ಗುತ್ತಿಗೆದಾರರೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾತನಾಡುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ತುಂಬಾ ಕೆಳಮಟ್ಟದಲ್ಲಿ ಅವಹೇಳನ ಮಾಡಿರುವುದಲ್ಲದೇ ಗುತ್ತಿಗೆದಾರನಿಗೂ ಆತನ ಜಾತಿ ಹಿಡಿದು ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ.
ಮುನಿರತ್ನ ತಮಗೆ ಎಲ್ಲ ಸಮುದಾಯದವರಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮು ದಾಯದವರೂ ಮತ ನೀಡಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ ಎಂಬುದನ್ನು ಮರೆತಂತಿದೆ.
ಒಬ್ಬ ಜನಪ್ರತಿನಿಧಿಯಾಗಿ ಸಾರ್ವಜನಿಕ ಜೀವನದಲ್ಲಿರುವವರು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಬಗ್ಗೆ ಗಮನಹರಿಸಬೇಕು. ಎಲ್ಲ ಸಮುದಾಯದವರನ್ನೂ ಸಮಾನವಾಗಿ ಕಂಡು ಸಮಾನತೆಯ ಸಂದೇಶವನ್ನು ರವಾನಿಸುವ ಮೂಲಕ ಭಾವೈಕ್ಯತೆ ಸಾಧಿಸುವುದು ಅವರ ಗುರಿಯಾಗಿರಬೇಕು. ಆದರೆ ಇಲ್ಲಿ ಶಾಸಕ ಮುನಿರತ್ನ ಜನರನ್ನು ಜಾತಿಯ ಆಧಾರದ ಮೇಲೆ ಅಳೆದಿದ್ದು, ಒಂದು ಸಮುದಾಯವನ್ನು ಅವಹೇಳನ ಮಾಡಿರುವುದು ಎಷ್ಟು ಸರಿ? ಇವರ ಮೇಲೆ ಕೇಳಿ ಬಂದಿರುವ ಆರೋಪ ನಿಜವೇ ಆಗಿದ್ದರೆ ಅವರು ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರಾಗಿ ಮುಂದುವರಿಯಲು ಯೋಗ್ಯರಲ್ಲ. ಆದ್ದರಿಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು.
ಈ ಜಾತಿನಿಂದನೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡುವ ಜತೆಗೆ ಸರ್ಕಾರವೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ.
-ಎಂ.ಎಸ್.ಪರಮಾನಂದ,
ರಾಜ್ಯ ಕಾರ್ಯದರ್ಶಿ, ಬಿಜೆಪಿ ಎಸ್ಸಿ ಮೋರ್ಚಾ,
ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…
ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ…
ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…
ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…