ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಗುಂಡ್ಲುಪೇಟೆ ತಾಲ್ಲೂಕಿನ ಮೊದಲ ಯುವತಿ
ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ತಾಲ್ಲೂಕಿನ ದೇಪಾಪುರ ಗ್ರಾಮದ ಚಂದ್ರಶೇಖರ್ ಮತ್ತು ನಿರ್ಮಲ (ಅಕ್ಕಮಹಾದೇವಮ್ಮ) ಅವರ ಪುತ್ರಿ ಡಿ.ಸಿ.ಮೌಲ್ಯ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸೈನ್ಯಕ್ಕೆ ಸೇರ್ಪಡೆಯಾಗಿದ್ದು ತಾಲ್ಲೂಕಿನಿಂದ ಸೇನೆಗೆ ಆಯ್ಕೆಯಾದ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಹೆಣ್ಣುಮಕ್ಕಳು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ ಎಂಬುದನ್ನು ಮೌಲ್ಯ ಸಾಬೀತುಪಡಿಸಿದ್ದಾರೆ. ಗಂಡು ಮಕ್ಕಳನ್ನೇ ಸೈನ್ಯಕ್ಕೆ ಸೇರಿಸಲು ಹಿಂದೇಟು ಹಾಕುವ ತಂದೆ ತಾಯಿಯ ನಡುವೆ ಹೆಣ್ಣು ಮಗಳನ್ನು ಸೈನ್ಯಕ್ಕೆ ಸೇರಿಸಿ ದೇಶಾಭಿಮಾನ ಮೆರೆದ ಆಕೆಯ ತಂದೆ-ತಾಯಿಗೂ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.
ಮೌಲ್ಯ ಗುಂಡ್ಲುಪೇಟೆ ತಾಲ್ಲೂಕು ತೆರಕಣಾಂಬಿ ಬಳಿಯ ದೇಪಾಪುರ ಗ್ರಾಮದಲ್ಲಿ ಜನಿಸಿ, ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಸ.ಹಿ.ಪ್ರಾ.ಶಾಲೆಯಲ್ಲಿ ವ್ಯಾಸಂಗ ಮಾಡಿ, ಆರನೇ ತರಗತಿಯಿಂದ ಸರ್ಕಾರಿ ಆದರ್ಶ ಶಾಲೆಯಲ್ಲಿ ಓದಿ ಪಿಯುಸಿಯನ್ನು ಸರಗೂರಿನ ವಿವೇಕಾನಂದ ಚಾರಿಟಬಲ್ ಟ್ರಸ್ಟ್ ಮತ್ತು ಬಿ.ಎಸ್ಸಿಯನ್ನು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಮುಗಿಸಿದ್ದಾರೆ. ಜತೆಗೆ ಎನ್‌ಸಿಸಿಯಲ್ಲಿ ತೊಡಗಿಸಿಕೊಂಡು ಹಾಗೂ ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧೆ ಮಾಡುತ್ತಾ ಬಂದಿದ್ದ ಮೌಲ್ಯ ಕಳೆದ ವರ್ಷ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಾಯೋಗಿಕ ಪರೀಕ್ಷೆಯಲ್ಲೂ ಉತ್ತೀರ್ಣ ರಾಗಿದ್ದಾರೆ.
ಈಗ ಮಿಲಿಟರಿ ಪೊಲೀಸ್‌ನಲ್ಲಿ ಆರು ತಿಂಗಳ ತರಬೇತಿ ಪಡೆದು ತರಬೇತಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಗಳಿಸಿದ್ದಾರೆ.
” ನನಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸಕ್ಕೆ ಸೇರಲು ಅವಕಾಶವಿತ್ತು. ಆದರೆ ನನಗೆ ಎನ್‌ಸಿಸಿ ಮುಗಿಸಿದ ನಂತರ ಸೈನ್ಯಕ್ಕೆ ಸೇರಿ ದೇಶ ಸೇವೆ ಸಲ್ಲಿಸಬೇಕೆಂಬ ಆಸೆ ಇತ್ತು. ಹಾಗಾಗಿ ಖುಷಿಯಿಂದ ಈ ಕ್ಷೇತ್ರವನ್ನು ಆಯ್ದುಕೊಂಡಿದ್ದೇನೆ.”
-ಡಿ.ಸಿ.ಮೌಲ್ಯ,
” ಸೇನೆಗೆ ಸೇರ್ಪಡೆಯಾದ ಯುವತಿ ನನ್ನ ಮಗಳು ದೇಶ ಸೇವೆ ಮಾಡಲು ಸೈನ್ಯಕ್ಕೆ ಸೇರ್ಪಡೆಯಾಗಿರುವುದು ಸಂತಸ ತಂದಿದೆ. ಆಕೆಗೆ ಕ್ರೀಡೆಯ ಬಗ್ಗೆ ಆಸಕ್ತಿ ಇತ್ತು. ಜೊತೆಗೆ ಕಷ್ಟವಾದ ಕೆಲಸವನ್ನು ಒಬ್ಬ ಹೆಣ್ಣು ಮಗಳಾಗಿ ಮಾಡಿ ತೋರಿಸಬೇಕೆಂಬ ಛಲವಿತ್ತು. ಅದಕ್ಕಾಗಿ ಎನ್‌ಸಿಸಿ ಸೇರಿದ್ದಳು. ನಂತರ ಅಗ್ನಿವೀರ್ ಆನ್‌ಲೈನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಾಕ್ಟಿಕಲ್ ಪರೀಕ್ಷೆಯಲ್ಲಿ ಉತ್ತೀರ್ಣಳಾದಳು. ಮೊದಲು ನಮಗೆ ಭಯವಿತ್ತು. ಆಗ ಆಕೆಯೇ ನಮಗೆ ಧೈರ್ಯ ತುಂಬಿದ್ದಳು. ಈಗ ಮಗಳ ಬೆಳವಣಿಗೆ ನೋಡಿ, ಸಂತಸ, ಹೆಮ್ಮೆಯಾಗುತ್ತಿದೆ. ಮೌಲ್ಯಳ ದೊಡ್ಡಮ್ಮ ದೈಹಿಕ ಶಿಕ್ಷಕಿ ಅನ್ನಪೂರ್ಣ ಸಹ ಎನ್‌ಸಿಸಿಗೆ ಸೇರಲು ಪ್ರೇರಣೆ ನೀಡಿ ಬೆನ್ನೆಲುಬಾಗಿ ನಿಂತಿದ್ದರು. ಈಗ ಎಲ್ಲರ ಶ್ರಮಕ್ಕೆ ಬೆಲೆ ಸಿಕ್ಕಿದೆ.”
–ಚಂದ್ರಶೇಖರ್ ದೇಪಾಪುರ,
ಮೌಲ್ಯ ಅವರ ತಂದೆ
ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…
ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…