ಭೇರ್ಯ ಮಹೇಶ್
ಎಸ್‌ಡಿಎಂಸಿ ಕಾರ್ಯವೈಖರಿಯನ್ನು ಪರಿಗಣಿಸಿ ಶಿಕ್ಷಣ ಇಲಾಖೆಯಿಂದ ಪ್ರಶಸ್ತಿ ನೀಡಿಕೆ
ಕೆ.ಆರ್.ನಗರ: ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿಗೆ ಅಡಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ೨೦೨೫-೨೬ನೇ ಸಾಲಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯ ವೈಖರಿಯನ್ನು ಪರಿಗಣಿಸಿ ಅತ್ಯುತ್ತಮ ಪ್ರಶಸ್ತಿ ನೀಡಿದೆ.
ಈ ಶಾಲೆ ೧೯೩೪ರಲ್ಲಿ ಪ್ರಾರಂಭವಾಗಿದ್ದು, ಶತಮಾನೋತ್ಸವದ ಅಂಚಿನಲ್ಲಿದೆ. ಶಾಲೆ ಆರಂಭದಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿತ್ತು. ಪ್ರಸ್ತುತ ಒಂದರಿಂದ ಏಳನೇ ತರಗತಿವರೆಗೆ ೩೭ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಮುಖ್ಯ ಶಿಕ್ಷಕ ಹಾಗೂ ಇಬ್ಬರು ಸಹ ಶಿಕ್ಷಕರು ಇದ್ದಾರೆ. ಒಂದು ಎಕರೆ ವಿಸ್ತೀರ್ಣದಲ್ಲಿ ಮಕ್ಕಳ ಕಲಿಗೆ ಅನುಕೂಲಕರವಾದ ವಾತಾವರಣವನ್ನು ಕಟ್ಟಿಕೊಡಲಾಗಿದೆ. ಇದರೊ ಟ್ಟಿಗೆ ಅಂಗನವಾಡಿ ಕೇಂದ್ರ ಕೂಡ ನಡೆಯುತ್ತಿದೆ ಯುಕೋ ಕ್ಲಬ್, ಚಿತ್ರಕಲೆ, ವಿಜ್ಞಾನ ಪ್ರಯೋಗಾಲಯ, ಕ್ರೀಡಾ ಚಟುವಟಿಕೆ ಕ್ರಿಯಾಶೀಲವಾಗಿವೆ. ತಂತ್ರಜ್ಞಾನದ ಬಳಕೆಯಲ್ಲಿ ಮುಂದುವರಿದಿದ್ದು, ಪ್ರೊಜೆಕ್ಟರ್, ಕಂಪ್ಯೂಟರ್ ಉಪಯೋಗಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತಿದೆ. ಇದರೊಂದಿಗೆ ಶಾಲಾವರಣದಲ್ಲಿ ಅತ್ಯುತ್ತಮ ಕೈತೋಟ ನಿರ್ಮಿಸಲಾಗಿದೆ. ಆಯುರ್ವೇದ ಔಷಧಿಗಳಿಗೆ ಸಂಬಂಧಿಸಿದ ವಿವಿಧ ಬಗೆಯ ಸಸ್ಯಗಳನ್ನು ಬೆಳೆಸಲಾಗಿದೆ.
ಪ್ರಶಸ್ತಿ ದೊರೆತ ಸಂಭ್ರಮವನ್ನು ಹಂಚಿಕೊಂಡ ಎಸ್‌ಡಿಎಂಸಿ ಅಧ್ಯಕ್ಷ ಎ.ಸಿ.ಮಹೇಶ್ ಹಾಗೂ ಉಪಾಧ್ಯಕ್ಷೆ ರಮ್ಯ ಮಾತನಾಡಿ, ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲಾಗಿದೆ. ಶಾಲೆಯ ವಾತಾವರಣದಲ್ಲಿ ಮತ್ತಷ್ಟು ಸೃಜನಶೀಲತೆಯನ್ನು ತರುವ ಪ್ರಯತ್ನದಲ್ಲಿ ಸಮಿತಿ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು.
ಶಾಲೆಯಲ್ಲಿ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ ತ ಮುಖ್ಯ ಶಿಕ್ಷಕ ಬ್ಯಾಡರಹಳ್ಳಿ ಭಾಸ್ಕರ್ ಮಾತನಾಡಿ, ಶಾಲೆಯಲ್ಲಿನ ಸಮರ್ಪಕ ನಿರ್ವಹಣೆಯ ಹಿನ್ನೆಲೆಯ ಜೊತೆಗೆ ಸ್ಥಳೀಯ ದಾನಿಗಳು ಮತ್ತು ಪಂಚಾಯಿತಿಯ ಸಹಕಾರದೊಂದಿಗೆ ಬಹುತೇಕವಾಗಿ ಶಾಲೆಯ ವಾತಾವರಣವನ್ನು ಕಲಿಕೆಯ ಪ್ರಯೋಗಕ್ಕೆ ವಿಸ್ತರಿಸಲಾಗಿದೆ ಎಂದರು.
” ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನೂ ಒದಗಿಸಿ ಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯ ದಾನಿಗಳ ಸಹಕಾರ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಹಕಾರ ಬಹಳ ಪ್ರಮುಖವಾಗಿದೆ. ಶಾಲೆಯನ್ನು ಮತ್ತಷ್ಟು ಮಕ್ಕಳ ಕಲಿಕೆಯ ಕಡೆ ಕೊಂಡೊಯ್ಯುವ ಚಿಂತನೆ ಹೊಂದಲಾಗಿದೆ.”
-ಬ್ಯಾಡರಹಳ್ಳಿ ಭಾಸ್ಕರ್, ಮುಖ್ಯಶಿಕ್ಷಕ
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…
ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…