Andolana originals

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ

ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ

ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದ್ದ ಕೆರೆ ವಸ್ತಿ ನೀರು ಹೋಗುವ ಚರಂಡಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎಂದು ಸಾರ್ವಜನಿಕರುಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಟ್ಟಣದ ಪುರಸಭೆ ವ್ಯಾಪ್ತಿಗೆ ಸೇರಿದ ವಿಶ್ವನಾಥ ಕಾಲೋನಿಯ ಕೆಂಕೆರೆ ನೀರು ಹೋಗುವ ಬೃಹತ್ ಚರಂಡಿ ನಿರ್ಮಾಣ ಕಾಮಗಾರಿಯನ್ನು ಲೋಕೋಪ ಯೋಗಿ ಇಲಾಖೆಯವರು ೮೫ ಲಕ್ಷ ರೂ. ವೆಚ್ಚದಲ್ಲಿ ಗುತ್ತಿಗೆದಾರ ಕೃಷ್ಣರೆಡ್ಡಿ ಅವರ ಮೂಲಕ ನಡೆಸುತ್ತಿದ್ದಾರೆ. ಮಳೆಗಾಲ ಪ್ರಾರಂಭವಾದರೆ ಪ್ರತಿ ಸಾಲಿನಲ್ಲೂ ಏಳೆಂಟು ತಿಂಗಳುಗಳ ಕಾಲ ಕೆಂಕೆರೆಯ ವಸ್ತಿ ನೀರು ಜಲಾವೃತಗೊಳ್ಳುತ್ತಿದ್ದರಿಂದ ಈ ಭಾಗದ ನಿವಾಸಿಗಳು ನರಕಯಾತನೆ ಪಡುತ್ತಿದ್ದರು.

ಇದನ್ನೆಲ್ಲ ಗಮನಿಸಿದ್ದ ಶಾಸಕ ಅನಿಲ್ ಚಿಕ್ಕಮಾದು ನಿವಾಸಿಗಳಿಗೆ ಅನುಕೂಲವಾಗಲೆಂದು ೮೫ ಲಕ್ಷ ರೂ. ವಿಶೇಷ ಅನುದಾನವನ್ನು ಕೊಡಿಸಿದ್ದರು. ಆದರೆ ಲೋಕೋಪಯೋಗಿ ಇಲಾಖೆಯವರು ಮತ್ತು ಗುತ್ತಿಗೆದಾರರು ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಜನರಿಗೆ ಅನುಕೂಲವಾಗುವಂತೆ ಶಾಶ್ವತ ಕಾಮಗಾರಿಯನ್ನು ನಡೆಸದೆ ಬೇಕಾಬಿಟ್ಟಿ ಕಾಮಗಾರಿ ನಡೆಯುತ್ತಿದೆ.

ಸರ್ವೆ ಮಾಡಿಸಿ ಬೌಂಡರಿ ಗುರುತು ಮಾಡಿಕೊಂಡು ಆದಷ್ಟು ನೇರವಾಗಿ ಮತ್ತು ಕೆಸರುಗದ್ದೆ ಆಗಿರುವುದನ್ನು ಸರಿಪಡಿಸಿಕೊಂಡು ಕಾಮಗಾರಿ ನಡೆಯಬೇಕಾಗಿತ್ತು. ಇವುಗಳನ್ನೆಲ್ಲ ನಿರ್ಲಕ್ಷಿಸಿ ಗುತ್ತಿಗೆದಾರ ಮತ್ತು ಅಧಿಕಾರಿಗಳು ಕಾಮಗಾರಿ ನಡೆಸುತ್ತಿದ್ದಾರೆ. ಸಾರ್ವಜನಿಕರು ಈ ಭಾಗದ ಪುರಸಭಾ ಸದಸ್ಯರುಗಳಾದ ಕುಲುಮೆ ರಾಜು, ಐಡಿಯಾ ವೆಂಕಟೇಶ್, ಮಿಲ್ ನಾಗರಾಜು, ಮತ್ತಿತರರಿಗೆ ವಿಚಾರ ತಿಳಿಸಿದಾಗ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರೂ ಮತ್ತೆ ಕಾಮಗಾರಿಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿದ್ದಾರೆ. ಪಟ್ಟಣದಲ್ಲಿರುವ ಕೆಂಕೆರೆ ನೀರು ಕೋಡಿ ಬಿದ್ದಾಗ ನಿರ್ಮಾಣಗೊಳ್ಳುತ್ತಿರುವ ಚರಂಡಿಯಲ್ಲಿ ನೀರು ಹರಿದು ಹೋದಾಗ ಕಾಮಗಾರಿ ಕುಸಿದು ಹೋಗುವ ಸಾಧ್ಯತೆಗಳಿರುವುದರಿಂದ ಲಕ್ಷಾಂತರ ರೂ. ಅನುದಾನ ನೀರುಪಾಲಾಗುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಟ್ಟುನಿಟ್ಟಾಗಿ ಶಾಶ್ವತವಾದಂತಹ ಗುಣಮಟ್ಟದ ಕೆಲಸ ಮಾಡಬೇಕಿದೆ.

” ಕಾರ್ಮಿಕರು ಶಿಥಿಲಗೊಂಡಿರುವ ಜಾಗದಲ್ಲಿ ಕಾಮಗಾರಿ ನಡೆಸುತ್ತಿರುವ ಬಗ್ಗೆ ವಿಚಾರ ತಿಳಿದಿದ್ದು, ಇದನ್ನು ತಡೆಹಿಡಿದು ಸೂಕ್ತವಾದ ಕಾಮಗಾರಿ ನಡೆಸುವಂತೆ ಸೂಚಿಸಲಾಗಿದೆ. ಉತ್ತಮವಾದ ಕಾಮಗಾರಿಯನ್ನು ಮಾಡಿಸಲು ಮುಂದಾಗಿದ್ದೇವೆ.”

-ಸುಬ್ರಹ್ಮಣ್ಯ, ಇಂಜಿನಿಯರ್, ಪಿಡಬ್ಲ್ಯುಡಿ

 

 

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

11 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

11 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

11 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

11 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

12 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

12 hours ago