Andolana originals

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ

ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ

ಮೈಸೂರು: ದಸರಾ ಜಂಬೂಸವಾರಿಯಿಂದ ನಿವೃತ್ತಿಗೊಂಡಿರುವ ಕೂಂಬಿಂಗ್ ಸ್ಪೆಷಲಿಸ್ಟ್ ‘ಅಭಿಮನ್ಯು’ ಅ.೫ರಂದು ಅರಮನೆ ಪ್ರವೇಶಿಸಲಿದೆ.

ಸತತ ಆರು ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಹೊತ್ತು ಜಂಬೂಸವಾರಿಯ ವೈಭವ ಹೆಚ್ಚಿಸಿದ್ದ ಅಭಿಮನ್ಯುವಿನ ಆಗಮನ ಈ ಬಾರಿಯ ದಸರಾದಲ್ಲಿ ವಿಶೇಷ ಕುತೂಹಲ ಮೂಡಿಸಿದೆ.

೨೦೨೦ರಿಂದ ೨೦೨೫ರವರೆಗೆ ಸತತ ಆರು ಬಾರಿ ೭೫೦ ಕೆ.ಜಿ ತೂಕದ ಚಿನ್ನದ ಅಂಬಾರಿ ಯನ್ನು ಹೊತ್ತು ಸಾಗಿದ್ದ ಅಭಿಮನ್ಯು, ೬೦ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಬಾರಿ ಅಂಬಾರಿ ಆನೆಯಾಗಿ ಆಯ್ಕೆಯಾಗಿರಲಿಲ್ಲ. ಆದರೆ, ದಸರಾ ಮಹೋತ್ಸವದೊಂದಿಗೆ ಅವನಿಗಿರುವ ಅವಿನಾಭಾವ ಸಂಬಂಧ ಹಾಗೂ ಸುದೀರ್ಘ ಸೇವೆಯನ್ನು ಪರಿಗಣಿಸಿ ಮತ್ತು ಗೌರವಯುತವಾಗಿ ಬೀಳ್ಕೊಡುಗೆ ನೀಡುವಂತೆ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಅಂತಿಮ ಬಾರಿಗೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ.

‘ನಿಶಾನೆ ಆನೆ’ಯಾಗುವ ಸಂಭಾವ: ೬೦ ವರ್ಷದ ತುಂಬಿದ ಆನೆಗಳಿಗೆ ತೂಕ ಹೊರುವ ಕೆಲಸಗಳನ್ನು ಮಾಡಿಸಬಾರದು ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಹೀಗಾಗಿ ಅಭಿಮನ್ಯುವಿಗೆ ಭಾರ ಹೊರಿಸುವ ಮತ್ತು ಇತರೆ ಯಾವುದೇ ಜವಾಬ್ದಾರಿಯನ್ನು ನೀಡುವ ಪ್ರಕ್ರಿಯೆ ಇರುವುದಿಲ್ಲ. ಅದರ ಬದಲು ಈ ಹಿಂದೆ ೬೦ ತುಂಬಿದ ಬಲರಾಮ ಮತ್ತು ಅರ್ಜುನ ನಿಶಾನೆ ಆನೆ ಜವಾಬ್ದಾರಿ ಕೊಟ್ಟಂತೆ ಅಭಿಮನ್ಯುವಿಗೂ ದಸರಾಗೆ ನಿಶಾನೆ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

೨೫ ವರ್ಷಗಳ ದಸರಾ ಸೇವೆ: 

ಅಭಿಮನ್ಯು ಸುಮಾರು ೨೫ ವರ್ಷಗಳ ಕಾಲ ಮೈಸೂರು ದಸರಾ ಗಜಪಡೆಯೊಂದಿಗೆ ಗುರುತಿಸಿಕೊಂಡಿದ್ದಾನೆ. ಅಂಬಾರಿ ಹೊರುವ ಜವಾಬ್ದಾರಿಯ ಜತೆಗೆ ಕಾಡಾನೆ ಹಾಗೂ ಹುಲಿ ಸೆರೆ ಕಾರ್ಯಾಚರಣೆಗಳಲ್ಲಿಯೂ ಭಾಗವಹಿಸಿದ್ದಾನೆ. ೩೦೦ಕ್ಕೂ ಹೆಚ್ಚು ಕಾಡಾನೆಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ಹಾಗೂ ೮೦ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿರುವ ಅನುಭವವೂ ಆತನಿಗಿದೆ.

 

 

ಆಂದೋಲನ ಡೆಸ್ಕ್

Recent Posts

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

41 seconds ago

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

14 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

15 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

15 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

15 hours ago