Andolana originals

ಅಡಗನಹಳ್ಳಿ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಭೇರ್ಯ ಮಹೇಶ್

ಎಸ್‌ಡಿಎಂಸಿ ಕಾರ್ಯವೈಖರಿಯನ್ನು ಪರಿಗಣಿಸಿ ಶಿಕ್ಷಣ ಇಲಾಖೆಯಿಂದ ಪ್ರಶಸ್ತಿ ನೀಡಿಕೆ 

ಕೆ.ಆರ್.ನಗರ: ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿಗೆ ಅಡಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ೨೦೨೫-೨೬ನೇ ಸಾಲಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯ ವೈಖರಿಯನ್ನು ಪರಿಗಣಿಸಿ ಅತ್ಯುತ್ತಮ ಪ್ರಶಸ್ತಿ ನೀಡಿದೆ.

ಈ ಶಾಲೆ ೧೯೩೪ರಲ್ಲಿ ಪ್ರಾರಂಭವಾಗಿದ್ದು, ಶತಮಾನೋತ್ಸವದ ಅಂಚಿನಲ್ಲಿದೆ. ಶಾಲೆ ಆರಂಭದಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿತ್ತು. ಪ್ರಸ್ತುತ ಒಂದರಿಂದ ಏಳನೇ ತರಗತಿವರೆಗೆ ೩೭ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಮುಖ್ಯ ಶಿಕ್ಷಕ ಹಾಗೂ ಇಬ್ಬರು ಸಹ ಶಿಕ್ಷಕರು ಇದ್ದಾರೆ. ಒಂದು ಎಕರೆ ವಿಸ್ತೀರ್ಣದಲ್ಲಿ ಮಕ್ಕಳ ಕಲಿಗೆ ಅನುಕೂಲಕರವಾದ ವಾತಾವರಣವನ್ನು ಕಟ್ಟಿಕೊಡಲಾಗಿದೆ. ಇದರೊ ಟ್ಟಿಗೆ ಅಂಗನವಾಡಿ ಕೇಂದ್ರ ಕೂಡ ನಡೆಯುತ್ತಿದೆ ಯುಕೋ ಕ್ಲಬ್, ಚಿತ್ರಕಲೆ, ವಿಜ್ಞಾನ ಪ್ರಯೋಗಾಲಯ, ಕ್ರೀಡಾ ಚಟುವಟಿಕೆ ಕ್ರಿಯಾಶೀಲವಾಗಿವೆ. ತಂತ್ರಜ್ಞಾನದ ಬಳಕೆಯಲ್ಲಿ ಮುಂದುವರಿದಿದ್ದು, ಪ್ರೊಜೆಕ್ಟರ್, ಕಂಪ್ಯೂಟರ್ ಉಪಯೋಗಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತಿದೆ. ಇದರೊಂದಿಗೆ ಶಾಲಾವರಣದಲ್ಲಿ ಅತ್ಯುತ್ತಮ ಕೈತೋಟ ನಿರ್ಮಿಸಲಾಗಿದೆ. ಆಯುರ್ವೇದ ಔಷಧಿಗಳಿಗೆ ಸಂಬಂಧಿಸಿದ ವಿವಿಧ ಬಗೆಯ ಸಸ್ಯಗಳನ್ನು ಬೆಳೆಸಲಾಗಿದೆ.

ಪ್ರಶಸ್ತಿ ದೊರೆತ ಸಂಭ್ರಮವನ್ನು ಹಂಚಿಕೊಂಡ ಎಸ್‌ಡಿಎಂಸಿ ಅಧ್ಯಕ್ಷ ಎ.ಸಿ.ಮಹೇಶ್ ಹಾಗೂ ಉಪಾಧ್ಯಕ್ಷೆ ರಮ್ಯ ಮಾತನಾಡಿ, ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲಾಗಿದೆ. ಶಾಲೆಯ ವಾತಾವರಣದಲ್ಲಿ ಮತ್ತಷ್ಟು ಸೃಜನಶೀಲತೆಯನ್ನು ತರುವ ಪ್ರಯತ್ನದಲ್ಲಿ ಸಮಿತಿ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು.

ಶಾಲೆಯಲ್ಲಿ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ ತ ಮುಖ್ಯ ಶಿಕ್ಷಕ ಬ್ಯಾಡರಹಳ್ಳಿ ಭಾಸ್ಕರ್ ಮಾತನಾಡಿ, ಶಾಲೆಯಲ್ಲಿನ ಸಮರ್ಪಕ ನಿರ್ವಹಣೆಯ ಹಿನ್ನೆಲೆಯ ಜೊತೆಗೆ ಸ್ಥಳೀಯ ದಾನಿಗಳು ಮತ್ತು ಪಂಚಾಯಿತಿಯ ಸಹಕಾರದೊಂದಿಗೆ ಬಹುತೇಕವಾಗಿ ಶಾಲೆಯ ವಾತಾವರಣವನ್ನು ಕಲಿಕೆಯ ಪ್ರಯೋಗಕ್ಕೆ ವಿಸ್ತರಿಸಲಾಗಿದೆ ಎಂದರು.

” ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನೂ ಒದಗಿಸಿ ಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯ ದಾನಿಗಳ ಸಹಕಾರ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಹಕಾರ ಬಹಳ ಪ್ರಮುಖವಾಗಿದೆ. ಶಾಲೆಯನ್ನು ಮತ್ತಷ್ಟು ಮಕ್ಕಳ ಕಲಿಕೆಯ ಕಡೆ ಕೊಂಡೊಯ್ಯುವ ಚಿಂತನೆ ಹೊಂದಲಾಗಿದೆ.”

-ಬ್ಯಾಡರಹಳ್ಳಿ ಭಾಸ್ಕರ್, ಮುಖ್ಯಶಿಕ್ಷಕ

 

 

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago