‘ದುನಿಯಾ’ ಚಿತ್ರದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಕಾಲಿಟ್ಟ ನಟ ವಿಜಯ್ ಕುಮಾರ್ ಸ್ಯಾಂಡಲ್‌ವುಡ್ ಸಲಗ ಎದ್ದೇ ಖ್ಯಾತಿ ಪಡೆದ ನಟ. ಅನೇಕ ಜನಪ್ರಿಯ ಸಿನಿಮಾಗಳನ್ನು ನೀಡುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ವಿಜಯ್ ‘ಸಲಗ’ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ತಮ್ಮ ಛಾಪು ಮೂಡಿಸಿದ್ದು, ಅವರು ನಿರ್ದೇಶಕನಾಗಿ ಹಾಗೂ ನಟನಾಗಿ ಅಭಿನಯಿಸಿ ಇತ್ತೀಚೆಗೆ ತೆರೆಕಂಡ ‘ಭೀಮ’ ಸಾಮಾಜಿಕ ಕಳಕಳಿಯ ಒಂದು ಅದ್ಭುತ ಸಿನಿಮಾ ಜತೆಗೆ ಯುವ ಸಮೂಹ ನೋಡಲೇ ಬೇಕಾದ ಸಿನಿಮಾ ಎಂದರೆ ತಪ್ಪಾಗಲಾರದು. ಇತ್ತೀಚೆಗೆ ನಗರ ಪ್ರದೇಶಗಳಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದೆ. ಗಾಂಜಾ, ಡ್ರಗ್ಸ್, ಬೀಡಿ, ಸಿಗರೇಟುಗಳು ಸಿಗುವಷ್ಟೇ ಸುಲಭವಾಗಿ ಯುವ ಸಮೂಹದ ಅದರಲ್ಲಿಯೂ ವಿದ್ಯಾರ್ಥಿಗಳ ಕೈ ಸೇರುತ್ತಿವೆ. ಇವುಗಳ ಚಟಕ್ಕೆ ಬಿದ್ದು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಈ ವಿಚಾರವನ್ನೇ ಕೇಂದ್ರವಾಗಿಟ್ಟುಕೊಂಡು ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಅಪಾಯಕಾರಿ ಡ್ರಗ್ಸ್ ಹೇಗೆ ಯುವ ಸಮೂಹವನ್ನು ತಲುಪುತ್ತಿವೆ, ಇದನ್ನು ನಿಯಂತ್ರಿಸಬೇಕಾದ ಆಡಳಿತ ವ್ಯವಸ್ಥೆ ಕಂಡೂ ಕಾಣದಂತೆ ವರ್ತಿಸುತ್ತಿರುವ ಬಗ್ಗೆ ಭೀಮ ಸಿನಿಮಾದಲ್ಲಿ ಎಳೆಎಳೆಯಾಗಿ ಬಿಚ್ಚಿಡಲಾಗಿದೆ. ಈ ಸಿನಿಮಾ ಒಂದು ಕಥೆ ಎನ್ನುವುದಕ್ಕಿಂತಲೂ ನಮ್ಮ ನಿಜ ಜೀವನದಲ್ಲಿ ನಡೆಯುವ ಒಂದು ಭಾಗ ಎನ್ನುವಂತಿದೆ.
ಇಂತಹ ಅದ್ಭುತ ಸಿನಿಮಾವನ್ನು ಯುವ ಸಮೂಹ ವೀಕ್ಷಿಸಬೇಕು. ಇದಕ್ಕಾಗಿ ಭೀಮ ಚಿತ್ರದ ನಿರ್ಮಾಪಕ, ನಿರ್ದೇಶಕ, ನಟ ವಿಜಯ್ ಕುಮಾರ್ ಮತ್ತು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಸರ್ಕಾರದ ಅನುಮತಿ ಪಡೆದು ಕನಿಷ್ಠ ಒಂದು ದಿನದ ಮಟ್ಟಿಗಾದರೂ ಕಾಲೇಜು ವಿದ್ಯಾರ್ಥಿಗಳಿಗೆ ಈ ಸಿನಿಮಾದ ಉಚಿತ ಪ್ರದರ್ಶನ ಏರ್ಪಡಿಸಬೇಕು. ಸಾಧ್ಯವಾದರೆ ಬೇರೆ ಬೇರೆ ಭಾಷೆಗಳಿಗೂ ಡಬ್ಬಿಂಗ್ ಮಾಡಿ ಇತರೆ ರಾಜ್ಯಗಳಲ್ಲಿಯೂ ಬಿಡುಗಡೆ ಮಾಡಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…