ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರಸಾದದ ರೂಪದಲ್ಲಿ ನೀಡಲಾಗುವ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿರುವುದಾಗಿ ಪರೀಕ್ಷೆಯಿಂದ ಸಾಬೀತಾಗಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ತಿರುಪತಿ ತಿಮ್ಮಪ್ಪನ ದೇವಾಲಯ ಹಿಂದೂ ಧರ್ಮೀಯರ ಪವಿತ್ರ ದೇವಾಲಯಗಳಲ್ಲಿ ಒಂದು. ಮಾಂಸಾಹಾರಿಗಳೂ ಮಾಂಸ ಸೇವನೆಯನ್ನು ಬಿಟ್ಟು ಭಕ್ತಿಯಿಂದ ದೇವಾಲಯಕ್ಕೆ ಬಂದು ಹೋಗುತ್ತಾರೆ. ಹೀಗಿರುವಾಗ ತಿಮ್ಮಪ್ಪನ ಪ್ರಸಾದದ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಬಳಸಿರುವುದು ಭಕ್ತರಲ್ಲಿ ಆಘಾತವನ್ನುಂಟು ಮಾಡಿದೆ. ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಆಚರಣೆಗಳನ್ನು ಮಾಡುವ ಹಕ್ಕನ್ನು ಸಂವಿಧಾನ ನೀಡಿದೆ. ಇಂತಹ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವುದು ಕಾನೂನುಬಾಹಿರ ಎಂಬುದು ತಿಳಿದಿದ್ದರೂ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶವನ್ನು ಸೇರಿಸಿರುವುದು ಶಿಕ್ಷಾರ್ಹ ಅಪರಾಧ. ಆದ್ದರಿಂದ ಸಂಬಂಧಪಟ್ಟ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಿದೆ.
-ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು