Andolana originals

ಓದುಗರ ಪತ್ರ: ಆನ್‌ಲೈನ್ ಗೇಮಿಂಗ್ ನಿಷೇಧಿಸಿ

ಇತ್ತೀಚೆಗೆ ಮೊಬೈಲ್, ಕಂಪ್ಯೂಟರ್‌ಗಳಿಗೆ ಜೋತುಬಿದ್ದಿರುವ ಯುವ ಸಮೂಹ ಆನ್‌ಲೈನ್ ಗೇಮಿಂಗ್‌ಗಳಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್ ಬೆಟ್ಟಿಂಗ್ ಗೇಮ್ಗಳು ಯುವ ಸಮೂಹವನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ.

ಇತ್ತೀಚೆಗೆ ‘ಮೆಲ್‌ಬೆಟ್’ ಎಂಬ ಹೊಸ ಆನ್‌ಲೈನ್‌ ಬೆಟ್ಟಿಂಗ್ ಆಟವು ಪ್ರಾರಂಭವಾಗಿದ್ದು, ಅನೇಕ ಭಾಗಗಳಲ್ಲಿ ಇದರ ಜಾಹೀರಾತಿನ ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಇದೊಂದೇ ಅಲ್ಲದೆ ಇಂತಹ ನೂರಾರು ಆನ್‌ಲೈನ್ ಆಟಗಳು ಜಾಹೀರಾತುಗಳ ಮೂಲಕ ಯುವ ಸಮೂಹವನ್ನು ಸೆಳೆಯುತ್ತಿದ್ದು, ಕೆಲ ಸಿನಿಮಾ ನಟ-ನಟಿಯರೂ ಈ ಆಟಗಳನು ಪ್ರಮೋಟ್ ಮಾಡುವ ಮೂಲಕ ಪ್ರಚೋದನೆ ನೀಡುತ್ತಿದ್ದಾರೆ.

ಯುವ ಸಮೂಹವನ್ನೇ ಟಾರ್ಗೆಟ್ ಮಾಡಿಕೊಂಡಿರುವ ಈ ಗೇಮಿಂಗ್ ಈ ಆ್ಯಪ್‌ಗಳು ಅವರಲ್ಲಿ ಸುಲಭವಾಗಿ ಹಣ ಗಳಿಸಬಹುದು ಎಂಬ ಆಸೆಯನ್ನು ಹುಟ್ಟಿಸಿ ಈ ಗೇಮಿಂಗ್ ದಂಧೆಗೆ ಸಿಲುಕಿಸಿಕೊಂಡು ಹಣ ಕಸಿಯುತ್ತಿವೆ. ಇಂತಹ ಗೇಮಿಂಗ್‌ಗಳಿಂದ ಹಣ ಕಳೆದುಕೊಂಡ ಯುವ ಸಮೂಹ ಮತ್ತೆ ಹಣ ಗಳಿಸಲು ಅಡ್ಡ ದಾರಿ ಹಿಡಿಯುವ ಸಾಧ್ಯತೆಗಳಿರುತ್ತವೆ. ಇವು ಅಪಾಯಕಾರಿ ಆಟಗಳು ಎಂದು ಗೊತ್ತಿದ್ದರೂ ಇವುಗಳನ್ನು ಪ್ರಚಾರ ಮಾಡಲು ಮತ್ತು ಆಡಿಸಲು ಅನುಮತಿ ನೀಡಿರುವುದು ವಿಷಾದಕರ ಸಂಗತಿ. ಈ ಬಗ್ಗೆ ಸರ್ಕಾರ ಕೂಡಲೇ ಗಮನಹರಿಸಿ ಆನ್‌ ಲೈನ್ ಬೆಟ್ಟಿಂಗ್ ಗೇಮ್‌ಗಳನ್ನು ನಿಷೇಧಿಸಬೇಕು.

-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

5 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

5 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

5 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

5 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

5 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

5 hours ago