Andolana originals

ಮ.ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ಸಕಲ ಸಿದ್ಧತೆ

ಅ.೨೯ರಿಂದ ನ.೨ರವರೆಗೆ ೫ ದಿನಗಳ ಕಾಲ ಜಾತ್ರೆ ಸಡಗರ; ನ.೨ಕ್ಕೆ ಮಹಾರಥೋತ್ಸವ

ಮಹಾದೇಶ್ ಎಂ.ಗೌಡ
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ  ಬೆಟ್ಟದಲ್ಲಿ ಅಕ್ಟೋಬರ್ ೨೯ರಿಂದ ನವೆಂಬರ್೨ರವರೆಗೆ ಐದು ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಜನರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ.

ದೀಪಾವಳಿ ಜಾತ್ರಾ ಮಹೋತ್ಸವ ಅ.೨೯ ರಂದು ಪ್ರಾರಂಭವಾಗಲಿದ್ದು, ಅಂದು ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸ ಲಾಗು ವುದು. ೩೦ರಂದು ದೀಪಾ ವಳಿ ಪ್ರಯುಕ್ತ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಎಣ್ಣೆ ಮಜ್ಜನ ಸೇವೆ ವಿವಿಧ ಉತ್ಸವಗಳು ನಡೆಯಲಿವೆ.

೩೧ರಂದು ಸ್ವಾಮಿಗೆ ವಿಶೇಷ ಸೇವೆ ಉತ್ಸವ ಗಳು ನಡೆಯಲಿದ್ದು, ನವೆಂಬರ್ ೧ರಂದು ಅಮಾವಾಸ್ಯೆ ವಿಶೇಷ
ಪೂಜೆ ಹಾಗೂ ಉತ್ಸವಗಳು ಜರುಗಲಿವೆ. ನವೆಂಬರ್ ೨ರಂದು ಬೆಳಿಗ್ಗೆ ಮಹಾರಥೋತ್ಸವ ಜರುಗಲಿದ್ದು, ಅದೇ ದಿನ ರಾತ್ರಿ ಅಭಿಷೇಕದ ಪೂಜೆ ಮುಗಿದ ನಂತರ ಕೊಂಡೋತ್ಸವ ನಡೆಯಲಿದೆ. ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಹದೇಶ್ವರ ಬೆಟ್ಟಕ್ಕೆ ಪಾದ ಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿ ಗಳಿಗೆ ತಾಳಬೆಟ್ಟದಿಂದ ಮ.ಬೆಟ್ಟದವರೆಗಿನ ಮಾರ್ಗ ಮಧ್ಯದಲ್ಲಿ ೧೦ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಬೆಟ್ಟದ ಎರಡೂ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಜನರಿಗೆ ಶುದ್ಧ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ದಾಸೋಹ ಭವನದಲ್ಲಿ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದ್ದು ಒಂದು ಬಾರಿಗೆ ೧,೫೦೦ ಜನರು ಪ್ರಸಾದ ಸ್ವೀಕರಿಸಬಹುದಾಗಿದೆ. ಇದಲ್ಲದೆ ಹಳೇ ದಾಸೋಹ ಭವನದ ಬಳಿ ವಿಶೇಷ ದಾಸೋಹ ಕೇಂದ್ರ ತೆರೆದು ದಿನದ ೨೪ ಗಂಟೆಯೂ ದಾಸೋಹ ಏರ್ಪಡಿಸಲಾಗುತ್ತದೆ.

ಈಗಾಗಲೇ ಸುಮಾರು ೬ರಿಂದ ೭ ಲಕ್ಷದವರೆಗೆ ಲಾಡುಗಳನ್ನು ತಯಾರು ಮಾಡಿ ಕೊಳ್ಳಲಾಗುತ್ತಿದೆ. ಈಗಾಗಲೇ ಮೂರೂವರೆ ಲಕ್ಷ ಲಾಡುಗಳನ್ನು ತಯಾರು ಮಾಡಿ ಸಂಗ್ರಹ ಮಾಡಲಾಗಿದೆ. ರಾಜಗೋಪುರದ ಎಡ ಹಾಗೂ ಬಲಭಾಗದಲ್ಲಿ ನೆರಳಿನ ವ್ಯವಸ್ಥೆ, ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲುವ ಸ್ಥಳದಲ್ಲಿ ಹಾಗೂ ದಾಸೋಹ ಮುಂಭಾಗದಲ್ಲಿ ಶಾಮಿಯಾನ ಅಳವಡಿಸಲಾಗಿದೆ. ಬೆಟ್ಟದಲ್ಲಿರುವ ಶೌಚಾಲಯದ ಜೊತೆಗೆ ತಾಳಬೆಟ್ಟದಲ್ಲಿ ೫ ಹಾಗೂ ಮಲೆ ಮಹದೇಶ್ವರ ಬೆಟ್ಟದಲ್ಲಿ ೧ ಮೊಬೈಲ್ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ದೇವಸ್ಥಾನದ ಆವರಣ ಹಾಗೂ ಜನಸಂದಣಿ ಇರುವ ಕಡೆ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲಾಗಿದೆ.

ದೇವಸ್ಥಾನದ ರಾಜಗೋಪುರ ಮುಂಭಾಗ ಮತ್ತಿತರ ಜನಸಂದಣಿ ಇರುವ ಕಡೆ ಸ್ವಚ್ಛತೆ ಕಾಪಾಡಲು ಹೆಚ್ಚು ಪೌರಕಾರ್ಮಿಕ ಸಿಬ್ಬಂದಿ ಗಳನ್ನು ನಿಯೋಜಿಸಲಾಗಿದೆ. ಪಾದಯಾತ್ರೆಯ ಮೂಲಕ ಮ.ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ರಾಜಗೋಪುರದ
ಮಹಾದ್ವಾರದ ಬಳಿ ಪ್ರತ್ಯೇಕ ಕ್ಯೂಲೈನ್, ೬೦ ವರ್ಷ ಮೇಲ್ಪಟ್ಟವರಿಗೆ ಆಲಂಬಾಡಿ ಬಸವೇಶ್ವರ ಸ್ವಾಮಿಯ ಸಮೀಪ ಪ್ರತ್ಯೇಕ ಕ್ಯೂ ಲೈನ್, ಅತಿಥಿ ಗಣ್ಯರಿಗೆ ಗೇಟ್ ನಂಬರ್ ೪ರಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು
ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದ್ದಾರೆ.

ಪೊಲೀಸ್ ಬಂದೋಬಸ್ತ್: ಲಕ್ಷಾಂತರ ಜನರು ಶ್ರೀ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಬ್ಬರು ಡಿವೈಎಸ್ಪಿ, ೭ ಇನ್‌ಸ್ಪೆಕ್ಟರ್, ೩೪ ಎಸ್‌ಐ, ೫೨ ಎಎಸ್‌ಐ, ೨೨೭ ಪೇದೆಗಳು ೩೮ ಮಹಿಳಾ ಪೇದೆಗಳು ೨೩೮ ಗೃಹ ರಕ್ಷಕ ದಳದ ಸಿಬ್ಬಂದಿ, ೩ ಡಿಆರ್, ೧ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ.

 

ದ್ವಿಚಕ್ರ ವಾಹನಗಳಿಗೆ ನಿರ್ಬಂಧ
ಟ್ರಾಫಿಕ್ ಜಾಮ್ ತಡೆಗಟ್ಟಲು ಅ.೨೯ರ ಬೆಳಿಗ್ಗೆ ೬ ಗಂಟೆಯಿಂದ ನವೆಂಬರ್ ೨ರ ಸಂಜೆ ೬ ಗಂಟೆಯವರೆಗೆ ಮ.ಬೆಟ್ಟಕ್ಕೆ ದ್ವಿಚಕ್ರ
ವಾಹನದಲ್ಲಿ ಹೋಗುವುದನ್ನು ನಿರ್ಬಂಽಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬರುವ ಭಕ್ತರಿಗೆ ಕೌದಳ್ಳಿಯಲ್ಲಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇಲ್ಲಿಂದ ಕೆಎಸ್‌ಆರ್‌ಟಿಸಿ ಬಸ್ ಮುಖಾಂತರ ಮಹದೇಶ್ವರ ಬೆಟ್ಟಕ್ಕೆ ತೆರಳಲು
ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.

 

ಕೆಎಸ್‌ಆರ್‌ಟಿಸಿಯಿಂದ ೩೫೦ ಬಸ್…
ಮ.ಬೆಟ್ಟದಲ್ಲಿ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಕೆಎಸ್‌ಆರ್‌ಟಿಸಿ ವತಿಯಿಂದ ೩೫೦ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ವಾಹನಗಳು ಕೆಟ್ಟು ನಿಂತರೆ ದುರಸ್ತಿ ಪಡಿಸಲು ೫೦ ಮಂದಿ ತಾಂತ್ರಿಕ ಸಿಬ್ಬಂದಿಗಳನ್ನು ಕೂಡ ನೇಮಕ ಮಾಡಿಕೊಳ್ಳಲಾಗಿದೆ ಎಂದು ವಿಭಾಗೀಯ ನಿಯಂತ್ರಣ ಅಧಿಕಾರಿ ಅಶೋಕ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

44 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

56 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

1 hour ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago