ಎಚ್.ಎಸ್.ದಿನೇಶ್ ಕುಮಾರ್
ಕುಪ್ಪಣ್ಣ ಪಾರ್ಕ್‌ನಲ್ಲಿ ಪುಷ್ಪ ಲೋಕ ಅನಾವರಣ; ಕಣ್ತುಂಬಿಕೊಂಡ ಸಾರ್ವಜನಿಕರು
ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲ ಪುಷ್ಪ ಪ್ರದರ್ಶನ ಸಾರ್ವಜನಿಕರು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆದಿದೆ.
ಸೋಮವಾರ ಮಧ್ಯಾಹ್ನದಿಂದಲೇ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಸ್ಥಳೀಯರು ಕುಪ್ಪಣ್ಣ ಪಾರ್ಕ್‌ಗೆ ಭೇಟಿ ನೀಡಿ ಫಲ ಪುಷ್ಪ ಪ್ರದರ್ಶನದ ಸೊಬಗನ್ನು ಕಣ್ತುಂಬಿಕೊಂಡರು. ಉದ್ಘಾಟನೆಯ ಮೊದಲ ದಿನವೇ ಫಲಪುಷ್ಪ ಪ್ರದರ್ಶನಕ್ಕೆ ಜನ ಸಾಗರವೇ ಹರಿದು ಬಂದಿತು.
ಮಹಿಳೆಯರು, ಮಕ್ಕಳಾದಿಯಾಗಿ ಸುಮಾರು ೫ ಸಾವಿರಕ್ಕೂ ಹೆಚ್ಚು ಮಂದಿ ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದರು. ಗಾಜಿನ ಮನೆಯಲ್ಲಿ ನಿರ್ಮಿಸಿರುವ ಗಾಂಧಿ ಮಂಟಪ ಹಾಗೂ ಉಪ್ಪಿನ ಸತ್ಯಾಗ್ರಹ ಮಾದರಿ ಮುಂದೆ ಜನರು ಸೆಲ್ಛಿ ತೆಗೆದುಕೊಂಡು ಖುಷಿಪಟ್ಟರು.
ಉದ್ಘಾಟನೆ: ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ದಸರಾ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು. ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಸಂಸದ ಸುನಿಲ್ ಬೋಸ್, ಶಾಸಕರಾದ ಕೆ.ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ, ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ನಿರ್ಮಾಣ ಮಾಡಲಾಗಿರುವ ಗಾಂಧಿ ಮಂಟಪ ಹಾಗೂ ಉಪ್ಪಿನ ಸತ್ಯಾಗ್ರಹದ ಮಾದರಿ ಅಚ್ಚುಕಟ್ಟಾಗಿದೆ. ಇದರೊಟ್ಟಿಗೆ ಜನರಿಗೆ ಭಾವೈಕ್ಯತೆಯ ಸಂದೇಶ ಸಾರುತ್ತದೆ. ಪಂಚ ಗ್ಯಾರಂಟಿ ಕೂಡ ಹೂವಿನಲ್ಲಿ ಸುಂದರವಾಗಿ ಮೂಡಿಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇ ವಪ್ಪ ಮಾತನಾಡಿ, ಈ ಬಾರಿ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಲಕ್ಷಾಂತರ ಜನರು ಈ ಹಬ್ಬದಲ್ಲಿ ಭಾಗಿಯಾಗಲಿದ್ದಾರೆ. ಫಲಪುಷ್ಪ ಪ್ರದರ್ಶನದಲ್ಲಿ ಗಾಂಧಿ ಮಂಟಪ ನಿರ್ಮಿಸಲಾಗಿದೆ. ಈ ಮೂಲಕ ದೇಶದ ಎಲ್ಲ ಧರ್ಮಗಳು ಒಂದೇ ಎಂದು ಸಾರುವ ಉದ್ದೇಶ ನಮ್ಮ ಸರ್ಕಾರದ್ದು ಎಂದು ಹೇಳಿದರು.
ಫಲಪುಷ್ಪ ಪ್ರದರ್ಶನದಲ್ಲಿ ಏನೇನಿದೆ?:
ಆನೆಯ ಮೇಲೆ ಅಂಬಾರಿ, ಡಾಲಿನ್ ಮಾದರಿ, ನಗರಪಾಲಿಕೆಯ ಸ್ವಚ್ಛತೆಯ ಸಂದೇಶ, ಚಾಮುಂಡೇಶ್ವರಿ ಪ್ರತಿಮೆ, ಫಿರಂಗಿ, ನಂದಿ ಮಾದರಿ, ಮಕ್ಕಳಿಗಾಗಿ ಮಿಕ್ಕಿಮೌಸ್, ಅಮ್ಯೂಸ್‌ಮೆಂಟ್ ಪಾರ್ಕ್, ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ , ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಯೋಜನೆಗಳ ಮಾದರಿಗಳು
ಆರ್ಮಿಟ್ರಕ್, ಏರ್‌ಜೆಟ್ ನೌಕೆ ನಿರ್ಮಾಣ: ಆಪರೇಷನ್ ಸಿಂಧೂರದಲ್ಲಿ ಹೋರಾಟ ಮಾಡಿ ದೇಶಕ್ಕೆ ಕೀರ್ತಿ ತಂದು ಕೊಟ್ಟ ಕರ್ನಲ್ ಸೋಫಿಯಾ ಖುರೇಶಿ ಹಾಗೂ ವೂಮಿಕಾ ಸಿಂಗ್ ಅವರಿಗೆ ಗೌರವ ಸಲ್ಲಿಸಲು ಆರ್ಮಿಟ್ರಕ್, ಏರ್‌ಜೆಟ್ ಯುದ್ಧ ನೌಕೆಯನ್ನು ಗುಲಾಬಿ, ಸೇವಂತಿಗೆ ಮತ್ತು ವಿಶಿಷ್ಟ ಹೂಗಳಿಂದ ನಿರ್ಮಿಸಲಾಗಿದೆ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…