Andolana originals

ಓದುಗರ ಪತ್ರ | ಯೂಟ್ಯೂಬರ್ ಗಳ ಮೇಲಿನ ಹಲ್ಲೆ ಖಂಡನಾರ್ಹ

ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು , ಇದರ ಸಂಪೂರ್ಣ ಕಾರ್ಯಾಚರಣೆಯನ್ನು ಮತ್ತು ಕ್ಷಣ ಕ್ಷಣದ ಬೆಳವಣಿಗೆಗಳನ್ನು ಮುಖ್ಯವಾಹಿನಿಗಳಿಗಿಂತಲೂ ಪ್ರಾಮಾಣಿಕವಾಗಿ, ವಸ್ತುನಿಷ್ಠವಾಗಿ ವರದಿ ಮಾಡಿ ಜನರ ಮುಂದಿಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನಾರ್ಹ.

ನ್ಯಾಯಪರವಾಗಿ ವರದಿ ಮಾಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ಏಕಾಏಕಿ ಈ ರೀತಿ ಮಾರಣಾಂತಿಕ ಹಲ್ಲೆ ಮಾಡಿರುವುದು ಸರಿಯಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ರೀತಿ ಗೂಂಡಾಗಿರಿ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಹಾಗೂ ಇದರ ಹಿಂದೆ ಯಾರ ಪ್ರಭಾವ ಕೆಲಸ ಮಾಡಿದೆ ಎಂಬುದನ್ನೂ ಸಹ ಜನರಿಗೆ ತಿಳಿಸುವುದು ಅಗತ್ಯವಾಗಿದೆ. ಧರ್ಮಸ್ಥಳದ ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೂ ಕರ್ನಾಟಕ ಸರ್ಕಾರವು ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಅವರಿಗೆ ಭದ್ರತೆ ಒದಗಿಸಬೇಕಿದೆ.

– ಎಂ. ಪಿ.ದರ್ಶನ್ ಚಂದ್ರ , ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago