ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯವರೆಗಿನ ರಸ್ತೆ ದುರಸ್ತಿ ಕಾಮಗಾರಿ ಶುರು
ಎಚ್.ಡಿ.ಕೋಟೆ: ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ರಸ್ತೆಯನ್ನು ಸ್ವಲ್ಪಮಟ್ಟಗಾದರೂ ಸರಿಪಡಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿದ್ದಾರೆ.
ಪಟ್ಟಣದ ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯ ಸವ್ವೆ ರಸ್ತೆವರೆಗೆ ಕಳೆದ 2 ವರ್ಷಗಳಿಂದ ರಸ್ತೆ ತುಂಬಾ ಗುಂಡಿಗಳಾಗಿ ವಾಹನ ಚಾಲಕರು, ಸಾರ್ವಜನಿಕರು ಸಂಚರಿಸಲು ತೊಂದರೆಯಾಗಿತ್ತು. ಅಲ್ಲದೆ ಈ ರಸ್ತೆ ಗದ್ದಿಗೆ ಮುಖ್ಯ ರಸ್ತೆ ಆಗಿರುವುದರಿಂದ ಮೈಸೂರು- ಗದ್ದಿಗೆ ಹಾಗೂ ಸುತ್ತಮುತ್ತಲ ಹಳ್ಳಿಗಳ ವ್ಯಾಪ್ತಿಯಲ್ಲಿ ನಿತ್ಯ ಸಾವಿರಾರು ಜನ ಸಂಚರಿಸುತ್ತಿದ್ದು, ಅನೇಕರು ಈ ರಸ್ತೆ ಅವ್ಯವಸ್ಥೆಯಿಂದ ಪರ್ಯಾಯ ರಸ್ತೆಗಳ ಮೂಲಕ ಸಂಚರಿಸುತ್ತಿದ್ದರು. ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಇದ್ದರೂ ದುಸ್ಥಿತಿಯಿಂದ ಕೂಡಿರುವ ಈ ರಸ್ತೆಯಿಂದ ಬೇಸತ್ತ ಜನರು ಪುರಸಭಾ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ಈ ವಿಚಾರ ತಿಳಿದ ಶಾಸಕ ಅನಿಲ್ ಚಿಕ್ಕಮಾದು ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿ ಬೋರಯ್ಯ ಮತ್ತು ಗುತ್ತಿಗೆದಾರ ಕೊಡಸಿಗೆ ರಾಜೇಗೌಡರವರಿಗೆ ಈ ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಕಳೆದ 2-3 ದಿನಗಳಿಂದ ಗುತ್ತಿಗೆದಾರ ಕೊಡಸಿಗೆ ರಾಜೇಗೌಡ ರಸ್ತೆಯನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಸಾರ್ವಜನಿಕರು, ಪ್ರಯಾಣಿಕರು ರಸ್ತೆಯಲ್ಲಿ ಸಂಚರಿಸಲು ಅನುವಾಗಲಿದೆ.
ವಡ್ಡರಗುಡಿ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು ಇದನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು 3 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ. ಟೆಂಡರ್ ಕಕರೆದು ಕಾಮಗಾರಿಯನ್ನು ನಡೆಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು,
ಪ್ರಯಾಣಿಕರಿಗೆ ತೊಂದರೆ ಆಗಬಾರದೆಂಬ ಉದ್ದೇಶಕ್ಕಾಗಿ ತಾತ್ಕಾಲಿಕವಾಗಿ ರಸ್ತೆಯನ್ನು ಇಲಾಖೆ ಮತ್ತು ಗುತ್ತಿಗೆದಾರರ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ.
-ಅನಿಲ್ ಚಿಕ್ಕಮಾದು, ಶಾಸಕರು
ಗದ್ದಿಗೆ ಸರ್ಕಲ್ ನಿಂದ ವಡ್ಡರಗುಡಿವರೆಗಿನ 2 ಕಿ.ಮೀ, ಮುಖ್ಯ ರಸ್ತೆ ಬರೀ ಗುಂಡಿಗಳಿಂದ ಕೂಡಿ ಸಮಸ್ಯೆ ಉಂಟಾಗಿತ್ತು. ಶಾಸಕರು ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿರುವುದರಿಂದ ಅಭಿವೃದ್ಧಿಪಡಿಸಲಾಗುತ್ತದೆ.
-ಕೊಡಸಿಗೆ ರಾಜೇಗೌಡ, ಪ್ರಥಮ ದರ್ಜೆ ಗುತ್ತಿಗೆದಾರ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…