀಡಲಾಗುವುದು
-ಎನ್.ಎಸ್.ಭೋಸರಾಜು, ಉಸ್ತುವಾರಿ ಸಚಿವರು, ಕೊಡಗು ಜಿಲ್ಲೆ

ಒಂದು ವಾರದಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಇದರಿಂದಾಗಿ ಜನಜೀವನಕ್ಕೆ ಅಸ್ತವ್ಯಸ್ತ ಉಂಟಾಗಿತ್ತು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಲಾಗುವುದು. ಪ್ರವಾಹದಿಂದ ರಸ್ತೆ ಸಂಪರ್ಕ ಕಡಿತಗೊಳ್ಳುವ ಕೆಲ ಭಾಗಗಳಲ್ಲಿ ರಸ್ತೆ ಎತ್ತರಿಸುವ ಸಂಬಂಧ ಕ್ರಿಯಾಯೋಜನೆ ಸರ್ಕಾರಕ್ಕೆ ಸಲ್ಲಿಸಿ ಶೀಘ್ರ ಕಾಮಗಾರಿ ನಡೆಸಲಾಗುವುದು.
-ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago