* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ
*ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ.
* ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ
* ಹೂಕುಂಡಗಳಿಗೆ ಬೆಂಕಿ ಹಚ್ಚುವಾಗ ಅಂತರ ಕಾಪಾಡಬೇಕು
* ಅನಾಹುತ ಸಂಭವಿಸಿದಲ್ಲಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಬೇಕು
* ಆಕಸ್ಮಿಕವಾಗಿ ಕಣ್ಣಿಗೆ ಗಾಯವಾದರೆ ವೈದ್ಯರ ಸಲಹೆ ಪಡೆಯದೆ ಯಾವುದೇ ಕಣ್ಣಿನ ಡ್ರಾಪ್‌ಗಳನ್ನು ಬಳಸಬಾರದು
ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ವಿಭಾಗದಲ್ಲಿ ೧೫ ಹಾಸಿಗೆಗಳು ಸಿದ್ಧ: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಿದ ಸಂದರ್ಭದಲ್ಲಿ ಅನಾಹುತವಾದಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು. ಆಸ್ಪತ್ರೆಯ ಕಲ್ಲು ಕಟ್ಟಡದ ಸುಟ್ಟಗಾಯಗಳ ವಿಭಾಗದಲ್ಲಿ ೧೫ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ದಿನದ ೨೪ ಗಂಟೆಗಳೂ ವೈದ್ಯರು ಲಭ್ಯವಿರಲಿದ್ದಾರೆ.
” ಕಳೆದ ೪ ವರ್ಷಗಳಿಂದ ಪಟಾಕಿ ಅನಾಹುತದ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಹೆಚ್ಚಿನ ಪ್ರಕರಣಗಳು ದಾಖಲಾಗಿಲ್ಲ. ಪಟಾಕಿ ಸಿಡಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿರುವುದರಿಂದ ಅನಾಹುತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೂ ಗಾಯಗೊಂಡವರಿಗಾಗಿ ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಅಗತ್ಯವಿದ್ದಲ್ಲಿ ಸಂಪರ್ಕಿಸಬಹುದು.”
-ಡಾ.ಶೋಭಾ, ವೈದ್ಯಕೀಯ ಅಧೀಕ್ಷಕರು, ಕೆ.ಆರ್.ಆಸ್ಪತ್ರೆ





