Andolana originals

ಹದಗೆಟ್ಟ ರಸ್ತೆಗೆ ತಾತ್ಕಾಲಿಕ ದುರಸ್ತಿ ಭಾಗ್ಯ

ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯವರೆಗಿನ ರಸ್ತೆ ದುರಸ್ತಿ ಕಾಮಗಾರಿ ಶುರು

  • ಮಂಜು ಕೋಟೆ

ಎಚ್‌.ಡಿ.ಕೋಟೆ:  ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ರಸ್ತೆಯನ್ನು ಸ್ವಲ್ಪಮಟ್ಟಗಾದರೂ ಸರಿಪಡಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿದ್ದಾರೆ.

ಪಟ್ಟಣದ ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯ ಸವ್ವೆ ರಸ್ತೆವರೆಗೆ ಕಳೆದ 2 ವರ್ಷಗಳಿಂದ ರಸ್ತೆ ತುಂಬಾ ಗುಂಡಿಗಳಾಗಿ ವಾಹನ ಚಾಲಕರು, ಸಾರ್ವಜನಿಕರು ಸಂಚರಿಸಲು ತೊಂದರೆಯಾಗಿತ್ತು. ಅಲ್ಲದೆ ಈ ರಸ್ತೆ ಗದ್ದಿಗೆ ಮುಖ್ಯ ರಸ್ತೆ ಆಗಿರುವುದರಿಂದ ಮೈಸೂರು- ಗದ್ದಿಗೆ ಹಾಗೂ ಸುತ್ತಮುತ್ತಲ ಹಳ್ಳಿಗಳ ವ್ಯಾಪ್ತಿಯಲ್ಲಿ ನಿತ್ಯ ಸಾವಿರಾರು ಜನ ಸಂಚರಿಸುತ್ತಿದ್ದು, ಅನೇಕರು ಈ ರಸ್ತೆ ಅವ್ಯವಸ್ಥೆಯಿಂದ ಪರ್ಯಾಯ ರಸ್ತೆಗಳ ಮೂಲಕ ಸಂಚರಿಸುತ್ತಿದ್ದರು. ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಇದ್ದರೂ ದುಸ್ಥಿತಿಯಿಂದ ಕೂಡಿರುವ ಈ ರಸ್ತೆಯಿಂದ ಬೇಸತ್ತ ಜನರು ಪುರಸಭಾ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.

ಈ ವಿಚಾರ ತಿಳಿದ ಶಾಸಕ ಅನಿಲ್ ಚಿಕ್ಕಮಾದು ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿ ಬೋರಯ್ಯ ಮತ್ತು ಗುತ್ತಿಗೆದಾರ ಕೊಡಸಿಗೆ ರಾಜೇಗೌಡರವರಿಗೆ ಈ ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಕಳೆದ 2-3 ದಿನಗಳಿಂದ ಗುತ್ತಿಗೆದಾರ ಕೊಡಸಿಗೆ ರಾಜೇಗೌಡ ರಸ್ತೆಯನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಸಾರ್ವಜನಿಕರು, ಪ್ರಯಾಣಿಕರು ರಸ್ತೆಯಲ್ಲಿ ಸಂಚರಿಸಲು ಅನುವಾಗಲಿದೆ.

 

ವಡ್ಡರಗುಡಿ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು ಇದನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು 3 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ. ಟೆಂಡರ್ ಕಕರೆದು ಕಾಮಗಾರಿಯನ್ನು ನಡೆಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು,
ಪ್ರಯಾಣಿಕರಿಗೆ ತೊಂದರೆ ಆಗಬಾರದೆಂಬ ಉದ್ದೇಶಕ್ಕಾಗಿ ತಾತ್ಕಾಲಿಕವಾಗಿ ರಸ್ತೆಯನ್ನು ಇಲಾಖೆ ಮತ್ತು ಗುತ್ತಿಗೆದಾರರ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ.
-ಅನಿಲ್ ಚಿಕ್ಕಮಾದು, ಶಾಸಕರು

ಗದ್ದಿಗೆ ಸರ್ಕಲ್‌ ನಿಂದ ವಡ್ಡರಗುಡಿವರೆಗಿನ 2 ಕಿ.ಮೀ, ಮುಖ್ಯ ರಸ್ತೆ ಬರೀ ಗುಂಡಿಗಳಿಂದ ಕೂಡಿ ಸಮಸ್ಯೆ ಉಂಟಾಗಿತ್ತು. ಶಾಸಕರು ರಸ್ತೆಯನ್ನು ತಾತ್ಕಾಲಿಕವಾಗಿ ಅಭಿವೃದ್ಧಿಪಡಿಸಲು ಸೂಚಿಸಿರುವುದರಿಂದ ಅಭಿವೃದ್ಧಿಪಡಿಸಲಾಗುತ್ತದೆ.
-ಕೊಡಸಿಗೆ ರಾಜೇಗೌಡ, ಪ್ರಥಮ ದರ್ಜೆ ಗುತ್ತಿಗೆದಾರ.

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

13 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

13 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

14 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

14 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

14 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

18 hours ago