Andolana originals

ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ಕ್ರಿಸ್ ಮಸ್

ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಎಲ್ಲ ಚರ್ಚ್‌ಗಳಲ್ಲೂ ಆಚರಣೆ; ಪರಸ್ಪರ ಶುಭಾಶಯ ವಿನಿಮಯ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಕ್ರೈಸ್ತರು ವಿಶೇಷ ಖಾದ್ಯ ತಯಾರಿಸಿ ಸವಿದರು. ಬಗೆ ಬಗೆಯ ಕೇಕ್‌ಗಳನ್ನು ತಯಾರಿಸಿ ಹಂಚಿದರು.

ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿ ದಂತೆ ನಗರದ ಎಲ್ಲ ಚರ್ಚ್‌ಗಳಲ್ಲಿ ಯೇಸುವಿನ ಸ್ಮರಣೆ ಮಾಡಲಾಯಿತು. ಮಾಗಿಯ ಚಳಿಯಲ್ಲೂ ಕ್ರೈಸ್ತರು ಮಂಗಳವಾರ ಮಧ್ಯರಾತ್ರಿ ಚರ್ಚ್‌ಗಳಿಗೆ ತೆರಳಿ ತಮ್ಮ ಆರಾಧ್ಯ ದೈವ ಯೇಸುವಿಗೆ ಪ್ರಾರ್ಥನೆ ಸಲ್ಲಿಸಿದರು.

ಬುಧವಾರ ಮಧ್ಯರಾತ್ರಿ ೧೨ ಗಂಟೆ(ಡಿ. ೨೫)ಗೆ ಕ್ರೈಸ್ತ ಸಮುದಾಯದವರೊಟ್ಟಿಗೆ ಅನ್ಯ ಧರ್ಮೀ ಯರೂ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್‌ಮಸ್ ಆಚರ ಣೆಯಲ್ಲಿ ಭಾಗಿಯಾಗುವ ಮೂಲಕ ಸಾಮರಸ್ಯ ಮೆರೆದರು. ಹೂವು-ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಚರ್ಚ್‌ನ ಸೊಬಗನ್ನು ಕಣ್ತುಂಬಿಕೊಂಡರು. ಮಧ್ಯರಾತ್ರಿ ೧೨ ಗಂಟೆಗೆ ಶ್ವೇತ ವಸ್ತ್ರಧಾರಿ ಮೈಸೂರು ಪ್ರಾಂತ್ಯದ ಡಾ. ಬರ್ನಾರ್ಡ್ ಮೊರಾಸ್ ಅವರು ಚರ್ಚ್‌ನ ಪರಿವಾರ, ಛತ್ರಿ ಚಾಮರಗಳ ಹಿಮ್ಮೇಳ ಸಹಿತ ಮೆರವಣಿಗೆಯೊಂದಿಗೆ ಬಾಲ ಯೇಸುವಿನ ಪುಟ್ಟ ಮೂರ್ತಿಯನ್ನು ತಂದು ಗೋದಲಿಯಲ್ಲಿ ಮಲಗಿಸಿ, ನಮಿಸುತ್ತಿದ್ದಂತೆ ಕ್ರಿಸ್ ಮಸ್ ಸಂಭ್ರಮ ಇಮ್ಮಡಿಗೊಂಡಿತು. ಬಾಲ ಯೇಸುವನ್ನು ಹೊತ್ತು ತರುವ ಸಂದರ್ಭದಲ್ಲಿ ಮಾರ್ಗದ ಇಕ್ಕೆಲಗಳಲ್ಲಿ ನೆರೆದಿದ್ದವರು ದೇವರ ಪಾದ ಮುಟ್ಟಿ ನಮಸ್ಕರಿಸಿದರು.

ಎಲ್ಲೆಡೆ ಅರ್ಥ ಪೂರ್ಣ ಆಚರಣೆ
ಕ್ರೈಸ್ತ ಸಮುದಾಯದವರು ಚರ್ಚ್‌ಗಳ ಜತೆಗೆ ತಮ್ಮ ಮನೆಗಳನ್ನೂ ಸಿಂಗರಿಸಿಕೊಂಡು ಯೇಸುವಿನ ಜಪ ಮಾಡಿದರು. ಶಾಂತಿ, ಪ್ರೀತಿ, ಸಹನೆ, ಕ್ಷಮೆಯನ್ನು ಸಾರಿದ ಯೇಸು, ಎಲ್ಲರ ಮನೆ-ಮನಗಳನ್ನು ಬೆಳಗಲಿ ಎಂದು ನಕ್ಷತ್ರ ಪ್ರತಿಕೃತಿಗಳನ್ನು ತಮ್ಮ ಮನೆಗಳ ಮುಂದೆ ಅಳವಡಿಸಿದ್ದರು. ಹೊಸ ಉಡುಪುಗಳನ್ನು ಧರಿಸಿ ಸಿಹಿ ಹಂಚಿ, ಶುಭಾಶಯ ವಿನಿಮಯ ಮಾಡಿಕೊಂಡರು.

ನಗರದ ವಿವಿಧೆಡೆ ಆಚರಣೆ
ನಗರದ ಬೆಂಗಳೂರು-ಮೈಸೂರು ರಸ್ತೆಯ ವೆಸ್ಲಿ ಚರ್ಚ್, ಸಂತ ಬಾರ್ಥ ಲೋಮಿಯೋ ಚರ್ಚ್, ಹಿನಕಲ್‌ನ ಇನ್‌ಫ್ಯಾಂಟ್ ಜೀಸಸ್ ಚರ್ಚ್, ಲಕ್ಷ್ಮಿಪುರಂನ ಹಾರ್ಡ್ವಿಕ್ ಚರ್ಚ್, ರಾಮಕೃಷ್ಣ ನಗರದ ಯೇಸು ಕೃಪಾ ಲಯ ಚರ್ಚ್ ಸೇರಿದಂತೆ ನಗರದ ಎಲ್ಲ ಕ್ರೈಸ್ತ ದೇವಾಲಯಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ಎಲ್ಲೆಡೆ ಸಡಗರ ಹೆಚ್ಚಿತ್ತು. ಎಲ್ಲ ಕ್ರೈಸ್ತ ದೇವಾಲಯಗಳಲ್ಲಿ ಯೇಸು ಸ್ಮರಣೆ ಮಾಡಲಾಯಿತು.

 

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 mins ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

58 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

3 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

5 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago