Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಜಂಬೂಸವಾರಿಯಲ್ಲಿ 51 ಸ್ತಬ್ಧಚಿತ್ರಗಳು ಭಾಗಿ

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಈ ಬಾರಿ ಒಟ್ಟು ೫೧ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳಲಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಸ್ತಬ್ಧಚಿತ್ರ ಉಪ ಸಮಿತಿ ಉಪವಿಶೇಷಾಧಿಕಾರಿ ಕೆ. ಬಿ. ಪ್ರಭುಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣ ದಲ್ಲಿ ಸ್ತಬ್ಧಚಿತ್ರ ಕಿರು ಹೊತ್ತಿಗೆಯನ್ನು ಬಿಡುಗಡೆ ಗೊಳಿಸಿದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ೩೧ ಜಿಲ್ಲೆಗಳ ಸ್ತಬ್ಧಚಿತ್ರಗಳು, ಇದರ ಜತೆಗೆ ವಿವಿಧ ಇಲಾಖೆಗಳು, ನಿಗಮಗಳು ಹಾಗೂ ಸ್ತಬ್ಧಚಿತ್ರ ಉಪ ಸಮಿತಿಯ ಒಟ್ಟು ೨೦ ಸ್ತಬ್ಧಚಿತ್ರಗಳು ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲೊ ಳ್ಳಲಿವೆ ಎಂದು ವಿವರಿಸಿದರು. ಎಪಿಎಂಸಿ ಆವರಣದಲ್ಲಿ ಸ್ತಬ್ಧಚಿತ್ರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಶೇ. ೯೦ರಷ್ಟು ಕೆಲಸ ಪೂರ್ಣಗೊಂಡಿದೆ. ಕಲೆ, ಸಂಸ್ಕೃತಿ, ವಾಸ್ತುಶಿಲ್ಪ, ಜಾನಪದ, ಹಬ್ಬ-ಹರಿದಿನಗಳು, ಕರ್ನಾಟಕ ಸುವರ್ಣ ಸಂಭ್ರಮದ ವಿಷಯದಡಿ ಸ್ತಬ್ಧಚಿತ್ರಗಳು ನಿರ್ಮಾಣಗೊಂಡಿವೆ ಎಂದು ತಿಳಿಸಿದರು.

ಪ್ರದರ್ಶನವಾಗಲಿರುವ ಸ್ತಬ್ಧಚಿತ್ರಗಳು: ಯಾದಗಿರಿ ಜಿಲ್ಲೆಯು ತಿಂಥಣಿ ಮೌನೇಶ್ವರ ದೇವಾಲಯದ ಸ್ತಬ್ಧಚಿತ್ರ, ಕೊಡಗು-ಭೂ ಸಂರಕ್ಷಣೆ, ಹಾರಂಗಿ ಜಲಾಶಯ, ಕಾಫಿ-ಕಾಳುಮೆಣಸು ತೋಟ, ಆನೆ ಶಿಬಿರ, ಚಾಮರಾಜನಗರ- ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ- ಮೈಸೂರು ಸ್ಯಾಂಡಲ್ ಸೋಪ್ ಕಿರು ಪರಿಚಯದ ಸ್ತಬ್ಧಚಿತ್ರಗಳನ್ನು ನಿರ್ಮಿಸ ಲಾಗಿದೆ ಎಂದು ಮಾಹಿತಿ ನೀಡಿದರು.

ಮಂಡ್ಯ-ರಂಗನತಿಟ್ಟು ಪಕ್ಷಿಧಾಮ ಮತ್ತು ಕೆಆರ್‌ಎಸ್ ಅಣೆಕಟ್ಟೆ, ಕಾವೇರಿ ನೀರಾವರಿ ಅಭಿವೃದ್ಧಿ ನಿಗಮ-ಏಕತೆಯಲ್ಲಿ ಅನೇಕತೆ ಸಾರುವ ಅಣೆಕಟ್ಟು ಮತ್ತು ಜಲ ಸಂರಕ್ಷಣೆ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮ-ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ, ವಿಜಯಪುರ-ಬಸವನ ಬಾಗೇವಾಡಿಯ ಮೂಲನಂದಿ ಬಸವೇಶ್ವರ ದೇವಾಲಯ, ಮೈಸೂರು-ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ, ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ- ಕೃಷಿ ಸರಕುಗಳ ಮೌಲ್ಯವರ್ಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಂಸ್ಥೆಯ ಕೊಡುಗೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ-ಇಲಾಖೆಯ ಕಿರು ಪರಿಚಯ, ಚಿಕ್ಕಬಳ್ಳಾಪುರ -ನಂದಿ ರೋಪ್‌ವೇ ಸ್ತಬ್ಧಚಿತ್ರ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಎ. ಎಸ್. ರಂಜಿತ್ ಕುಮಾರ್, ಕಾರ್ಯದರ್ಶಿ ಎಲ್. ಮೇಘಲಾ, ಉಪಾಧ್ಯಕ್ಷರಾದ ಭಾಸ್ಕರ್ ಎಲ್. ಗೌಡ, ಈಶ್ವರ ಡಿ. ಚಕ್ಕಡಿ, ಪರಮೇಶ್ ನಾಯಕ್, ಮಂಜುನಾಥ್ ಮತ್ತಿತರರು ಹಾಜರಿದ್ದರು.

 

Tags: