ಎಚ್. ಡಿ. ಕೋಟೆ: ತಾಲ್ಲೂಕು ಉಪಾಧ್ಯಾಯರ ಪತ್ತಿನ ಸಹಕಾರ ಸಂಘದ ವತಿಯಿಂದ ಷೇರುದಾರ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
೨೦೨೩-೨೪ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು. ಮಕ್ಕಳು ತಮ್ಮ ಅಂಕಪಟ್ಟಿಯ ಪ್ರತಿ, ಆಧಾರ್ ಕಾರ್ಡ್ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಸೆ. ೧೯ರೊಳಗೆ ಅರ್ಜಿ ಸಲ್ಲಿಸಬಹುದು ಎಂದುಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





