Andolana originals

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್

ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ

ಭೇರ್ಯ: ಭಾರತದ ನಿಜವಾದ ಅಭಿವೃದ್ಧಿ ಗ್ರಾಮಗಳ ಅಭ್ಯುದಯದಲ್ಲಿ ಅಡಗಿದೆ ಎಂಬ ಗಾಂಧೀಜಿ ಅವರ ನಿಲುವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪರಿಶ್ರಮಿಸಿದ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮ ಪಂಚಾಯಿತಿಗೆ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.

೨೦೨೨-೨೩ನೇ ಸಾಲಿನಲ್ಲೂ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಭೇರ್ಯ ಗ್ರಾಮ ಪಂಚಾಯಿತಿ ಆಯ್ಕೆಯಾಗಿತ್ತು. ಬೆಂಗಳೂರಿನಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿ ಗ್ರಾಮ ಪುರಸ್ಕಾರವನ್ನು ನೀಡಿ ಗೌರವಿಸಿ, ೫ ಲಕ್ಷ ರೂ. ಅನುದಾನದ ಚೆಕ್ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿತ್ತು.

೨೦೨೪-೨೫ನೇ ಸಾಲಿನಲ್ಲಿ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ಕಂದಾಯ ವಸೂಲಿ, ಸಮರ್ಪಕ ಕುಡಿಯುವ ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಮಾಡಲಾಗಿದ್ದು, ಇದರ ಜೊತೆಗೆ ನರೇಗಾ ಯೋಜನೆ ಅನುಷ್ಠಾನದಲ್ಲೂ ಉತ್ತಮ ಸಾಧನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಯಾದ ಅನುದಾನದ ಸಮರ್ಪಕ ಬಳಕೆ, ಸಿಸಿ ಕ್ಯಾಮೆರಾ ಅಳವಡಿಕೆ, ಸೋಲಾರ್ ಆಧಾರಿತ ವಿದ್ಯುತ್ ಬಳಕೆ, ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ನರೇಗಾ ಯೋಜನೆಯ ಫಲಾನುಭವಿ ಕುಟುಂಬದ ಎಲ್ಲ ಸದಸ್ಯರಿಗೂ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ಭೇರ್ಯ ಗ್ರಾಮ ಪಂಚಾಯಿತಿ ಸತತ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಇತರೆ ಗ್ರಾಮ ಪಂಚಾಯಿತಿಗಳಿಗೆ ಮಾದರಿಯಾಗಿದೆ.

ಕೆಲವು ಆಡಳಿತ ಮತ್ತು ಆರ್ಥಿಕ ಮಾನದಂಡಗಳ ಆಧಾರದ ಮೇಲೆ ಗ್ರಾಮ ಪಂಚಾಯಿತಿ ಸಾಧಿಸುವ ಶೇ.೯೦ರಿಂದ ಶೇ.೯೫ರಷ್ಟು ಸಾಧನೆಯನ್ನು ಮೌಲ್ಯಮಾಪನ ಮಾಡಿ ಅದಕ್ಕೆ ಸೂಕ್ತ ಪ್ರೋತ್ಸಾಹಧನ ನೀಡುವುದೇ ಗಾಂಧಿ ಗ್ರಾಮ ಪುರಸ್ಕಾರ. ರಾಜ್ಯದಲ್ಲಿ ಉತ್ತಮ ಕಾರ್ಯ ಮಾಡಿರುವ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ, ಉತ್ತೇಜನಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಭೇರ್ಯ ಗ್ರಾಮ ಪಂಚಾಯತಿ ಗ್ರಾಮಸಭೆಯ ನಡಾವಳಿಗಳನ್ನು ಪಂಚತಂತ್ರ ತಂತ್ರಾಂಶಕ್ಕೆ ಅಳವಡಿಸಿರುವುದು ಕೂಡ ಗಾಂಧಿ ಗ್ರಾಮ ಪುರಸ್ಕಾರ ಲಭಿಸಲು ಮುಖ್ಯ ಕಾರಣವಾಗಿದೆ.

” ಭೇರ್ಯ ಗ್ರಾಮ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಸಂತಸತಂದಿದೆ. ಸಿಬ್ಬಂದಿ, ಅಧ್ಯಕ್ಷರಾದಿಯಾಗಿ ಎಲ್ಲಾ ಸದಸ್ಯರ ಸಹಕಾರ ಹಾಗೂ ಹಿರಿಯ ಅಧಿಕಾರಗಳ ಮಾರ್ಗದರ್ಶನದಿಂದ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗಿದೆ. ಮತ್ತಷ್ಟು ಅಭಿವೃದ್ಧಿ ಕಾಮಗಾರಿ ಮಾಡಲು ಈ ಪ್ರಶಸ್ತಿಯು ಪ್ರೇರಣೆ ನೀಡಿದೆ.”

-ಮಮತ, ಪಿಡಿಒ, ಭೇರ್ಯ ಗ್ರಾ.ಪಂ.

” ತಾಲ್ಲೂಕಿನ ಜನಪ್ರತಿನಿಧಿಗಳು, ಗ್ರಾಪಂನ ಎಲ್ಲ ಸದಸ್ಯರೂ ಹಾಗೂ ಎಲ್ಲ ಅಧಿಕಾರಿಗಳ ಸಹಕಾರದಿಂದ ಎರಡನೇ ಬಾರಿಗೆ ಗಾಂಧಿ ಗ್ರಾಮ ಪ್ರಶಸ್ತಿ ಲಭಿಸಿದೆ. ಮುಂದೆಯೂ ಇದೇ ರೀತಿ ಎಲ್ಲ ಸದಸ್ಯರೊಟ್ಟಿಗೆ ಅಧಿಕಾರಿಗಳ ಮಾರ್ಗ ದರ್ಶನದಲ್ಲಿ ಕಾರ್ಯ ನಿರ್ವಹಿಸಿದರೆ ಗ್ರಾಮದ ಜನರಿಗೆ ಸಕಲ ರೀತಿಯ ಅನುಕೂಲಗಳನ್ನೂ ಪಂಚಾಯಿತಿಯಿಂದ ಕಲ್ಪಿಸಿಕೊಡಬಹುದಾಗಿದೆ.”

-ಎ.ಎನ್.ರವಿ, ತಾ.ಪಂ. ಇಒ, ಸಾಲಿಗ್ರಾಮ ತಾ.

 

 

 

ಆಂದೋಲನ ಡೆಸ್ಕ್

Recent Posts

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

12 mins ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

41 mins ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

1 hour ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

1 hour ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

6 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

6 hours ago