Andolana originals

ಸ್ವಚ್ಛತೆಗೆ ೫೦೦ ಪೌರ ಕಾರ್ಮಿಕರ ನಿಯೋಜನೆ

ಪ್ರಶಾಂತ್ ಎಸ್.

ದಸರಾ ಮಹೋತ್ಸವದ ಹಿನ್ನೆಲೆ,ನಿತ್ಯ ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಣೆ 

ಮೈಸೂರು: ದಸರಾ ಮಹೋತ್ಸವದ ವೈಭವವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿ ಗರು ಬರುವುದರಿಂದ ಆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಉತ್ಪತ್ತಿಯಾಗುವ ಕಸವನ್ನು ವಿಲೇವಾರಿ ಮಾಡಿ ನಗರದ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ನಗರಪಾಲಿಕೆ ಹೆಚ್ಚುವರಿಯಾಗಿ ೫೦೦ ಮಂದಿ ಪೌರಕಾರ್ಮಿಕರ ನಿಯೋಜನೆಗೆ ಮುಂದಾಗಿದೆ.

ನಗರಪಾಲಿಕೆಯಲ್ಲಿ ಪ್ರಸ್ತುತ ೧,೯೫೦ ಮಂದಿ ಪೌರಕಾರ್ಮಿಕರು ಸ್ವಚ್ಛತಾ ಕೆಲಸ ಮಾಡುತ್ತಿದ್ದು, ದಸರಾ ವೇಳೆಗೆ ಇನ್ನೂ ೫೦೦ ಹೆಚ್ಚುವರಿ ಪೌರಕಾರ್ಮಿಕರನ್ನು ನಿಯೋಜಿಸಿಕೊಂಡು, ದಿನದ ೨೪ ಗಂಟೆಗಳ ಕಾಲ ಮೂರು ಪಾಳಿಗಳಲ್ಲಿ ನಗರದ ಸ್ವಚ್ಛತೆ ಕಾಪಾಡಲು ಯೋಜನೆ ರೂಪಿಸಿದೆ.

ಮೂರು ಪಾಳಿಗಳಲ್ಲಿ ಸ್ವಚ್ಛತಾ ಕಾರ್ಮಿಕರು ಭಾಗಿ: ಕಂಡ ಕಂಡಲ್ಲಿ ಸಿಗುವ ಕಸವನ್ನು ಹುಡುಕಿ ತೆಗೆಯುವ ಮೂಲಕ ದಸರಾ ವೇಳೆಯಲ್ಲಿ ನಗರವನ್ನು ಕಸ ಮುಕ್ತವನ್ನಾಗಿಸಲು ಒಟ್ಟು ೨,೪೫೦ ಮಂದಿ ಪೌರಕಾರ್ಮಿಕರು ಹಗಲು- ರಾತ್ರಿ ಶ್ರಮಿಸಲಿದ್ದಾರೆ.

ಎಲ್ಲೆಲ್ಲಿ ನಿಯೋಜನೆ? ದಸರಾ ಮಹೋತ್ಸವದ ಪ್ರಯುಕ್ತ ಅರಮನೆ ಆವರಣ, ಫಲಪುಷ್ಪ ಪ್ರದರ್ಶನ ನಡೆಯುವ ಕುಪ್ಪಣ್ಣ ಪಾರ್ಕ್, ಆಹಾರ ಮೇಳ ನಡೆಯುವ ಮಹಾರಾಜ ಕಾಲೇಜು ಮೈದಾನ, ಪುಸ್ತಕ ಪ್ರದರ್ಶನ ಮೇಳ ನಡೆಯುವ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನ, ಯುವ ಸಂಭ್ರಮ ನಡೆಯುವ ಬಯಲು ರಂಗ ಮಂದಿರದಲ್ಲಿ ೨೦೦ ಮಂದಿ ಸ್ವಚ್ಛತಾ ಕಾರ್ಮಿಕರನ್ನು ಎರಡು ಪಾಳಿಗಳಲ್ಲಿ ನಿಯೋಜನೆ ಮಾಡಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತದೆ.

ನಗರ ಸ್ವಚ್ಛತೆ: ದಸರಾ ಕಾರ್ಯಕ್ರಮ ಹೊರತುಪಡಿಸಿ ಸಾರ್ವಜನಿಕ ರಸ್ತೆಗಳು, ವೃತ್ತಗಳು ಮತ್ತು ಉದ್ಯಾನಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ೩೦೦ ಮಂದಿಯನ್ನು ಬಳಕೆ ಮಾಡಿಕೊಳ್ಳಲಿದ್ದು, ೩ ಪಾಳಿಗಳಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಯುವ ದಸರಾ ನಡೆಯುವ ಸ್ಥಳದಲ್ಲಿ ವಿಶೇಷವಾಗಿ ೧೦೦ ಮಂದಿ ಸ್ವಚ್ಛತಾ ಕಾರ್ಮಿಕರನ್ನು ನಿಯೋಜನೆ ಮಾಡಲಾಗುತ್ತದೆ.

೭೦ ವಾಹನಗಳ ಬಳಕೆ: ಕಸ ವಿಲೇವಾರಿಗೆ ನಗರಪಾಲಿಕೆಯಿಂದ ೬೦ ವಾಹನಗಳನ್ನು ನೀಡಲಾಗುತ್ತಿದ್ದು, ಇದರೊಂದಿಗೆ ರಿಂಗ್ ರಸ್ತೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ೧೦ ಜೆಸಿಬಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕಳೆದ ಬಾರಿಯೂ ಅಚ್ಚುಕಟ್ಟಾಗಿ ಸ್ವಚ್ಛತಾ ಕಾರ್ಯವನ್ನು ಮಾಡಿದ್ದು, ನಗರದ ಹೊರ ವಲಯ ದಲ್ಲಿ ಯುವ ದಸರಾ ನಡೆದರೆ ಅಲ್ಲಿನ  ಸ್ವಚ್ಛತಾ  ಕಾರ್ಯಕ್ಕೂ ನಗರ ಪಾಲಿಕೆಯ ಸ್ವಚ್ಛತಾ ಕಾರ್ಮಿಕರನ್ನು ಬಳಸಿಕೊಳ್ಳಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

” ದಸರಾ ಪ್ರಯುಕ್ತ ಹೆಚ್ಚುವರಿಯಾಗಿ ೫೦೦ ಮಂದಿ ಸ್ವಚ್ಛತಾ ಕಾರ್ಮಿಕರನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿಕೊಳ್ಳಲಾಗಿದ್ದು, ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳು ಸೇರಿದಂತೆ ನಗರದ ರಸ್ತೆ ಮತ್ತು ಪ್ರಮುಖ ವೃತ್ತಗಳಲ್ಲಿ ದಿನವಿಡೀ ಸ್ವಚ್ಛತಾ ಕಾರ್ಯ ನಡೆಯಲಿದೆ.”

-ಡಾ.ಎನ್.ಪಿ.ವೆಂಕಟೇಶ್, ಆರೋಗ್ಯಾಧಿಕಾರಿ, ನಗರಪಾಲಿಕೆ

” ಸ್ವಚ್ಛತಾ ಕಾರ್ಯದ ಮೇಲುಸ್ತುವಾರಿಯನ್ನು ಮೇಲ್ವಿಚಾರಕರು, ಆರೋಗ್ಯ ನಿರೀಕ್ಷಕರು, ಪರಿಸರ ಇಂಜಿನಿಯರ್‌ಗಳು, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು (ಪರಿಸರ) ಹಾಗೂ ಆರೋಗ್ಯಾಧಿಕಾರಿಗಳು, ವಲಯ ಆಯುಕ್ತರು, ಉಪ ಆಯುಕ್ತರು ಮಾಡಲಿದ್ದು, ತ್ಯಾಜ್ಯ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲಾಗುವುದು. ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿರುವ ಸ್ವಚ್ಛತಾ ಕಾರ್ಮಿಕರು ನಿತ್ಯ ಕೆಲಸಕ್ಕೆ ಹಾಜರಾಗುತ್ತಿದ್ದಾರೆಯೇ, ಸ್ವಚ್ಛತಾ ಕಾರ್ಯ ಉತ್ತಮವಾಗಿ ನಡೆಯುತ್ತಿದೆಯೇ ಎಂದು ಪರಿಶೀಲನೆ ನಡೆಸುತ್ತಾರೆ.”

-ಶೇಖ್ ತನ್ವೀರ್ ಆಸೀಫ್, ಆಯುಕ್ತರು, ನಗರ ಪಾಲಿಕೆ

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago