ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು , ಇದರ ಸಂಪೂರ್ಣ ಕಾರ್ಯಾಚರಣೆಯನ್ನು ಮತ್ತು ಕ್ಷಣ ಕ್ಷಣದ ಬೆಳವಣಿಗೆಗಳನ್ನು ಮುಖ್ಯವಾಹಿನಿಗಳಿಗಿಂತಲೂ ಪ್ರಾಮಾಣಿಕವಾಗಿ, ವಸ್ತುನಿಷ್ಠವಾಗಿ ವರದಿ ಮಾಡಿ ಜನರ ಮುಂದಿಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನಾರ್ಹ.
ನ್ಯಾಯಪರವಾಗಿ ವರದಿ ಮಾಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ಏಕಾಏಕಿ ಈ ರೀತಿ ಮಾರಣಾಂತಿಕ ಹಲ್ಲೆ ಮಾಡಿರುವುದು ಸರಿಯಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ರೀತಿ ಗೂಂಡಾಗಿರಿ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಹಾಗೂ ಇದರ ಹಿಂದೆ ಯಾರ ಪ್ರಭಾವ ಕೆಲಸ ಮಾಡಿದೆ ಎಂಬುದನ್ನೂ ಸಹ ಜನರಿಗೆ ತಿಳಿಸುವುದು ಅಗತ್ಯವಾಗಿದೆ. ಧರ್ಮಸ್ಥಳದ ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೂ ಕರ್ನಾಟಕ ಸರ್ಕಾರವು ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಅವರಿಗೆ ಭದ್ರತೆ ಒದಗಿಸಬೇಕಿದೆ.
– ಎಂ. ಪಿ.ದರ್ಶನ್ ಚಂದ್ರ , ಮುಕ್ಕಡಹಳ್ಳಿ, ಚಾಮರಾಜನಗರ ತಾ





