Andolana originals

ಠಾಣೆ ಮೆಟ್ಟಿಲೇರಿದ ವೈದ್ಯರ ನಡುವಿನ ಗಲಾಟೆ

ಮಂಜು ಕೋಟೆ

ಕೋಟೆ: ಸಾರ್ವಜನಿಕ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪೂರ್ಣಿಮಾ ಮತ್ತು ಡಾ.ರೇಖಾ ಮಧ್ಯೆ ಮುಸುಕಿನ ಗುದ್ದಾಟ

ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ನಡುವಿನ ಮುಸುಕಿನ ಗುದ್ದಾಟದಿಂದ ಗಲಾಟೆಯಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈ ಕುರಿತು ಸಮಿತಿ ರಚಿಸಿ ತನಿಖೆ ನಡೆಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ಪೂರ್ಣಿಮಾ ಮತ್ತು ಡಾ.ರೇಖಾ ಇವರಿಬ್ಬರ ಕಡೆಯವರ ನಡುವೆ ಆಸ್ಪತ್ರೆ ಆವರಣದಲ್ಲಿ ಗಲಾಟೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ನೀಡಿದ್ದಾರೆ. ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಮತ್ತು ಅವ್ಯವಸ್ಥೆಯ ಬಗ್ಗೆ ಮಾಹಿತಿ ತಿಳಿದು ಇತ್ತೀಚೆಗೆ ಶಾಸಕರಾದ ಅನಿಲ್ ಚಿಕ್ಕಮಾದುರವರು ಆಡಳಿತಾಧಿಕಾರಿ ಡಾ.ಪೂರ್ಣಿಮಾ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

ಆಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಲು ಸಾವಿರಾರು ರೂ. ಪಡೆಯುತ್ತಿರುವ ವಿಚಾರವಾಗಿ ಹಾಗೂ ಸ್ಕ್ಯಾನಿಂಗ್ಯಂತ್ರ ಇದ್ದರೂ ವೈದ್ಯರನ್ನು ನೇಮಿಸಿಕೊಳ್ಳದೆ ಖಾಸಗಿಯವರಿಗೆ ಅನುಕೂಲ ಮಾಡಿಕೊಡುತ್ತಿರುವ ವಿಚಾರವಾಗಿ ಆಡಳಿತಾಧಿಕಾರಿ ಅವರಿಗೆ ಕೆಡಿಪಿ ಸಭೆಯಲ್ಲೂ, ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲೂ ಎಚ್ಚರಿಕೆ ನೀಡಿದ್ದರು.

ಈ ಘಟನೆ ನಡೆದ ನಂತರ ಆಡಳಿತಾಧಿಕಾರಿ ಡಾ.ಪೂರ್ಣಿಮಾ ಮತ್ತು ಡಾ.ರೇಖಾ ಅವರ ನಡುವೆ ಮುಸುಕಿನ ಗುದ್ದಾಟ ಪ್ರಾರಂಭವಾಗಿದೆ. ಕೆಲವೊಂದು ವಿಚಾರಕ್ಕಾಗಿ ರೇಖಾ ಅವರಿಗೆ ಪೂರ್ಣಿಮಾರವರು ನೋಟಿಸ್ ನೀಡಿದ್ದಾರೆ.

ಈ ನಡುವೆ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಪ್ರಸಾರವಾಗಿದ್ದು, ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಕಾರಣಾಂತರಗಳಿಂದ ಶಾಸಕ ಅನಿಲ್ ಚಿಕ್ಕಮಾದು ಅವರ ಅನುಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಡಿಎಚ್‌ಒ ಮೋಹನ್ ಅವರು ಹಲವಾರು ವೈದ್ಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದ್ದಾರೆ.

ಅಂದು ಸಂಜೆಯೇ ಡಾ.ಪೂರ್ಣಿಮಾ ಅವರ ಕಡೆಯವರು ಡಾ.ರೇಖಾ, ವಾಹನ ಚಾಲಕನಿಗೆ ‘ಈ ಹಿಂದೆ ಪೂರ್ಣಿಮಾ ಅವರು ಆಸ್ಪತ್ರೆಗೆ ಬರುವ ಮತ್ತು ಹೋಗುವ ವಿಡಿಯೋವನ್ನು ಏಕೆ ಮಾಡಿದ್ದೀರಿ ?’ಎಂದು ಜಗಳ ತೆಗೆದು ಮಾತಿನ ಚಕಮಕಿ ನಡೆಸಿದ್ದಾರೆ. ಇದು ಗಲಾಟೆಗೆ ತಿರುಗಿದೆ. ಈ ಸಂಬಂಧ ಎರಡೂ ಕಡೆಯವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಗಂಗಾಧರ್ ಅವರಿಗೆ ದೂರು ನೀಡಿದ್ದಾರೆ.

ಶಾಸಕ ಅನಿಲ್ ಚಿಕ್ಕಮಾದು ಮತ್ತು ಡಿಎಚ್‌ಒ ಮೋಹನ್ ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಸೇರಿದಂತೆ ತಾಲ್ಲೂಕಿನಲ್ಲಿ ಇರುವ ಆಸ್ಪತ್ರೆಗಳು ಮತ್ತು ವೈದ್ಯರು, ಔಷಧಿ ಸೌಲಭ್ಯಗಳ ಬಗ್ಗೆ ಹೆಚ್ಚು ಗಮನಹರಿಸಿ ಬಡರೋಗಿಗಳು, ರೈತರು, ಸಾರ್ವಜನಿಕರ ಹಿತ ಕಾಪಾಡಲು ಮುಂದಾಗಬೇಕಿದೆ.

” ಸಾರ್ವಜನಿಕ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪೂರ್ಣಿಮಾ ಮತ್ತು ಡಾ.ರೇಖಾ ಕಡೆಯವರ ನಡುವೆ ನಡೆದಿರುವ ಗಲಾಟೆ ಮತ್ತು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ವಿಚಾರವನ್ನು ಡಿಎಚ್‌ಒ ಅವರಿಗೆ ತಿಳಿಸಿದ್ದೇನೆ. ಅವರು ಸಮಿತಿ ರಚಿಸಿ ತನಿಖೆ ನಡೆಸಲು ಮುಂದಾಗಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ.”

ರವಿಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿ, ಎಚ್.ಡಿ.ಕೋಟೆ 

 

 

ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

3 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

9 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

9 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

9 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

9 hours ago