Andolana originals

ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ 

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ ೧೦ ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಎಲ್ಲ ಚಾರಣ ಪಥಗಳಲ್ಲಿ ಒಂದು ಬಾರಿಗೆ ಗರಿಷ್ಟ ೧೫೦ ಜನರಿಗೆ ಮಾತ್ರ ಸೀಮಿತದೊಳಿಸಲಾಗುವುದು. ಚಾರಣಕ್ಕೆ ಬರುವವರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಒಂದೊಮ್ಮೆ ಯಾವುದೇ ದಿನ ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದರು.

ಕೇರಳದಿಂದ ಚಾರಣಕ್ಕೆ ಬಂದಿದ್ದ ಯುವತಿ ನಾಪತ್ತೆಯಾಗಿ ಕಾಡಿನಲ್ಲಿ ೩ ದಿನ ಕಳೆಯುವಂತಾದ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಬಾಲಕಿ ಪತ್ತೆಯಾದ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಗಾಗಿ ಈ ಎಸ್.ಓ.ಪಿ. ರೂಪಿಸಲು ಸೂಚಿಸಿದ್ದಾಗಿ ಅವರು ತಿಳಿಸಿದರು.

ಜಿಪಿಎಸ್ ಅಳವಡಿಸಿದ ವಾಕಿಟಾಕಿ: ಇನ್ನು ಮುಂದೆ ಪ್ರತಿಯೊಂದು ಚಾರಣಪಥದಲ್ಲೂ ನೇಚರ್ ಗೈಡ್‌ಗಳಿಗೆ ಜಿ.ಪಿ.ಎಸ್. ಅಳವಡಿಸಿದ ವಾಕಿ ಟಾಕಿಯನ್ನು ಕಡ್ಡಾಯವಾಗಿ] ನೀಡಲಾಗುವುದು. ಅದೇ ರೀತಿ ಪ್ರತಿಯೊಬ್ಬ ಚಾರಣಿಗರ ಮೊಬೈಲ್‌ಗೂ ಚಾರಣಪಥದ ನಕ್ಷೆ ಸಹಿತ ಆಪ್ ಅನ್ನು ಅಳವಡಿಸಲಾಗುವುದು. ಅಕಸ್ಮಾತ್ ಯಾರೇ ಚಾರಣಿಗರು ದಾರಿ ತಪ್ಪಿದರೂ ಅವರ ಶೋಧಕ್ಕೆ ಈ ಆಪ್ ಸಹಕಾರಿಯಾಗಲಿದೆ ಎಂದರು.

ಬೇಸ್ ಕ್ಯಾಂಪ್‌ನಲ್ಲಿ ಮೂಲಸೌಕರ್ಯ: ಚಾರಣ ಆರಂಭಕ್ಕೂ ಮುನ್ನ ಮೂಲ ನೆಲೆಯಲ್ಲಿ ಚಾರಣಿಗರಿಗೆ ಸಂಕ್ಷಿಪ್ತವಾಗಿ ಚಾರಣದ ದೂರ, ಅವಧಿ ಮತ್ತು ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗುವುದು. ಅದೇ ರೀತಿ ವನ್ಯಜೀವಿಗಳು ಎದುರಾದರೆ ಏನು ಮಾಡಬೇಕು ಎಂದೂ ತಿಳಿಸಲಾಗುವುದು. ಮೂಲ ನೆಲೆಯಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಚಾರಣ ಪಥದಲ್ಲಿ ಬೇಸ್ ಕ್ಯಾಂಪ್‌ಗೆ ಹೋಗುವ ಮಾರ್ಗಸೂಚಿ, ಬಾಣದಾಕಾರದ ಗುರುತು ಹಾಕಲಾಗುವುದು. ಮಾರ್ಗಮಧ್ಯೆ ವಿರಮಿಸಿಕೊಳ್ಳಲು ವಿಶ್ರಾಂತಿ ತಾಣ ನಿರ್ಮಾಣ ಮಾಡಲಾಗುವುದು ಎಂದು ವಿವರಿಸಿದರು.

ಗೈಡ್‌ಗಳಿಗೆ ಹೊಣೆಗಾರಿಕೆ: ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕರು (ಗೈಡ್) ಯಾವುದೇ ಚಾರಣಿಗ ತಮಗಿಂತ ಮುಂದೆ ಹೋಗಿಲ್ಲ ಹಾಗೂ ಹಿಂದೆ ಉಳಿದಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಬೇಸ್ ಕ್ಯಾಂಪ್, ವಿಶ್ರಾಂತಿ ತಾಣಗಳಲ್ಲಿ ಕಡ್ಡಾಯವಾಗಿ ಚಾರಣಿಗರ ಎಣಿಕೆ ಮಾಡಬೇಕು. ಪ್ರತಿ ಅರ್ಧಗಂಟೆಗೊಮ್ಮೆ ತಮ್ಮ ವಾಕಿ ಟಾಕಿ ಮೂಲಕ ಬೇಸ್ ಕ್ಯಾಂಪ್‌ನೊಂದಿಗೆ ಸಂವಹನ ನಡೆಸಬೇಕು. ಚಾರಣಿಗರ ಜವಾಬ್ದಾರಿ ಹೊರುವಂತೆ ಅವರಿಗೆ ಹೊಣೆಗಾರಿಕೆ ನೀಡಲಾಗುವುದು. ಚಾರಣ ಆರಂಭವಾದ ಒಂದು ಗಂಟೆಯೊಳಗೆ ವಾಕಿ ಟಾಕಿ ಸಂವಹನ ಗೈಡ್ ಕಡೆಯಿಂದ ನಡೆಯದಿದ್ದರೆ ಬೇಸ್ ಕ್ಯಾಂಪ್ ಸಿಬ್ಬಂದಿಯೇ ಕರೆ ಮಾಡಿ ಖಚಿತಪಡಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.

ಅಪ್ರಾಪ್ತ ವಯಸ್ಕರಿಗೆ ಪೋಷಕರ ಅನುಮತಿ ಅಗತ್ಯ: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಪತ್ರ ಕಡ್ಡಾಯ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ್ಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ.

-ಈಶ್ವರ ಬಿ.ಖಂಡ್ರೆ, ಅರಣ್ಯ ಸಚಿವ 

 

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

8 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

8 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

14 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

14 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

14 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

15 hours ago