Andolana originals

ಕೊಳೆತ ತ್ಯಾಜ್ಯದಿಂದ ಭುವನಗಿರಿ ಗ್ರಾಮಸ್ಥರಿಗೆ ನರಕಯಾತನೆ

ಕೆ.ಬಿ.ಶಂಶುದ್ಧೀನ್

ರೋಗ ಹರಡುವ ಭೀತಿಯ ಜೊತೆಗೆ ಉಸಿರಾಟಕ್ಕೆ ಸಮಸ್ಯೆ ಆರೋಪ: ಸೂಕ್ತ ಕ್ರಮಕ್ಕೆ ಆಗ್ರಹ

ಕುಶಾಲನಗರ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿಯ ಕಸ ವಿಲೇವಾರಿ ಘಟಕದಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯ ಕಸಗಳನ್ನು ಸಂಗ್ರಹಿಸಿ ನಿರ್ವಹಣೆ ಮಾಡಲಾಗುತ್ತಿದೆ. ಕಸ ವಿಲೇವಾರಿ ಘಟಕ ಪ್ರಾರಂಭವಾದಾಗಿನಿಂದಲೂ ದುರ್ವಾಸನೆಯ ಸಮಸ್ಯೆ ಇದ್ದು, ಎರಡು ತಿಂಗಳಿನಿಂದ ತ್ಯಾಜ್ಯ ಕೊಳೆತು ದುರ್ವಾಸನೆ ಬೀರುತ್ತಿದ್ದು, ಉಸಿರಾಟಕ್ಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಗ್ರಾಮಸ್ಥರು ಆರೋಪಿಸಿದ್ದಾರೆ.

ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ನಿತ್ಯವೂ ಸಂಗ್ರಹವಾಗುವ ಲೋಡ್‌ಗಟ್ಟಲೇ ತ್ಯಾಜ್ಯಗಳು, ಮಳೆಯಿಂದ ಕೊಳೆತು ನಾರುತ್ತಿದೆ.

ಕಸದ ತ್ಯಾಜ್ಯ ಸಮರ್ಪಕವಾಗಿ ನಿರ್ವಹಣೆಯಾಗದ ಕಾರಣ ಭುವನಗಿರಿ ಗ್ರಾಮಸ್ಥರು ನರಕಯಾತನೆ ಅನುಭವಿಸುವಂತಾಗಿದೆ. ಉಸಿರಾಟಕ್ಕೆ ಶುದ್ಧ ಆಮ್ಲಜನಕ ದೊರಕದ ಮಟ್ಟಿಗೆ ಇಲ್ಲಿನ ಕಸ ತ್ಯಾಜ್ಯ ಗಬ್ಬುನಾರುತ್ತಿದೆ ಎಂದು ಆರೋಪಿಸಿದ್ದಾರೆ.

೧೫ ವರ್ಷಗಳ ಹಿಂದೆ ನಿರ್ಮಾಣ ಮಾಡಿದ ತ್ಯಾಜ್ಯ ನಿರ್ವಹಣಾ ಘಟಕದಿಂದ ಕೇವಲ ಭುವನಗಿರಿ ಗ್ರಾಮಸ್ಥರು ಮಾತ್ರವಲ್ಲದೆ ಸಮೀಪವಿರುವ ಕಣಿವೆ ಗ್ರಾಮಸ್ಥರು ಕೂಡ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ನಿತ್ಯವೂ ನಾಲ್ಕು ಟಿಪ್ಪರ್ ಲಾರಿ ಲೋಡುಗಳಷ್ಟು ಕಸ ಹಾಗೂ ತ್ಯಾಜ್ಯಗಳು ಸಂಗ್ರಹವಾಗುವ ಕಸ ವಿಲೇವಾರಿ ಘಟಕದಲ್ಲಿ ಅತ್ಯಾಧುನಿಕ ಯಂತ್ರಗಳನ್ನು ಬಳಸಿಕೊಂಡು ಸಮರ್ಪಕವಾಗಿ ಕಸ ವಿಲೇವಾರಿ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿ ಕೊಂಡು ಬರುತ್ತಲೇ ಇದ್ದಾರೆ. ಪುರಸಭೆ ವ್ಯವ ಸ್ಥಿತವಾಗಿ ತ್ಯಾಜ್ಯ  ನಿರ್ವಹಣೆ ಮಾಡದಿದ್ದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ

ಅವೈಜ್ಞಾನಿಕ ಕಾಮಗಾರಿ..?: ಭುವನಗಿರಿ ಗ್ರಾಮದ ಕಸ ವಿಲೇವಾರಿ ಘಟಕದಲ್ಲಿ ಯಂತ್ರಗಳನ್ನು ಅಳವಡಿಸಲು ಬೇಕಾದ ಹೊರಾಂಗಣ ಭವನವನ್ನು ಸಮಾರು ೫೦ ಲಕ್ಷ ರೂ. ವ್ಯಯಿಸಿ ನಿರ್ಮಿಸಿದ್ದಾರೆ. ಆದರೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮಾಡಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು, ಬಳಕೆಗೆ ಮುನ್ನವೇ ಮಳೆಯ ನೀರು ನಿಂತಿದೆ. ನೋಡುಗರಿಗೆ ಕೆರೆಯೋಪಾದಿಯಲ್ಲಿ ಕಾಣುತ್ತಿದೆ. ಆದಷ್ಟು ಬೇಗನೆ ಈ ಬಗ್ಗೆ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

” ನೊಣ, ಸೊಳ್ಳೆಗಳ ಕಾಟದಿಂದ ಮನೆಯಲ್ಲಿ ನೆಮ್ಮದಿಯಿಂದ ಆಹಾರ ಸೇವನೆ ಮಾಡಲೂ ಆಗುತ್ತಿಲ್ಲ. ಸಂಬಂಽಸಿದ ಅಧಿಕಾರಿಗಳಿಗೆ ನಮ್ಮ ಸಮಸ್ಯೆ ಅರ್ಥವಾಗುತ್ತಿಲ್ಲ. ಸ್ಥಳಕ್ಕೆ ಭೇಟಿ ನೀಡಿದರೆ ನಾವು ಹೇಗೆ ಜೀವಿಸುತ್ತಿದ್ದೇವೆ ಎಂದು ತಿಳಿಯುತ್ತದೆ. ದಯವಿಟ್ಟು ನಮ್ಮ ಸಮಸ್ಯೆಗೆ ಸ್ಪಂದಿಸಬೇಕು.”

-ಸುರೇಶ್, ಸ್ಥಳೀಯ ನಿವಾಸಿ

” ಭುವನಗಿರಿಯ ಕಸ ವಿಲೇವಾರಿ ಘಟಕದ ಮುಂಬದಿಯ ರಸ್ತೆಯಲ್ಲಿ ವಾಸಿಸುವ ಸಾರ್ವಜನಿಕರು ಸಮಸ್ಯೆಯತ್ತ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಗಮನಹರಿಸಬೇಕು. ತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು.”

-ಕಾವ್ಯಶ್ರೀ, ಗ್ರಾಮದ ವಿದ್ಯಾರ್ಥಿನಿ

” ಕಸ ವಿಲೇವಾರಿಗೆ ೩.೨೬ ಕೋಟಿ ರೂ.ಗಳ ಟೆಂಡರ್ ಕರೆಯಲಾಗಿದೆ. ಮಳೆಯ ಕಾರಣದಿಂದ ಕೆಲಸ ಪ್ರಾರಂಭವಾಗಿಲ್ಲ. ಮಳೆ ನಿಂತ ಕೂಡಲೇ ಕೆಲಸ ಪ್ರಾರಂಭವಾಗಲಿದೆ. ಜನರಿಗೆ ಸಮಸ್ಯೆ ಆಗದಂತೆ ಪುರಸಭೆ ಕಾರ್ಯನಿರ್ವಹಿಸಲಿದೆ.”

-ಗಿರೀಶ್, ಮುಖ್ಯಾಧಿಕಾರಿ, ಕುಶಾಲನಗರ ಪುರಸಭೆ

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

13 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

14 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

14 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

17 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

23 hours ago