Andolana originals

ಮೈಸೂರಿಗೆ ಪ್ರವಾಸಿಗರ ದಾಂಗುಡಿ

ಕೆ.ಬಿ.ರಮೇಶನಾಯಕ

ಅರಮನೆ, ವಸ್ತುಪ್ರದರ್ಶನ, ಮೃಗಾಲಯ, ದೀಪಾಲಂಕಾರ ಕಣ್ತುಂಬಿಕೊಂಡ ಪ್ರವಾಸಿಗರು

ಮೈಸೂರು: ದಸರಾ ಮಹೋತ್ಸವ ಮುಗಿದರೂ ಅರಮನೆ ಸೇರಿದಂತೆ ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹಸ್ರಾರು ಪ್ರವಾಸಿಗರು ಮೈಸೂರಿಗೆ ದಾಂಗುಡಿ ಇಟ್ಟಿದ್ದಾರೆ. ವಾರದ ಮಟ್ಟಿಗೆ ರಜೆ ಹಾಕಿಕೊಂಡು ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬರುತ್ತಿರುವುದರಿಂದ ಎಲ್ಲಿ ನೋಡಿದರೂ ಜನಜಂಗುಳಿ ಕಂಡುಬರುತ್ತಿದೆ.

ಮೃಗಾಲಯದಲ್ಲಿ ನೂಕುನುಗ್ಗಲು: ದಸರಾ ಮುಗಿದ ಬಳಿಕ ಮೂರು ದಿನಗಳು ಸಾಲು ಸಾಲು ರಜೆಗಳು ಇರುವುದರಿಂದ ಪ್ರವಾಸಿಗರ ದಂಡೇ ಮೈಸೂರಿಗೆ ಲಗ್ಗೆ ಇಟ್ಟಿದೆ. ಅರಮನೆಗಿಂತ ಚಾಮರಾಜೇಂದ್ರ ಮೃಗಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಜಮಾಯಿಸಿದ್ದಾರೆ. ಕೌಂಟರ್ ಬಳಿ ಟಿಕೆಟ್ ಪಡೆಯಲು ಸಾವಿರಾರು ಜನರು ಸಾಲುಗಟ್ಟಿದ್ದರಿಂದ ನೂಕುನುಗ್ಗಲು ಉಂಟಾಗಿದೆ.

ಕುಪ್ಪಣ್ಣ ಪಾರ್ಕ್ ರಸ್ತೆ, ಪುರಭವನ, ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣ, ಇಟ್ಟಿಗೆಗೂಡು, ಎಂ.ಜಿ.ರಸ್ತೆ, ಲಲಿತಮಹಲ್ ರಸ್ತೆ ಮೊದಲಾದ ಕಡೆ ವಾಹನಗಳನ್ನು ನಿಲ್ಲಿಸಿ ಬರುತ್ತಿದ್ದ ಜನರು ತಂಡೋಪತಂಡವಾಗಿ ಟಿಕೆಟ್ ಪಡೆದು ಮೃಗಾಲಯದಲ್ಲಿನ ಪ್ರಾಣಿ ಪಕ್ಷಿಗಳನ್ನು ವೀಕ್ಷಿಸಿದರು.

ಚಾಮುಂಡಿಬೆಟ್ಟದಲ್ಲೂ ಫುಲ್ ರಷ್: ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ದೇವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲು ಜನ ಸಾಲುಗಟ್ಟಿ ನಿಂತಿದ್ದರು. ಸಾಲು ಸಾಲು ವಾಹನಗಳಿಂದ ಚಾಮುಂಡಿಬೆಟ್ಟದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಪರ ದಾಡುವಂತಾಯಿತು. ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸಪಟ್ಟರು.

ವಸ್ತು ಪ್ರದರ್ಶನಕ್ಕೆ ಲಗ್ಗೆ: ಚಾಮುಂಡಿಬೆಟ್ಟ, ಅರಮನೆ, ಮೃಗಾಲಯ ವೀಕ್ಷಿಸಿದ ಜನರು ಸಂಜೆಯಾಗುತ್ತಲೇ ದಸರಾ ವಸ್ತು ಪ್ರದರ್ಶನಕ್ಕೆ ಲಗ್ಗೆ ಇಟ್ಟಿದ್ದರು. ಬೆಳಿಗ್ಗೆಯಿಂದ ಸಂಜೆವರೆಗೆ ಸಾಧಾರಣವಾಗಿಪ್ರವೇಶ ಮಾಡಿದರೂ ೫ ಗಂಟೆಯ ನಂತರ ದುಪ್ಪಟ್ಟು ಪ್ರವಾಸಿಗರು ವಸ್ತುಪ್ರದರ್ಶನವನ್ನು ವೀಕ್ಷಿಸಿದರು. ಬೃಂದಾವನಕ್ಕೂ ಭೇಟಿ: ಮೈಸೂರು ನಗರದ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಜನರು, ರಾತ್ರಿ ಕೆಆರ್‌ಎಸ್‌ಗೆ ಭೇಟಿ ನೀಡಿ ಕಾರಂಜಿ ವೀಕ್ಷಿಸಿ ಖುಷಿಪಟ್ಟರು.

ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್:  ಅರಮನೆ ಸುತ್ತಮುತ್ತಲ ಮಾರ್ಗಗಳಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದರಿಂದ ಆಗಿಂದಾಗ್ಗೆ ಸಂಚಾರ ಅಸ್ತವ್ಯಸ್ತವಾಗಿ ಸಾರ್ವಜನಿಕರು ಪರದಾಡುವಂತಾಯಿತು. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತ, ವಸ್ತು ಪ್ರದರ್ಶನದ ಬಳಿ ಸಾಲು ಸಾಲು ವಾಹನಗಳು ಬರುತ್ತಿದ್ದರಿಂದ ಜಾಮ್ ಆಗುತ್ತಿತ್ತು.

 

 

ಆಂದೋಲನ ಡೆಸ್ಕ್

Recent Posts

ಉತ್ತರ ಕೊಡಗಿನ ಕಾಫಿ ತೋಟಗಳಲ್ಲಿ ಬಿಳಿಕಾಂಡಕೊರಕ ಕಾಟ

ಲಕ್ಷ್ಮೀಕಾಂತ್ ಕೊಮಾರಪ್ಪ ಅರೇಬಿಕಾ ಕಾಫಿ ತಳಿಯನ್ನೇ ಹೆಚ್ಚಾಗಿ ಕಾಡುತ್ತಿರುವ ರೋಗ ಫಸಲು ನೀಡುವ ಗಿಡಗಳೇ ನಾಶ, ಬೆಳೆಗಾರರಿಗೆ ಆರ್ಥಿಕ ಸಂಕಷ್ಟ …

3 mins ago

ಸ್ವಾತಿ ಮಳೆಯ ಅಬ್ಬರ; ರಾಗಿ ಬೆಳೆಗೆ ವರದಾನ

ಭೇರ್ಯ ಮಹೇಶ್ ಕೆ.ಆರ್.ನಗರ-ಸಾಲಿಗ್ರಾಮ ಅವಳಿ ತಾಲ್ಲೂಕುಗಳ ರೈತರ ಮೊಗದಲ್ಲಿ ಮಂದಹಾಸ ಕೆ.ಆರ್.ನಗರ: ಸ್ವಾತಿ ಮಳೆಯ ಅಬ್ಬರದಿಂದಾಗಿ ಮೈಸೂರು ಜಿಲ್ಲೆಯ ಕೆ.ಆರ್…

31 mins ago

ಕನ್ನಡಿಗರನ್ನು ಕಡೆಗಣಿಸಿದರೆ ಕಠಿಣ ಕ್ರಮ: ಐಟಿ ಕಂಪನಿಗಳಿಗೆ ಡಿಕೆಶಿ ಎಚ್ಚರಿಕೆ!

ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ…

19 hours ago

ಜನವರಿಯೊಳಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ಡಿಸೆಂಬರ್‌ ಅಂತ್ಯ ಅಥವಾ…

20 hours ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 9,457 ಕ್ಯುಸೆಕ್‌…

20 hours ago