Andolana originals

ಐತಿಹಾಸಿಕ ಮಡಿಕೇರಿ ದಸರಾಗೆ ಅದ್ಧೂರಿ ತೆರೆ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿದ್ದ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿವೆ.

ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಮಂಟಪಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಮಂಟಪಕ್ಕೆ ತೃತೀಯ ಬಹುಮಾನ ದೊರಕಿದೆ. ಗುರುವಾರ ರಾತ್ರಿ ೯ ಗಂಟೆಯಿಂದಲೇ ದಶಮಂಟಪಗಳ ಪ್ರದರ್ಶನಗಳು ಆರಂಭಗೊಂಡವು. ಪೇಟೆ ಶ್ರೀ ರಾಮ ಮಂದಿರ ದೇವಾಲಯದ ಮಂಟಪ ಪ್ರದರ್ಶನ ನೀಡುತ್ತಿದ್ದಂತೆ ಉಳಿದ ಮಂಟಪಗಳು ಕೂಡ ದಶಮಂಟಪ ಸಮಿತಿ ನಿಗದಿಪಡಿಸಿದ್ದ ಸ್ಥಳಕ್ಕೆ ಆಗಮಿಸಿ ಪ್ರದರ್ಶನ ನೀಡಲು ಆರಂಭಿಸಿದವು.

ಚಲನವಲಗಳನ್ನೊಳಗೊಂಡ ವಿಭಿನ್ನ ಕಲಾಕೃತಿಗಳ ಕಥಾಹಂದರವನ್ನು ಮಂಟಪಗಳಲ್ಲಿ ಪ್ರಸ್ತುತಪಡಿಸಲಾಗಿತ್ತು. ನೂಕು ನುಗ್ಗಲಿನ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರದರ್ಶನವನ್ನು ಕಣ್ತುಂಬಿಕೊಂಡರು. ವಿಘ್ನರಾಜನಿಂದ ಮಮತಾಸುರ ವಧೆ ಎಂಬ ಪೌರಾಣಿಕ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಹಾಗೂ ಉಗ್ರನರಸಿಂಹನ ಉಗ್ರತ್ವ ಶಮನ ಎಂಬ ಕಥಾ ಹಂದರವನ್ನು ಮಂಟಪದಲ್ಲಿ ಅಳವಡಿಸಿ ಪ್ರದರ್ಶನ ನೀಡಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳು ಜಂಟಿಯಾಗಿ ಪ್ರಥಮ ಬಹುಮಾನ ಪಡೆದವು. ಪರಶುರಾಮನ ಕಥೆ ಪ್ರದರ್ಶಿಸಿದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ದ್ವಿತೀಯ ಬಹುಮಾನ ಪಡೆದರೆ, ಅಂಧಕಾಸುರನ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿದ್ದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ತೃತೀಯ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು.

ಇದನ್ನೂ ಓದಿ :-ಕಸ ಸಂಗ್ರಹಕ್ಕೆ ಸ್ಟೇನ್‌ಲೆಸ್‌ ಡಬ್ಬಗಳ ಅಳವಡಿಕೆ

ರಾತ್ರಿಯಾಗುತ್ತಿದ್ದಂತೆ ಹೊರಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿದ್ದ ಜನರು ನಗರದಲ್ಲಿ ಜಮಾವಣೆಗೊಂಡರು. ನಗರಕ್ಕೆ ವಾಹನ ಪ್ರವೇಶ ನಿರ್ಬಂಽಸಿದ್ದರಿಂದ ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲ್ಲಿಸಿ ನಗರದತ್ತ ಹೆಜ್ಜೆ ಹಾಕಿದರು. ಇಡೀ ರಾತ್ರಿ ನಗರದಲ್ಲಿ ನಡೆದ ದಶಮಂಟಪಗಳ ಶೋಭಾಯಾತ್ರೆ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ದೇವಾನುದೇವತೆಗಳಿಂದ ಅಸುರರ ಸಂಹಾರದ ಕಥಾ ಹಂದರಗಳು ನೋಡುಗರಿಗೆ ದೇವಲೋಕವೇ ಧರೆಗಿಳಿದಂತೆ ಭಾಸವಾಯಿತು.

ಡಿಜೆ ಇಲ್ಲದ ದಸರಾ….

ಈ ಬಾರಿಯ ದಸರಾ ಉತ್ಸವದಲ್ಲಿ ಡಿಜೆ ಬಳಸದಿದ್ದರಿಂದ ಯುವ ಸಮೂಹ ನಿರಾಸೆ ಅನುಭವಿಸುವಂತಾಯಿತು. ಪ್ರತಿ ಬಾರಿ ದಸರಾದಲ್ಲಿ ಪ್ರದರ್ಶನ ಸಂದರ್ಭ ಹೊರತುಪಡಿಸಿ ಉಳಿದ ಸಮಯದಲ್ಲಿ ಡಿಜೆ ಹಾಕಲಾಗುತ್ತಿತ್ತು. ಯುವ ಸಮೂಹ ಕುಣಿದು ಕುಪ್ಪಳಿಸಿ ಸಂಭ್ರಮಿಸುತ್ತಿದ್ದರು. ಆದರೆ, ಕಳೆದ ಬಾರಿಯಿಂದ ಡಿಜೆ ಬಳಸದಂತೆ ವಕೀಲರೊಬ್ಬರು ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ ನಿಯಮ ಉಲ್ಲಂಸಿ ಡಿಜೆ ಬಳಸಿದ ಮಂಟಪಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಾರಿ ಪೊಲೀಸ್ ಇಲಾಖೆ ಡಿಜೆ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೇರೆಗೆ ಕಡಿವಾಣ ಹಾಕಲಾಯಿತು. ಕೆಲಕಾಲ ಡಿಜೆ ಇದ್ದರೂ ಇಡೀ ರಾತ್ರಿ ಡಿಜೆ ಇಲ್ಲದೆ ಯುವ ಸಮೂಹ ಬೇಸರ ವ್ಯಕ್ತಪಡಿಸಿತು. ಇದೇ ವೇಳೆ ಕಾರೊಂದರಲ್ಲಿ ಡಿಜೆ ಹಾಕಿದ್ದನ್ನು ಗಮನಿಸಿದ ಪೊಲೀಸರು ಕಾರನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

52 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

53 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

56 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

58 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago