Andolana originals

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ

ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ

೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ ಅತ್ಯುತ್ತಮ ಸ್ತಬ್ಧಚಿತ್ರಗಳಿಗೆ ಅವಕಾಶ

ಮೈಸೂರು: ಲಕ್ಷಾಂತರ ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ವಿಶ್ವವಿಖ್ಯಾತ ಮೈಸೂರು ದಸರೆಯ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ ತ್ರಿಸಂಗಮವನ್ನು ಬಿಂಬಿಸುವಂತಹ ಸ್ತಬ್ಧಚಿತ್ರಗಳು ಮೇಳೈಸಲಿವೆ.

ಸ್ಥಳೀಯ ಕಲೆ, ಪರಂಪರೆ, ಇತಿಹಾಸವನ್ನು ಬಿಂಬಿಸುವುದರಿಂದ ದೇಶದ ಅಖಂಡತೆ, ಸಾರ್ವಭೌಮತ್ವವನ್ನು ಸಾರುವಂತಹ ರೀತಿಯಲ್ಲಿ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರದ ಸ್ತಬ್ಧಚಿತ್ರಗಳು ಭಾಗಿಯಾಗುವ ಮೂಲಕ ಕಣ್ಮನ ಸೆಳೆಯಲಿವೆ.

ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಯುಳ್ಳ ಚಿನ್ನದ ಅಂಬಾರಿ ಹೊರಲಿರುವ ಗಜಪಡೆ ಜತೆಗೆ, ಸ್ತಬ್ಧಚಿತ್ರಗಳು, ಕಲಾತಂಡಗಳ ನೃತ್ಯ ಪ್ರದರ್ಶನ ನೋಡುಗರನ್ನು ಸೆಳೆಯಲಿವೆ.

ಪ್ರತಿವರ್ಷ ದಕ್ಷಿಣ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ, ಉತ್ತರ ಕರ್ನಾಟಕ ಭಾಗವೆಂದು ನೋಡದೆ ಎಲ್ಲಾ ಜಿಲ್ಲೆಗಳ ಸ್ತಬ್ಧಚಿತ್ರಗಳು, ವಿವಿಧ ಇಲಾಖೆ, ನಿಗಮಗಳು, ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸ್ತಬ್ಧಚಿತ್ರಗಳು ಪಾಲ್ಗೊಳ್ಳುತ್ತಿದ್ದವು. ಆದರೆ, ಈ ಬಾರಿ ಗುಣಮಟ್ಟಕ್ಕೆ ಆದ್ಯತೆ ನೀಡುವ ಜೊತೆಗೆ, ಹೊಸತನದಿಂದ ಕೂಡಿರಬೇಕು ಎನ್ನುವ ಕಾರಣಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯು ಈ ಬಾರಿ ಹೊಸತನ ಹಾಗೂ ಆಕರ್ಷಣೀಯವಾಗಿರುವಂತೆ ಮಾಡಲು ತ್ರಿಸಂಗಮ ಮಾದರಿಯನ್ನು ಬಿಂಬಿಸುವಂತಹ ಸ್ತಬ್ಧಚಿತ್ರಗಳನ್ನು ತಯಾರಿಸುವುದಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಏನಿದು ತ್ರಿಸಂಗಮ ಸೂತ್ರ?: ರಾಜ್ಯದ ೩೧ ಜಿಲ್ಲೆಗಳ ಪೈಕಿ ೧೫ ಜಿಲ್ಲೆಗಳ ಅತ್ಯುತ್ತಮವಾದ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗುತ್ತಿದೆ. ಈಗಾಗಲೇ ಆಯಾಯ ಜಿಲ್ಲೆಗಳಿಂದ ಥೀಮ್ ಗಳನ್ನು ಪಡೆದುಕೊಂಡಿರುವ ಆಯ್ಕೆ ಸಮಿತಿಯು ಇನ್ನು ಎರಡು-ಮೂರು ದಿನಗಳಲ್ಲಿ ಸ್ತಬ್ಧಚಿತ್ರಗಳನ್ನು ಅಂತಿಮಗೊಳಿಸಲಿದೆ. ನಂತರ, ಆಯ್ಕೆಯಾಗುವ ಜಿಲ್ಲೆಗಳು ತಮ್ಮ ಪ್ರಾದೇಶಿಕತೆಗೆ ಸಂಬಂಧಿಸಿದಂತೆ ಎಲ್ಲವನ್ನೂ ಬಿಂಬಿಸುವ ಮಾದರಿಯಲ್ಲಿ ಸ್ತಬ್ಧಚಿತ್ರ ನಿರ್ಮಾಣ ಮಾಡಲಿದೆ.

ಮೈಸೂರು ಆಯ್ಕೆ ಮಾಡಿಕೊಂಡರೆ ಪಕ್ಕದ ಚಾಮರಾಜನಗರ ಜಿಲ್ಲೆಯ ಇತಿಹಾಸ, ಪರಂಪರೆಯನ್ನು ಇದರಲ್ಲಿ ಸೇರಿಸಿಕೊಂಡು ನಿರ್ಮಿಸಬೇಕಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮಗಳು ನಿರ್ಮಾಣ ಮಾಡುವಂತಹ ಸ್ತಬ್ಧಚಿತ್ರಗಳಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ, ಡಿ.ಕೆ.ಶಿವಕುಮಾರ್ ಸಿಎಂ ಆದ ಬಳಿಕ ಜಾರಿಗೆ ತಂದ ಯೋಜನೆಗಳನ್ನು ಪ್ರತಿಬಿಂಬಿಸುವ ಜತೆಗೆ, ಐಟಿ-ಬಿಟಿ ಕ್ಷೇತ್ರದಲ್ಲಿ ಮಾಡಿರುವ ಸಾಧನೆ, ‘ಒಂದು ರಾಜ್ಯ-ಒಂದು ಜಗತ್ತು’ ಎನ್ನುವ ಪ್ರವಾಸೋದ್ಯಮ, ಕಲೆ, ಸಂಸ್ಕೃತಿಯನ್ನು ಬಿಂಬಿಸುವಂತಹ ಮಾದರಿಗಳಡಿ ನಿರ್ಮಾಣ ಮಾಡಲಾಗುತ್ತದೆ.

ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನಿರ್ಮಿಸಲಿರುವ ಸ್ತಬ್ಧಚಿತ್ರಗಳಲ್ಲಿ ಹೊಸತನಕ್ಕೆ ಆದ್ಯತೆ ನೀಡಲು ಅಽಕಾರಿಗಳಿಗೆ ಸೂಚನೆ ನೀಡಲಾಗಿದೆ.

” ಜಂಬೂಸವಾರಿ ಮೆರವಣಿಗೆಯಲ್ಲಿ ಜಿಲ್ಲಾವಾರು ೧೫ ಜಿಲ್ಲೆಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲು ರಾಜ್ಯಮಟ್ಟದ ಸಮಿತಿ ರಚಿಸಲಾಗಿದ್ದು, ಅಲ್ಲಿಯೇ ಅಂತಿಮಗೊಳಿಸಲಾಗುತ್ತದೆ. ಈ ಬಾರಿ ಸ್ಥಳೀಯ, ರಾಜ್ಯ, ದೇಶದ ಪರಂಪರೆ, ಸಾಧನೆ ಬಿಂಬಿಸುವಂತಹ ಸ್ತಬ್ಧಚಿತ್ರಗಳನ್ನು  ಜನರ ಗಮನ ಸೆಳೆಯುವಂತೆ ನಿರ್ಮಾಣ ಮಾಡಲಾಗುತ್ತದೆ. ಎರಡು-ಮೂರು ದಿನಗಳಲ್ಲಿ ಥೀಮ್ ರೆಡಿಯಾಗಲಿದೆ. ಪರಿಸರ, ತಂತ್ರಜ್ಞಾನ, ಕಲೆ ಮೊದಲಾದ ಅಂಶಗಳು ಸೇರಲಿವೆ.”

ಬಿ.ಎಂ.ಸವಿತಾ, ಕಾರ್ಯಾಧ್ಯಕ್ಷರು, ಸ್ತಬ್ಧಚಿತ್ರ ಉಪ ಸಮಿತಿ

ರಾಷ್ಟ್ರದ ಸಾರ್ವಭೌಮತ್ವ ಪ್ರದರ್ಶನ: 

ಜಿಲ್ಲೆ, ರಾಜ್ಯ ಜತೆಗೆ ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್‌ಎಎಲ್, ಬಿಇಎಂಎಲ್, ಡಿಎಫ್ಆರ್‌ಎಲ್, ಸಿಎಫ್ಟಿಆರ್‌ಐ, ಬಿಇಎಲ್ ಸಂಸ್ಥೆಗಳು ಸಾಧನೆಗಳನ್ನು ಬಿಂಬಿಸುವಂತಹ ಸ್ತಬ್ಧಚಿತ್ರಗಳನ್ನು ನಿರ್ಮಿಸುವುದಕ್ಕೆ ಸಮಾಲೋಚನೆ ನಡೆಸಲಾಗುತ್ತಿದೆ. ಅದೇ ರೀತಿ ಭಾರತೀಯ ರೈಲ್ವೆ ಇಲಾಖೆಯು ಮೀಟರ್‌ಗೇಜ್‌ನಿಂದ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯವರೆಗೆ ಆಗಿರುವ ಸಾಧನೆಯನ್ನು ಕೂಡ ಅನಾವರಣ ಮಾಡುವ ಮೂಲಕ ತ್ರಿಸಂಗಮ ಮಾದರಿಯ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ.

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

3 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

7 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

10 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

14 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago