ಮಡಿಕೇರಿ: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೋಮವಾರಪೇಟೆ ಠಾಣಾ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಕರ್ಕಳ್ಳಿ ಗ್ರಾಮದ ಬಾಡಿಗೆ ಮನೆವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸೋಮವಾರಪೇಟೆ ವೃತ್ತ ನಿರೀಕ್ಷಕ ಮುದ್ದು ಮಾದೇವ ನೇತೃತ್ವದ ತಂಡ ದಾಳಿ ನಡೆಸಿದೆ.
ಈ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಓರ್ವ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದು, ಆರೋಪಿಗಳಾದ ಕರ್ಪುಸ್ವಾಮಿ, ರಾಜೇಶ್ ಹಾಗೂ ಜಾನಕಿ ಎಂಬವರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ





