ಕೆ.ಬಿ.ರಮೇಶನಾಯಕ
ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ ಮಾರ್ಚ್ ತಿಂಗಳಲ್ಲಿ ಅಂತ್ಯವಾಗಲಿದ್ದು, ಸಕಾಲದಲ್ಲಿ ಚುನಾವಣೆ ನಡೆಸುವತ್ತ ಎಲ್ಲರ ಚಿತ್ತ ಹರಿದಿದೆ.
ಎಂಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಮೈಮುಲ್ ಆಡಳಿತವನ್ನು ತಮ್ಮ ಕೈ ವಶ ಮಾಡಿ ಕೊಳ್ಳಲು ಕಣ್ಣಿಟ್ಟಿದೆ. ಇದರಿಂದಾಗಿ, ಮುಂದಿನ ದಿನಗಳಲ್ಲಿ ನಡೆಯ ಲಿರುವ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಹಾಗೂ ಕಾಂಗ್ರೆಸ್ ನಡುವೆ ಹೋರಾಟ ನಡೆಯುವ ಲಕ್ಷಣಗಳು ಕಾಣಿಸಿಕೊಂಡಿದೆ.
ಕಳೆದ ಬಾರಿ ಬಹುಮತ ಗಳಿಸಿ ಅಧಿಕಾರ ಹಿಡಿದಿದ್ದ ಶಾಸಕ ಜಿ.ಡಿ.ಹರೀಶ್ಗೌಡರ ಬಣದಿಂದ ಈಗ ಅಧಿಕಾರ
ಕಾಂಗ್ರೆಸ್ ಬೆಂಬಲಿತರ ಪಾಲಾಗಿದೆ. ಹೀಗಾಗಿ, ಮುಂದಿನ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾರಣ -ಬ್ರವರಿ ತಿಂಗಳಲ್ಲಿ ಮತ್ತಷ್ಟು ಚಟುವಟಿಕೆ ನಡೆಯುವ ಸಾಧ್ಯತೆ ಇದೆ.
೨೦೨೧ರ ಮಾರ್ಚ್ ತಿಂಗಳಲ್ಲಿ ನಡೆದ ಮೈಮುಲ್ನ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಪುತ್ರ ಜಿ.ಡಿ.ಹರೀಶ್ಗೌಡರ ಬಣದವರು ಹೆಚ್ಚಿನ ಸ್ಥಾನಗಳಲ್ಲಿ ಗೆದ್ದು ಬೀಗಿದ್ದರು. ನಂತರ, ೨೦೨೧ರ ಮಾರ್ಚ್ ೩೦ರಂದು ನಡೆದಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಪಿರಿಯಾಪಟ್ಟಣ ಕ್ಷೇತ್ರದ ಮಾಜಿ ಶಾಸಕ ಕೆ.ಮಹದೇವ ಅವರ ಪುತ್ರ ಪಿ.ಎಂ.ಪ್ರಸನ್ನ ಅವಿರೋಧವಾಗಿ ಅಧ್ಯಕ್ಷರಾಗಿ ದ್ದರು. ನಂತರ, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದಾಗಿ ೨೦೨೪ರ ಆಗಸ್ಟ್ ೭ರಂದು ನಡೆದಿದ್ದ ಚುನಾವಣೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್ .ಸಿ.ಮಹದೇವಪ್ಪ ಪರಮಾಪ್ತ ಆರ್.ಚೆಲುವರಾಜು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಈ ವೇಳೆ ಕಾಂಗ್ರೆಸ್ ವರಿಷ್ಠರು ಅಧಿಕಾರ ಹಂಚಿಕೆ ಸೂತ್ರ ಹೆಣೆದಿದ್ದರಿಂದಾಗಿ ವರಿಷ್ಠರ ಸೂಚನೆಯಂತೆ ರಾಜೀನಾಮೆ ಕೊಟ್ಟಿದ್ದರು. ಹೀಗಾಗಿ, ಅಂತಿಮ ಹಂತದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಈರೇಗೌಡ ಅವರು ೨೦೨೫ರ ಅಕ್ಟೋಬರ್ ೨೩ರಂದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಇದೀಗ ಮಾರ್ಚ್ ೧೭ಕ್ಕೆ ಅವಧಿ ಮುಗಿಯುತ್ತಿರುವ ಕಾರಣ ಚುನಾವಣೆ ನಡೆಸುವ ತನಕ ತಮ್ಮನ್ನೇ ಮುಂದುವರಿಸುವಂತೆ ಮುಖ್ಯಮಂತ್ರಿಗಳ ಮನವೊಲಿಸಲು ಈಗಿನಿಂದಲೇ ಸಜ್ಜಾಗಿದ್ದಾರೆ. ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಪಾಳಯದಲ್ಲಿ ಗುರುತಿಸಿಕೊಂಡಿರುವ ಕೆ.ಈರೇಗೌಡರಿಗೆ ಹೆಚ್ಚಿನ ಅವಧಿ ಸಿಗದ ಕಾರಣ ಒಂದು ಚಾನ್ಸ್ ಸಿಕ್ಕರೂ ಸಿಗಬಹುದು. ಇಲ್ಲವೇ ಅವಧಿ ಮುಗಿದ ಮೇಲೆ ಆಡಳಿತಾಧಿಕಾರಿ ನೇಮಿಸುವ ಸಾಧ್ಯತೆಯೂ ಇದೆ. ಇದೆಲ್ಲದರ ನಡುವೆಯೇ ಸಕಾಲಕ್ಕೆ ಆಡಳಿತ ಮಂಡಳಿ ಚುನಾವಣೆ ನಡೆಸುವ ಬಗ್ಗೆ ಕಾಂಗ್ರೆಸ್ ನಾಯಕರು ಮಾನಸಿಕವಾಗಿ ತಯಾರಿ ನಡೆಸುತ್ತಿರುವುದು ಕಂಡುಬಂದಿದೆ.
ಸಚಿವರಿಗೆ ಸ್ವಂತ ಜಿಲ್ಲೆಯ ಪ್ರತಿಷ್ಠೆ: ಕಳೆದ ಬಾರಿ ತಮ್ಮ ಪುತ್ರನ ವಿರುದ್ಧ ಗೆದ್ದ ಪಿ.ಎಂ.ಪ್ರಸನ್ನ ಅವರನ್ನು ಅಧ್ಯಕ್ಷಗಾದಿಯಿಂದ ಕೆಳಗಿಳಿಸಲು ತಂತ್ರಗಾರಿಕೆ ಮಾಡಿದ್ದ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರಿಗೆ ಸ್ವಂತ ಜಿಲ್ಲೆಯು ಪ್ರತಿಷ್ಠೆಯ ಕಣವಾಗಿದೆ. ಕಳೆದ ಬಾರಿ ಮಾಜಿ ಶಾಸಕರಾಗಿದ್ದ ಕೆ. ವೆಂಕಟೇಶ್ ಅವರು ಈಗ ಸಚಿವರಾಗಿರುವ ಜತೆಗೆ, ಪಶುಸಂಗೋಪನಾ ಖಾತೆಯ ಹೊಣೆಯನ್ನು ಹೊತ್ತಿದ್ದಾರೆ. ಹೀಗಾಗಿ,ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯುವಂತೆ ಮಾಡುವುದು ಸವಾಲಾಗಿದೆ.
ತಮ್ಮದೇ ಟೀಂ ಕಣಕ್ಕಿಳಿಸಲು ಪ್ಲಾನ್: ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಆಗಿರುವ ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿರುವ ಶಾಸಕ ಜಿ.ಡಿ.ಹರೀಶ್ ಗೌಡ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿ, ಗೆಲುವಿಗಾಗಿ ಈಗಿನಿಂದಲೇ ಕಾರ್ಯತಂತ್ರ ಹೆಣೆಯಲು ಸಜ್ಜಾಗಿದ್ದಾರೆ. ಕಳೆದ ಬಾರಿ ತಮ್ಮೊಂದಿಗೆ ಇದ್ದ ಬಿ.ಎನ್.ಸದಾನಂದ, ಎ.ಟಿ.ಸೋಮಶೇಖರ್, ಕೆ.ಎಸ್.ಕುಮಾರ್, ಪಿ. ಎಂ.ಪ್ರಸನ್ನ ಅವರೊಂದಿಗೆ ಇತರರನ್ನು ತಮ್ಮತ್ತ ಸೆಳೆದು ಅಥವಾ ಪ್ರಬಲ ವ್ಯಕ್ತಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿದ್ದಾರೆ. ಇದೇ ರೀತಿ ಶಾಸಕರಾದ ಅನಿಲ್ ಚಿಕ್ಕಮಾದು, ಡಿ.ರವಿಶಂಕರ್,ದರ್ಶನ್ ಧ್ರುವನಾರಾಯಣ ಕೂಡ ತಮ್ಮ ವ್ಯಾಪ್ತಿಯ ಸ್ಥಾನಗಳಿಗೆ ತಮ್ಮ ಆಪ್ತರನ್ನು ಕಣಕ್ಕಿಳಿಸಿ ಹಿಡಿತ ಸಾಽಸುವ ಚಿಂತನೆಯಲ್ಲಿದ್ದಾರೆ ಎಂದು ಹೇಳಲಾಗಿದೆ.
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…
ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…
ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ ಸಿದ್ದಾಪುರ:ಸಿದ್ದಾಪುರ ಪೊಲೀಸ್…
ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ಜ.೩ರಿಂದ ೫ ದಿನಗಳ ಕಾಲ ನಡೆಯಲಿದೆ. ಉಚ್ಚ…