ಭೇರ್ಯ ಮಹೇಶ್
ಕಂದಾಯ ವಸೂಲಿ, ಸಮರ್ಪಕ ಕುಡಿಯುವ ನೀರು ಸರಬರಾಜಿನಲ್ಲಿ ವಿಶೇಷ ಸಾಧನೆ
ಕೆ.ಆರ್.ನಗರ: ಡಿಜಿಟಲ್ ಗ್ರಂಥಾಲಯ,ಸ್ವಚ್ಛತೆ, ನೈರ್ಮಲ್ಯ, ಕಂದಾಯ ವಸೂಲಿ, ಸಮರ್ಪಕ ಕುಡಿಯುವ ನೀರು ಸರಬರಾಜು ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ನೀಡುವ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ತಾಲ್ಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.
ನರೇಗಾ ಯೋಜನೆ ಅನುಷ್ಠಾನದಲ್ಲಿ ಉತ್ತಮ ಸಾಧನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನದ ಸಮರ್ಪಕ ಬಳಕೆ, ಸಿಸಿ ಕ್ಯಾಮೆರಾ ಅಳವಡಿಕೆ, ಸೋಲಾರ್ ಆಧಾರಿತ ವಿದ್ಯುತ್ ಬಳಕೆ, ಕೂಸಿನ ಮನೆ, ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ನರೇಗಾ ಯೋಜನೆಯ ಫಲಾನುಭವಿ ಕುಟುಂಬದ ಎಲ್ಲ ಸದಸ್ಯರಿಗೂ ಬ್ಯಾಂಕ್ ಖಾತೆ, ಖಾತೆಗೆ ಆಧಾರ್ ಜೋಡಣೆ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ೨೦೨೪-೨೫ನೇ ಸಾಲಿನ ಗಾಂಽ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗುವ ಮೂಲಕ ಇತರ ಗ್ರಾಪಂಗಳಿಗೆ ಮಾದರಿಯಾಗಿದೆ.
ಪ್ರಗತಿ, ಸಾಂಸ್ಥಿಕ ಮತ್ತು ಪ್ರಗತಿಯ ಸೂಚ್ಯಂಕಗಳ ಆಧಾರದ ಮೇಲೆ ರಾಜ್ಯದ ಎಲ್ಲ ತಾಲ್ಲೂಕುಗಳ ಒಂದೊಂದು ಗ್ರಾಮ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ ಆಯ್ಕೆ ಮಾಡುತ್ತದೆ.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ, ೧೫ನೇ ಹಣಕಾಸು, ರಾಜ್ಯ ಹಣಕಾಸು ಯೋಜನೆ ಮತ್ತು ಇತರ ಯೋಜನೆಗಳ ಅನುದಾನಗಳನ್ನು ಗ್ರಾಮ ಪಂಚಾಯಿತಿಗಳು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಈ ಮೂಲಕ ಗ್ರಾಮೀಣ ಜನರ ಜೀವನವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ನಿಯಮಿತವಾಗಿ ಸಾಮಾನ್ಯ ಸಭೆ, ವಾರ್ಡ್ ಸಭೆ ಮತ್ತು ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಗ್ರಾಮೀಣ ಪ್ರದೇಶದ ನಾಗರಿಕರಿಗೆ ಅಗತ್ಯ ಮೂಲ ಸೌಕರ್ಯ ಮತ್ತು ಸೇವೆಗಳನ್ನು ಒದಗಿಸಿ ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾ ಫಲಾನುಭವಿಗಳಿಗೆ ತಲುಪಿಸಬೇಕು. ಇದನ್ನು ಅರ್ಜುನಹಳ್ಳಿ ಗ್ರಾಪಂ ಸಮರ್ಪಕವಾಗಿ ನಿರ್ವಹಿ ಸಿರುವುದರಿಂದ ಹಾಗೂ ಪಾರದರ್ಶಕ ಆಡಳಿತ ಜಾರಿ ಗೊಳಿಸಿರುವುದರಿಂದ ಅರ್ಜುನಹಳ್ಳಿ ಗ್ರಾಪಂ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ.
ಅ.೨ರಂದು ಪ್ರದಾನ: ಅ.೨ರ ಗಾಂಧಿ ಜಯಂತಿ ದಿನದಂದು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಪಂಚಾಯಿತಿಗೆ ೫ ಲಕ್ಷ ರೂ. ಪ್ರೋತ್ಸಾಹಧನ, ಪಾರಿತೋಷಕ ಹಾಗೂ ಅಭಿನಂದನಾ ಪತ್ರ ನೀಡಲಾಗುತ್ತದೆ.
” ಗ್ರಾಪಂನ ಎಲ್ಲ ಸದಸ್ಯರು ಹಾಗೂ ತಾಲ್ಲೂಕಿನ ಎಲ್ಲ ಅಧಿಕಾರಿಗಳ ಸಹಕಾರದಿಂದ ಗಾಂಧಿ ಗ್ರಾಮ ಪ್ರಶಸ್ತಿ ಲಭಿಸಿದೆ. ಮುಂದೆಯೂ ಇದೇ ರೀತಿ ಎಲ್ಲ ಸದಸ್ಯರೊಟ್ಟಿಗೆ ಅಽಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತೇವೆ. ಗ್ರಾಮದ ಜನರಿಗೆ ಸಕಲ ರೀತಿಯ ಅನುಕೂಲಗಳನ್ನೂ ಪಂಚಾಯಿತಿಯಿಂದ ಕಲ್ಪಿಸಿಕೊಡಲಾಗುವುದು.”
-ಮಹದೇವಪ್ಪ, ಅಧ್ಯಕ್ಷರು, ಅರ್ಜುನಹಳ್ಳಿ ಗ್ರಾ.ಪಂ.
” ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಸಂತಸ ತಂದಿದೆ. ಸಿಬ್ಬಂದಿ, ಅಧ್ಯಕ್ಷರಾದಿಯಾಗಿ ಎಲ್ಲಾ ಸದಸ್ಯರ ಸಹಕಾರ ಹಾಗೂ ಹಿರಿಯ ಅಽಕಾರಗಳ ಮಾರ್ಗದರ್ಶನದಿಂದ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗಿದೆ. ಮತ್ತಷ್ಟು ಅಭಿವೃದ್ಧಿ ಕಾಮಗಾರಿ ಮಾಡಲು ಈ ಪ್ರಶಸ್ತಿಯು ಪ್ರೇರಣೆಯಾಗಿದೆ.”
-ಜಿ.ಟಿ.ಸಂತೋಷ್, ಪಿಡಿಒ, ಅರ್ಜುನಹಳ್ಳಿ ಗ್ರಾ.ಪಂ.




