ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು ಮೈಸೂರು ಮಹಾನಗರ ಪಾಲಿಕೆ ಗುರುವಾರ ತೆರವು ಮಾಡಿದೆ.
‘ಜಂಬೂ ಸವಾರಿ ಮಾರ್ಗದ ಮರ ತೆರವಾಗುತ್ತಾ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ‘ಆಂದೋಲನ’ದ ವರದಿಗೆ ಸ್ಪಂದಿಸಿದ ಮೈಸೂರು ಮಹಾನಗರ ಪಾಲಿಕೆ ತೋಟಗಾರಿಕೆ ವಿಭಾಗದ ಸಹಾಯಕ ನಿರ್ದೇಶಕ ಮೋಹನ್ ಅವರು ಬೃಹತ್ ಮರದ ಕಾಂಡ ತೆರವು ಮಾಡಲು ಕಾಳಜಿ ವಹಿಸಿದ್ದಾರೆ.
ಎರಡು ಜಂಬೂ ಸವಾರಿ ಮೆರವಣಿಗೆಯನ್ನು ಕಂಡಿದ್ದ ಬೃಹತ್ ಮರದ ಕಾಂಡವನ್ನು ಸುಮಾರು ೫ ಗಂಟೆಗಳ ಕಾಲ ಸಾಹಸ ಪಟ್ಟು ಜೆಸಿಬಿ ಹಾಗೂ ದೊಡ್ಡ ಗರಗಸ ಬಳಸಿ ಮರವನ್ನು ತುಂಡು ತುಂಡಾಗಿ ಕತ್ತರಿಸಿ ಟ್ರಕ್‌ನಲ್ಲಿ ವಿದ್ಯಾರಣ್ಯಪುರಂನ ಸುಯೇಜ್ ಫಾರಂಗೆ ಸಾಗಿಸಲಾಯಿತು. ಕಾರ್ಯಚರಣೆಯಲ್ಲಿ ೭ ಮಂದಿ ಸಿಬ್ಬಂದಿ ಭಾಗವಹಿಸಿ ತೆರವು ಕಾರ್ಯ ಯಶಸ್ವಿಗೊಳಿಸಿದ್ದಾರೆ
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…