Andolana originals

ಬರೋಬ್ಬರಿ ೩,೧೭೩ ಕಲಾವಿದರಿಂದ ಅರ್ಜಿ ಸಲ್ಲಿಕೆ!

ದಿನೇಶ್ ಕುಮಾರ್ ಎಚ್.ಎಸ್.

ಕರ್ನಾಟಕ ಹಾಗೂ ಹೊರ ರಾಜ್ಯಗಳ ಕಲಾವಿದರಿಂದಲೂ ಕಾರ್ಯಕ್ರಮ 

ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನುಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ ೩,೧೭೩ ಮಂದಿ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ.

ನಾಡಹಬ್ಬ ದಸರೆಯ ಒಂಬತ್ತು ದಿನಗಳಲ್ಲಿ ದೇಶದ ವಿವಿಧೆ ಡೆಗಳಿಂದಆಗಮಿಸುವ ಕಲಾ ವಿದರು, ಕಲಾ ರಸಿಕರಿಗೆ ತಮ್ಮಲ್ಲಿರುವ ಕಲೆಯನ್ನು ಉಣಬಡಿಸುತ್ತಾರೆ. ಈ ಬಾರಿ ಸೆ.೨೨ರಂದು ದಸರಾ ಉದ್ಘಾಟನೆಯಾಗಲಿದ್ದು, ಸೆ.೨೯ರವರೆಗೆ ಅರಮನೆ ವೇದಿಕೆ ಸೇರಿದಂತೆ ನಗರದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ದಸರಾ ವೇಳೆ ಅರಮನೆಯ ವೇದಿಕೆಯಲ್ಲಿ ೮ ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಉಳಿದಂತೆ ನಗರದ ಒಂಬತ್ತು ವಿವಿಧ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ಮೈಸೂರು ದಸರಾ | ಸಮಾಜಮುಖಿ ಕೆಲಸ ಮಾಡುತ್ತಿರುವ ಸಿನಿಮಾ : ಸಚಿವ ಮಹದೇವಪ್ಪ

ಈ ಹಿನ್ನೆಲೆಯಲ್ಲಿ ದಸರಾ ಸಾಂಸ್ಕೃತಿಕ ಉಪ ಸಮಿತಿಯು ಒಟ್ಟು ೪೮೮ ಕಾರ್ಯಕ್ರಮಗಳನ್ನು ವಿವಿಧ ವೇದಿಕೆಗಳಲ್ಲಿ ಆಯೋ ಜಿಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಕಲಾವಿದರಿಂದ ಅರ್ಜಿಯನ್ನೂ ಆಹ್ವಾನಿಸಿತ್ತು. ಹೀಗಾಗಿ ೩,೧೭೩ ಮಂದಿ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಗರದ ಜಗನ್ಮೋಹನ ಅರಮನೆ, ಕಲಾಮಂದಿರ, ಕಿರುರಂಗ ಮಂದಿರ, ನಾದಬ್ರಹ್ಮ, ಗಾನಭಾರತಿ, ಚಿಕ್ಕ ಗಡಿಯಾರ, ಪುರಭವನ, ನಂಜನಗೂಡಿನ ಅರಮನೆ ಮಾಳ ಹೀಗೆ ಮೈಸೂರು ಅರಮನೆ ಆವರಣ ಸೇರಿದಂತೆ ೧೦ ವೇದಿಕೆಗಳಲ್ಲಿ ಕಾರ್ಯಕ್ರಮ ಜರುಗಲಿದೆ.

ನಾಟಕ, ಭರತನಾಟ್ಯ, ಸಮೂಹ ಗಾಯನ, ನೃತ್ಯ ರೂಪಕ, ಸಂಗೀತ, ಭಾವಗೀತೆ, ಕೂಚುಪುಡಿ, ವಚನ ಗಾಯನ, ವಚನ ರೂಪಕ ಸೇರಿದಂತೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ಸೆಳೆಯಲಿವೆ. ಹೊರ ರಾಜ್ಯದ ಕಲಾವಿದರು: ಇದೇ ವೇಳೆ ನಮ್ಮ ರಾಜ್ಯದ ಕಲಾವಿದರ ಜೊತೆಗೆ ಹೊರ ರಾಜ್ಯಗಳಿಂದಲೂ ಕಲಾವಿದರು ತಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಮೈಸೂರಿನಲ್ಲಿ ಅನಾವರಣಗೊಳಿಸಲಿದ್ದಾರೆ.

ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಹೊಸದಿಲ್ಲಿ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಆಗಮಿಸಿ ಪ್ರದರ್ಶನ ನೀಡಲಿದ್ದಾರೆ. ನಾಗಪುರದಿಂದ ಆಗಮಿಸುವ ಕಲಾವಿದರು. ಸೆ.೨೨ರಂದು ಸಂಜೆ ಕಲಾಮಂದಿರದಲ್ಲಿ ‘ಸಾಮ್ರಾಟ್ ಅಶೋಕ’ ನಾಟಕ ಪ್ರಸ್ತುತಪಡಿಸಲಿದ್ದು, ಇದು ವಿಶೇಷ ಆಕರ್ಷಣೆಯಾಗಲಿದೆ.

” ನಾಡಹಬ್ಬ ದಸರಾ ವೇಳೆ ನಡೆಯುವ ಕಾರ್ಯಕ್ರಮಗಳ ಪಟ್ಟಿ ಈಗಾಗಲೇ ಅಂತಿಮ ಹಂತದಲ್ಲಿದ್ದು, ಸೋಮವಾರ ಜಿಲ್ಲಾಧಿಕಾರಿಯವರು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಜಾತಿ, ಧರ್ಮ, ಲಿಂಗಬೇಧವಿಲ್ಲದೆಅರ್ಹ ಕಲಾವಿದರಿಗೆ ದಸರಾದಲ್ಲಿ ವೇದಿಕೆ ಒದಗಿಸಲಾಗುತ್ತಿದೆ. ಹೊರ ರಾಜ್ಯಗಳ ಪರಂಪರೆ, ಸಂಸ್ಕೃತಿ ಕೂಡ ಅನಾವರಣಗೊಳ್ಳಲಿದೆ.”

-ಡಾ.ಎಂ.ಡಿ.ಸುದರ್ಶನ್, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

8 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

9 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

10 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago