ಮಡಿಕೇರಿ: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೋಮವಾರಪೇಟೆ ಠಾಣಾ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಕರ್ಕಳ್ಳಿ ಗ್ರಾಮದ ಬಾಡಿಗೆ ಮನೆವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸೋಮವಾರಪೇಟೆ ವೃತ್ತ ನಿರೀಕ್ಷಕ ಮುದ್ದು ಮಾದೇವ ನೇತೃತ್ವದ ತಂಡ ದಾಳಿ ನಡೆಸಿದೆ.
ಈ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಓರ್ವ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದು, ಆರೋಪಿಗಳಾದ ಕರ್ಪುಸ್ವಾಮಿ, ರಾಜೇಶ್ ಹಾಗೂ ಜಾನಕಿ ಎಂಬವರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ
ಕೈವ್: ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಮಾರಕ ಡ್ರೋನ್ ದಾಳಿ ನಡೆದಿದೆ. ಉಕ್ರೇನ್ನ ಡ್ನಿಪ್ರೊ ನಗರದ ಮುಖ್ಯ ರೈಲು ನಿಲ್ದಾಣದ ಮೇಲೆ…
ಬೆಂಗಳೂರು: ಚಳಿಗಾಲ ಆರಂಭವಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟದ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ವಾಯು ಗುಣಮಟ್ಟ…
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರವೂ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಅಕ್ಟೋಬರ್ 29ರಂದು…
ನವದೆಹಲಿ: ಅರ್ನಬ್ ಚಂಡಮಾರುತದ ಅಬ್ಬರ ತಗ್ಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ವ್ಯವಸ್ಥೆ ರೂಪುಗೊಂಡಿದೆ. ದಕ್ಷಿಣ ಅಂಡಮಾನ್ ಸಮುದ್ರ ಹಾಗೂ…
ಪ್ರತಿವರ್ಷ ಸೆಪ್ಟೆಂಬರ್ ಐದನೇ ತಾರೀಕು ಶಿಕ್ಷಕರನ್ನು ಹೊಗಳಲು ಇರುವ ದಿನ ಎಂದು ಕರೆಯಬಹುದು. ಆ ದಿನ ದೇಶದ ಎಲ್ಲೆಡೆ ತುಂಬಾನೆ…
ಮೈಸೂರು ರಾಜಮನೆತನವು ರಾಜ್ಯದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಇತಿಹಾಸದ ಪುಟಗಳಲ್ಲಿ…