Andolana originals

ಕೆ.ಜಿ.ಹಳ್ಳಿ ಆಸ್ಪತ್ರೆಗೆ ವೈದ್ಯರನ್ನು ನೇಮಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಜಿ.ಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 5 ವರ್ಷಗಳಿಂದ ವೈದ್ಯರೇ ಇಲ್ಲದೇ ವೈದ್ಯಕೀಯ ಸೌಲಭ್ಯಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ.
20 ವರ್ಷಗಳ ಹಿಂದೆ ಲಕ್ಷಾಂತರ ರೂ. ವ್ಯಯಿಸಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅಲ್ಲದೆ ಆಗಾಗ್ಗೆ ಆಸ್ಪತ್ರೆಯ ನವೀಕರಣವನ್ನೂ ಮಾಡಲಾಗಿದೆ. ಆದರೆ ಕಳೆದ 5 ವರ್ಷಗಳಿಂದ ಇಲ್ಲಿಗೆ ಯಾವುದೇ ವೈದ್ಯರು
ನಿಯೋಜನೆಯಾಗದೆ ಸಾರ್ವಜನಿಕರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಾದರೂ ಎಚ್.ಡಿ.ಕೋಟೆ ಅಥವಾ ಮೈಸೂರಿಗೆ ಹೋಗಿಬರಬೇಕಿದೆ. ಸುಮಾರು 4 ಸಾವಿರ ಜನಸಂಖ್ಯೆಯನ್ನು ಹೊಂದಿರುವ ಈ ಗ್ರಾಮದಲ್ಲಿ ಬಹುಪಾಲು ಬಡ ಕುಟುಂಬಗಳಿವೆ. ಆದ್ದರಿಂದ ಈ ಆಸ್ಪತ್ರೆಗೆ ವೈದ್ಯರನ್ನು ನೇಮಿಸಿ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಸಾಕಷ್ಟು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಕ್ಷೇತ್ರದ ಶಾಸಕರು ಈ ಬಗ್ಗೆ ಗಮನಹರಿಸಿ ಈ ಆಸ್ಪತ್ರೆಗೆ ವೈದ್ಯರೊಬ್ಬರನ್ನು ನೇಮಕ ಮಾಡಬೇಕಿದೆ.

-ಕೆ.ಎಸ್.ಸುರೇಶ್, ಕೆ.ಜಿ.ಹಳ್ಳಿ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

7 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

11 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago