Andolana originals

ಪಾಳು ಬಿದ್ದ ಗಿರಿಜನರ ಸಮುದಾಯ ಭವನ

ಅಧಿಕಾರಿಗಳು,  ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕೋಟ್ಯಾಂತರ ರೂ ವೆಚ್ಚದ ಕಟ್ಟಡ ನಿರುಪಯುಕ್ತ 

ಮಂಜು ಕೋಟೆ

ಹೆಚ್.ಡಿ.ಕೋಟೆ: ತಾಲ್ಲೂಕಿನ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣಗೊಂಡ ಲಕ್ಷಾಂತರ ರೂ. ವೆಚ್ಚದ ಗಿರಿಜನರ ಸಮುದಾಯ ಭವನ ಆದಿವಾಸಿ ಜನರ ಅನುಕೂಲಕ್ಕೆ ಸದುಪಯೋಗವಾಗದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಐದು ವರ್ಷಗಳಿಂದ ಪಾಳುಬಿದ್ದಿದೆ.

ಕಾಡಿನಲ್ಲಿದ್ದ ಅನೇಕ ಗಿರಿಜನರನ್ನು ನಾಡಿಗೆ ಕರೆತಂದು ಅವರನ್ನು ಮುಖ್ಯ ವಾಹಿನಿಗೆ ತರಬೇಕೆಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋಟ್ಯಂತರ ರೂ. ಖರ್ಚು ಮಾಡುತ್ತಿ ದ್ದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನೇಕ ಮೂಲ ಸೌಕರ್ಯದಿಂದ ವಂಚಿತವಾಗುತ್ತಿರುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.

ತಾಲ್ಲೂಕಿನ ಚಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ೨೦೧೯ನೇ ಸಾಲಿನಲ್ಲಿ ಟಿಎಸ್‌ಪಿ ಯೋಜನೆ ಮೂಲಕ ೧೨ ಲಕ್ಷ ರೂ. ವೆಚ್ಚದಲ್ಲಿ ಗಿರಿಜನರ ಸಮುದಾಯ ಭವನವನ್ನು ಜಿಪಂ ಮೂಲಕ ಗುತ್ತಿಗೆದಾರ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.

ಈ ಪುನರ್ವಸತಿ ಕೇಂದ್ರದಲ್ಲಿ ೫೦ಕ್ಕೂ ಹೆಚ್ಚು ಗಿರಿಜನ ಕುಟುಂಬಗಳು ವಾಸ ಮಾಡುತ್ತಿದ್ದು ಈ ಭಾಗದ ಜನರಿಗೆ ಕಾರ್ಯಕ್ರಮಗಳು, ಸಭೆ ಸಮಾರಂಭಗಳನ್ನು ನಡೆಸಲು ಈ ಭವನವನ್ನು ಐದು ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದೆ. ಆದರೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭವನವನ್ನು ಉದ್ಘಾಟಿಸಿ ಗಿರಿಜನರ ಅನುಕೂಲಕ್ಕೆ ನೀಡದೆ ನಿರ್ಲಕ್ಷಿಸಿರುವುದರಿಂದ ಭವನ ನಿರ್ವಹಣೆ ಇಲ್ಲದೆ ಪಾಳುಬಿದ್ದಿದೆ.

ಕಟ್ಟಡದ ಸುತ್ತಲೂ ಗಿಡ ಗಂಟಿಗಳು ಬೆಳೆದು ಹಾವು, ಚೇಳುಗಳ ವಾಸ ಸ್ಥಾನವಾಗಿದೆ. ಪ್ರತಿಯೊಂದು ಹಾಡಿಯಲ್ಲೂ ಇಂತಹ ಅನೇಕ ಯೋಜನೆಗಳಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕ, ಸಮುದಾಯ ಭವನ ಮುಂತಾದವುಗಳು ಇದೇ ರೀತಿ ಪಾಳುಬಿದ್ದಿವೆ. ಇನ್ನಾದರೂ ಸಂಬಂಧ ಪಟ್ಟ ಜಿಲ್ಲಾ ಮಟ್ಟದ ಅಽಕಾರಿಗಳು ಇತ್ತ ಗಮನಹರಿಸಿ ಸರ್ಕಾರದ ಯೋಜನೆಗಳು ಗಿರಿಜನರಿಗೆ ಸಮರ್ಪಕವಾಗಿ ಸದ್ಬಳಕೆ ಆಗುವ ರೀತಿಯಲ್ಲಿ ಕ್ರಮ ಕೈಗೊಂಡಾಗ ಮಾತ್ರ ಕೋಟ್ಯಂತರ ರೂ. ವೆಚ್ಚದಲ್ಲಿ ಖರ್ಚು ಮಾಡಿದ್ದಕ್ಕೂ ಸಾರ್ಥಕತೆ ಸಿಗಲಿದೆ.

ಚಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಹಾಡಿಗಳು, ಪುನರ್ವಸತಿ ಕೇಂದ್ರಗಳಿದ್ದು ಗಿರಿ ಜನರಿಗೆ ಮತ್ತು ಅವರ ಕುಟುಂಬಸ್ಥರಿಗೆ ಸಿಗಬೇಕಾಗಿದ್ದ ಶಿಕ್ಷಣ ಸೌಲಭ್ಯ, ಇತರೆ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಐದು ವರ್ಷಗಳ ಹಿಂದೆ ಸೊಳ್ಳೆಪುರದಲ್ಲಿ ನಿರ್ಮಾಣಗೊಂಡ ಗಿರಿಜನರ ಸಮುದಾಯ ಭವನ ಪಾಳು ಬಿದ್ದಿದೆ. ಇದಕ್ಕೆ ಇಲ್ಲಿನ ಅಽಕಾರಿಗಳ ಬೇಜವಾಬ್ದಾರಿ ಕಾರಣವಾಗಿದೆ.

ರಾಜೇಶ್ವರಿ ಶ್ರೀನಿವಾಸ್, ಅಧ್ಯಕ್ಷರು, ಚಕ್ಕೋಡನಹಳ್ಳಿ ಗ್ರಾಪಂ

ಆಂದೋಲನ ಡೆಸ್ಕ್

Recent Posts

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…

9 mins ago

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

3 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

3 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

3 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

3 hours ago