ಸಾಲೋಮನ್
ಮೈಸೂರು: ಕಾಲು ಕಳೆದುಕೊಂಡು ಹಾಸಿಗೆ ಹಿಡಿದಿರುವ ತಾಯಿಯ ಸೇವೆ ಮಾಡುತ್ತಲೇ ಕುಟುಂಬದ ಜವಾಬ್ದಾರಿ ಹೊತ್ತುಕೊಂಡಿರುವ ವಿದ್ಯಾರ್ಥಿನಿ ಗುಲ್ ಅಫ್ತಾ ಖಾನಂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ರಾಜೀವ್‌ನಗರ ಬಡಾವಣೆಯ ಮೊದಲ ಹಂತದ ನಿವಾಸಿ ಫರಾನ್ ಹಾಗೂ ಸಬೀನಾ ಖಾನಂ ದಂಪತಿಯ ಏಕೈಕ ಪುತ್ರಿಯಾಗಿರುವ ಗುಲ್ ಅಫ್ತಾ ಖಾನಂ ಎಸ್‌ಎಸ್‌ಎಲ್‌ಸಿಯಲ್ಲಿಯೂ ಉತ್ತಮ ಅಂಕಗಳನ್ನು ಪಡೆದುಕೊಂಡಿದ್ದು, ಎಂಬಿಎ ಶಿಕ್ಷಣ ಪಡೆಯಬೇಕೆಂಬ ಅಭಿಲಾಷೆಯನ್ನು ಹೊಂದಿದ್ದಾರೆ. ಕಾಲು ಕಳೆದುಕೊಂಡಿ ರುವ ತಾಯಿಯ ಸೇವೆಯನ್ನು ಮಾಡುತ್ತಾ, ಎಲ್ಲಾ ಜವಾಬ್ದಾರಿಯನ್ನು ನಿರ್ವಹಿಸುತ್ತಲೇ ತನ್ನ ವಿದ್ಯಾಭ್ಯಾಸದ ಕಡೆಗೂ ಗಮನ ಕೊಟ್ಟಿದ್ದಾರೆ.
ಮನೆ ಕೆಲಸಗಳನ್ನು ಮುಗಿಸಿ ಬಿಡುವು ಸಿಕ್ಕಾಗ ಟಿವಿ, ಮೊಬೈಲ್ ಬಿಟ್ಟು ಓದಿನ ಕಡೆಗೆ ಗಮನಹರಿಸಿದ ಫಲವಾಗಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ‘ನನಗೆ ಬಿಸಿನೆಸ್ ಸ್ಟಡೀಸ್‌ನಲ್ಲಿ ಹೆಚ್ಚು ಆಸಕ್ತಿ ಇದೆ. ಈಗ ಬಿಬಿಎಗೆ ಸೇರುತ್ತೇನೆ. ನಂತರ ಎಂಬಿಎ ಓದಬೇಕೆಂಬ ಆಸೆ ಇಟ್ಟುಕೊಂಡಿದ್ದೇನೆ ಎನ್ನುತ್ತಾರೆ ಗುಲ್ ಅಫ್ತಾ ಖಾನಂ. ಇವರ ತಂದೆ ಫಾರಾನ್ ಖಾನ್ ಆಟೋ ಚಾಲಕರಾಗಿದ್ದಾರೆ. ಕುಟುಂಬದಲ್ಲಿ ಆರ್ಥಿಕ ಸಮಸ್ಯೆಗಳು ಇದ್ದಾಗ್ಯೂ ಮಗಳ ವಿದ್ಯಾಭ್ಯಾಸಕ್ಕೆ ಏನು ತೊಂದರೆಯಾಗದಂತೆ ಬೆನ್ನೆಲುಬಾಗಿ ನಿಂತಿದ್ದಾರೆ. ಗುಲ್ ಅಫ್ತಾ ಖಾನಂ ಬಿಸಿನೆಸ್ ಸ್ಟಡೀಸ್-೯೩, ಅಕೌಂಟೆನ್ಸಿ-೮೫, ಎಕನಾಮಿಕ್ಸ್-೮೫, ಹಿಸ್ಟ್ರಿ-೮೨ ಹಾಗೂ ಇಂಗ್ಲಿಷ್-೭೬ ಸೇರಿ ೫೦೯ ಅಂಕಗಳನ್ನು ಪಡೆದಿದ್ದಾರೆ.
ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…